ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ: ಡಿ ಕೆ ಶಿವಕುಮಾರ್ ಪ್ರಶ್ನೆ

Date:

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ ಬಿಜೆಪಿ ಏಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

- Advertisement -

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ‘ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ’ ಎಂದು ಕೇಳಿದಾಗ ಅವರು ಉತ್ತರಿಸಿ, “ಇದು ಕರ್ನಾಟಕ ಸರ್ಕಾರದ ತೀರ್ಮಾನ. ಇದರಿಂದ ಬಿಜೆಪಿಗೆ ಆತಂಕವೇಕೆ? ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಬಿಜೆಪಿ ಅವಧಿಯಲ್ಲಿ ಮಾಡಿರುವ ಕಾನೂನು ಇದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ನಾವು ತೀರ್ಮಾನಿಸಿದ್ದೇವೆ. ಈ ತೀರ್ಮಾನದಿಂದ ನಿಮಗೆ ಗಾಬರಿ ಯಾಕೆ? ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಯಾಕೆ ವರ್ತಿಸುತ್ತಿದ್ದೀರಿ. ನಾವು ಲೋಕಸಭೆ ಚುನಾವಣೆಗಳನ್ನು ಪರಿಶೀಲನೆ ಮಾಡಿದ್ದೇವೆ. ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸುವಂತೆ ಸ್ಥಳೀಯ ಸಂಸ್ಥೆ ಚುನಾವಣೆ ಮಾಡುತ್ತಿದ್ದೇವೆ. ಕೇಂದ್ರ ಚುನಾವಣಾ ಆಯೋಗ ಅವರ ತೀರ್ಮಾನದಂತೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಚುನಾವಣೆ ನಡೆಸಲಿದೆ” ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆಯಲ್ಲೂ ಮತಪತ್ರ ಬಳಸುತ್ತೀರಾ ಎಂದು ಕೇಳಿದಾಗ, “ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ತೀರ್ಮಾನ ಮಾಡಿದೆ” ಎಂದು ಹೇಳಿದರು.

ರೈತರಿಗೆ ಉತ್ತಮ ಪರಿಹಾರ

ಜಿಬಿಐಟಿ ವಿಚಾರವಾಗಿ ರೈತರ ವಿರುದ್ಧ ನೀವು ಜೋರು ಧ್ವನಿಯಲ್ಲಿ ಮಾತನಾಡಿದ್ದೀರಿ ಎಂದು ಕೇಳಿದಾಗ, “ಅವರು ನಮ್ಮ ಜನ. ನಮ್ಮ ರೈತರು. ನಮ್ಮ ಊರಿನವರು. ನನಗೆ ಹಕ್ಕಿದೆ. ಅವರು ಯಾವ ಪಕ್ಷದವರು, ಯಾವ ಬಾವುಟ ಹಾಕಿದ್ದರು ಎಂದು ನನಗೆ ಗೊತ್ತಿದೆ. ಈ ಯೋಜನೆಗೆ 82% ರೈತರು ತಮ್ಮ ಜಮೀನು ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಉಳಿದ 18% ರೈತರು ಮಾತ್ರ ವಿರೋಧ ಮಾಡುತ್ತಿದ್ದಾರೆ. ನಮ್ಮ ರೈತರಿಗೆ ಅತ್ಯುತ್ತಮ ಪರಿಹಾರವನ್ನು ನೀಡಿದ್ದೇನೆ. ನಾನು ಇಡೀ ರಾಜ್ಯವನ್ನು ಗಮನದಲ್ಲಿಟ್ಟುಕೊಂಡು ಈ ಪರಿಹಾರ ರೂಪಿಸಬೇಕು. ಹೀಗಾಗಿ ಇದಕ್ಕಿಂತ ಹೆಚ್ಚಿನ ಹಣ ನೀಡಲು ಸಾಧ್ಯವಿಲ್ಲ. ಈ ಯೋಜನೆ ಬೇಡವಾಗಿದ್ದರೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪನವರು ಅವರೇ ತಮ್ಮ ಸರ್ಕಾರದಲ್ಲಿ ಡಿನೋಟಿಫಿಕೇಷನ್ ಮಾಡಬಹುದಿತ್ತಲ್ಲವೇ. ಈ ಯೋಜನೆ ನೋಟಿಫಿಕೇಶನ್ ಮಾಡಿದ್ದು ನಾನಲ್ಲ, ಅವರು. ಸುಪ್ರೀಂ ಕೋರ್ಟಿನಲ್ಲಿ ಅಂತಿಮ ತೀರ್ಮಾನವಾಗುವವರೆಗೂ ನಾವು ಡಿನೋಟಿಫಿಕೇಷನ್ ಮಾಡಲು ಆಗುವುದಿಲ್ಲ. ಅವರು ಕೋರ್ಟ್ ನಿಂದ ಏನಾದರೂ ಮಾಡಿಕೊಂಡು ಬರಲಿ” ಎಂದು ತಿಳಿಸಿದರು.

