ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್‌ಗಳು ಆಗುವುದೇಕೆ? ಕೇಂದ್ರ ಉತ್ತರಿಸಲಿ: ಸಿದ್ದರಾಮಯ್ಯ

Date:

ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಈ ಕುರಿತು ಉತ್ತರಿಸಲಿ‌. ಸೋಮವಾರದ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಮೈಸೂರಿನ ತಮ್ಮ ನಿವಾಸದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, “ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್ ಆಗುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ತನಿಖೆ ಮಾಡಲಿ. ಅಮಾಯಕರ ಜೀವಹಾನಿ ಬೇಸರದ ಸಂಗತಿ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

15 ರಂದು ದೆಹಲಿಗೆ

“ಪಕ್ಷದ ಹಿರಿಯ ನಾಯಕರಾದ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನ.15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಾಸ್ ಬರುವ ಅಂದಾಜಿದೆ. ಹೈಕಮಾಂಡ್ ಸಮಯ ಕೊಟ್ಟರೆ ಭೇಟಿ ಆಗುವೆ. ಇನ್ನೂ ಹೈ‌ಕಮಾಂಡ್ ಸಮಯ ಕೇಳಿಲ್ಲ” ಎಂದು ತಿಳಿಸಿದರು.

ಮಾನವ-ಹುಲಿ ಸಂಘರ್ಷದ ಬಗ್ಗೆ ಗಂಭೀರ ಚರ್ಚೆ

“ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಏನು ಕಾರಣ? ವೈಜ್ಞಾನಿಕ‌ ಕಾರಣ ನೀಡಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು.‌ ಲಾಂಟೆನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಲು ಸೂಚಿಸಲಾಗಿದೆ” ಎಂದು ಹೇಳಿದರು.

“ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ‌ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು. ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ. ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7000 ಅರ್ಜಿಗಳಲ್ಲಿ 5900 ಅರ್ಜಿಗಳು ತಿರಸ್ಕರಿಸಲ್ಪಟ್ಟಿದೆ. ಇದಕ್ಕೆ ಕಾರಣ ಕೊಡಲು ಅಧಿಕಾರಿಗೆ ಸೂಚಿಸಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...