ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ: ಸಿದ್ದರಾಮಯ್ಯ ಪ್ರಶ್ನೆ

Date:

ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿಯವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ 250 ಮಿಲಿಯನ್ ಡಾಲರ್‌ಗಳಷ್ಟು ನೆರವು ನೀಡಿರುವುದನ್ನು ನೋಡಿದಾಗ ಸಹಜವಾಗಿಯೇ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ ಎನ್ನುವ ಪ್ರಶ್ನೆ ಮೂಡುತ್ತದೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಸ್ವತಂತ್ರ ದೇಶವಾಗಿ ರೂಪು ಪಡೆದ ದಿನದಿಂದಲೂ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಿಗೆ ನೆರವು ನೀಡುವ ಪರಂಪರೆಯನ್ನು ಭಾರತ ಮುಂದುವರಿಸಿಕೊಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರ ಬೇರೆ ದೇಶಗಳ ಕಷ್ಟಕ್ಕೆ ನೆರವಾಗುವುದರ ಬಗ್ಗೆ ನಮ್ಮ ವಿರೋಧ ಇಲ್ಲ. ಆದರೆ ಇದೇ ಔದಾರ್ಯ ಮತ್ತು ಕಾಳಜಿಯನ್ನು ನಮ್ಮದೇ ದೇಶದ ರಾಜ್ಯಗಳ ಬಗ್ಗೆ ಯಾಕೆ ಪ್ರಧಾನಿ ನರೇಂದ್ರ ಮೋದಿಯವರು ತೋರುತ್ತಿಲ್ಲ” ಎಂದು ಕೇಳಿದ್ದಾರೆ.

“ಕರ್ನಾಟಕ ರಾಜ್ಯ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದು ರಾಜ್ಯ ಸರ್ಕಾರ ತನ್ನ ಶಕ್ತಿ ಮೀರಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವೇ ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಮಾಡಿಕೊಂಡು ಹೋಗಿ ವರದಿ ನೀಡಿದೆ. ರಾಜ್ಯ ಸರ್ಕಾರ ಕೂಡಾ ಸಮೀಕ್ಷೆ ನಡೆಸಿ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ನಮ್ಮ ಕೃಷಿ ಮತ್ತು ಕಂದಾಯ ಸಚಿವರಿಬ್ಬರೂ ದೆಹಲಿಗೆ ಭೇಟಿ ನೀಡಿ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಇಷ್ಟೆಲ್ಲ ಪ್ರಯತ್ನದ ಹೊರತಾಗಿಯೂ ಕೇಂದ್ರ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಭೆಯನ್ನೂ ಕರೆದಿಲ್ಲ. ಭೇಟಿಗೆ ಅವಕಾಶ ನೀಡಬೇಕೆಂದು ಪ್ರಧಾನ ಮಂತ್ರಿಯವರಿಗೆ ಬರೆದ ಪತ್ರಕ್ಕೂ ಇಲ್ಲಿಯವರೆಗೆ ಪ್ರತಿಕ್ರಿಯೆ ಇಲ್ಲ” ಎಂದು ತಾರತಮ್ಯ ಬಿಚ್ಚಿಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬರಗಾಲದಿಂದಾಗಿ ರಾಜ್ಯದ 48.19 ಲಕ್ಷ ಎಕರೆ ಕೃಷಿ ಭೂಮಿಯಲ್ಲಿ ಆಗಿರುವ ಬೆಳೆನಷ್ಟಕ್ಕಾಗಿ ಕನಿಷ್ಠ ರೂ.4,663 ಕೋಟಿ ರೂಪಾಯಿ ಪರಿಹಾರ ನೀಡುವ ಜೊತೆಯಲ್ಲಿ ಒಟ್ಟು ಬರ ಪರಿಹಾರಕ್ಕಾಗಿ ರೂ.18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ. ಆದರೆ, ಇಲ್ಲಿಯವರೆಗೆ ನಯಾಪೈಸೆ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...