ಎಲ್ಲ ಪಕ್ಷದವರ ಮೇಲಿನ ಪ್ರಕರಣ ರದ್ದು

ತಮ್ಮ ಬೆಂಬಲಿಗರ ಮೇಲಿನ ಕೇಸ್ ರದ್ದುಗೊಳಿಸುವ ತೀರ್ಮಾನದ ಬಗ್ಗೆ ಕೇಳಿದಾಗ, “ನಾವು ಬಿಜೆಪಿ ಹಾಗೂ ಕಾಂಗ್ರೆಸಿಗರ ಮೇಲಿದ್ದ ಅನೇಕ ಕೇಸ್ ರದ್ದುಗೊಳಿಸಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಬೆಂಬಲಿಗರ ಮೇಲೆ ಬಲವಂತವಾಗಿ ಹಾಕಿದ್ದ ಪ್ರಕರಣಗಳನ್ನು ರದ್ದುಗೊಳಿಸಿದ್ದೇವೆ. ಕೋವಿಡ್ ಸಮಯದಲ್ಲಿ ನನ್ನ ಹಾಗೂ ಸಿಎಂ ವಿರುದ್ಧ ಕೇಸ್ ಹಾಕಿದ್ದರು. ರಾಜ್ಯ, ರೈತರು, ಭಾಷೆಗಾಗಿ ಮಾಡಿರುವ ಪ್ರತಿಭಟನೆ ಮಾಡಿದವರ ಮೇಲೆ ಹಾಕಿರುವ ಕೇಸ್ ಹಿಂಪಡೆದಿದ್ದೇವೆ. ನಾನು ಬಂಧನವಾಗಿದ್ದ ಇಡಿ ಪ್ರಕರಣ ವಜಾಗೊಂಡಿದೆ. ನನಗೆ ಆಗಿರುವ ಅನ್ಯಾಯ ಸರಿ ಮಾಡುವವರು ಯಾರು? ನಾನು ಜೈಲಿಂದ ಬಿಡುಗಡೆಯಾದ ಬಳಿಕ ಭವ್ಯ ಸ್ವಾಗತಿ ಸಿಕ್ಕಿತು ಎಂದು ಬಹಳ ದೊಡ್ಡ ಚಿಂತಕರು, ಭಾಷಣಕಾರರು ಮಾತನಾಡಿದ್ದರಲ್ಲ, ನನ್ನ ಪ್ರಕರಣ ವಜಾಗೊಳಿಸಿದ ನಂತರ ಏಕೆ ಅಭಿನಂದಿಸಲಿಲ್ಲ? ಈ ವಿಚಾರವಾಗಿ ಹೆಚ್ಚಿನ ಚರ್ಚೆ ಬೇಡ. ನಾವು ರೈತ ಸಂಘ, ಬಿಜೆಪಿ, ಚಳುವಳಿಗಾರರ ಮನವಿಯನ್ನು ಸ್ವೀಕರಿಸಿ ಎಲ್ಲಾ ಪಕ್ಷದವರ ಮೇಲಿದ್ದ ಕೇಸ್ ರದ್ದುಗೊಳಿಸಿದ್ದೇವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...