ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

Date:

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ ಮೂಡಿಗೆರೆ ಭಾಗಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುತ್ತಿರುವ ಅರಣ್ಯ ಇಲಾಖೆಯ ಕ್ರಮವನ್ನು ವಿರೋಧಿಸಿ, ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು ಸ್ಪೀಕರ್ ಕಚೇರಿಯಲ್ಲಿ ನವೆಂಬರ್ 23ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಸುಮಾರು 50 ರಿಂದ 60 ಕಾಡಾನೆಗಳನ್ನು ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ತತ್ಕೊಳ ಮೀಸಲು ಅರಣ್ಯ ಮತ್ತು ಭದ್ರಾ ಅಭಯಾರಣ್ಯದ ಕಡೆಗೆ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಾರದೆ ನಡೆಸಲಾಗಿದೆ ಎಂದು ನಯನಾ ಮೋಟಮ್ಮ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನೂ ಓದಿ: ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಇದರಿಂದ ಮೂಡಿಗೆರೆ, ಶೃಂಗೇರಿ, ಚಿಕ್ಕಮಗಳೂರು ಮತ್ತು ತರೀಕೆರೆ ಭಾಗದ ರೈತರ ಕಾಫಿ ಹಾಗೂ ಅಡಿಕೆ ತೋಟಗಳಿಗೆ ಹಾನಿಯಾಗುವ ಜೊತೆಗೆ ಸಾರ್ವಜನಿಕರ ಪ್ರಾಣಕ್ಕೂ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಹಾಗೆಯೇ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಕೂಡಾ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ನವೆಂಬರ್ 23ರಂದು ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಅವರ ಕಚೇರಿಗೆ ನಯನಾ ಮೋಟಮ್ಮ ರಾಜೀನಾಮೆ ಪತ್ರದೊಂದಿಗೆ ತೆರಳಿದ್ದರು. ಆದರೆ ಸ್ಪೀಕರ್ ಕಚೇರಿಯಲ್ಲಿ ಇಲ್ಲದ ಕಾರಣ, ಅವರ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಅವರಿಗೆ ಪತ್ರ ನೀಡಲು ಮುಂದಾದರು.

ಆದರೆ ನಿಯಮಗಳ ಪ್ರಕಾರ ತಮಗೆ ರಾಜೀನಾಮೆ ಪತ್ರ ಸ್ವೀಕರಿಸಲು ಅಧಿಕಾರವಿಲ್ಲ ಎಂದು ಸ್ಪೀಕರ್ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಲ್ಲದೆ, ನಿಗದಿತ ನಮೂನೆಯಲ್ಲಿ ರಾಜೀನಾಮೆ ಸಲ್ಲಿಸುವಂತೆ ಸ್ಪೀಕರ್ ಸೂಚಿಸಿದ್ದು, ನಾಳೆ ಸ್ಪೀಕರ್ ಅವರನ್ನು ಖುದ್ದು ಭೇಟಿಯಾಗಿ ಪತ್ರ ಸಲ್ಲಿಸುವುದಾಗಿ ನಯನಾ ಮೋಟಮ್ಮ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ಅಭಿವೃದ್ಧಿ, ಸಿಎ ನಿವೇಶನಗಳ ಅತಿಕ್ರಮಣ ತೆರವಿಗೆ ಆದ್ಯತೆ: ರುದ್ರಪ್ಪ ಅಂಗಡಿ

ನಗರದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ...

ಶಿವಮೊಗ್ಗ | ಸರ್ಕಾರಿ ಜಮೀನುಗಳ ಸದ್ಬಳಕೆಗೆ ಪೀಸ್ ಆರ್ಗನೈಸೇಷನ್ ಆಗ್ರಹ

ಸರ್ಕಾರಿ ಜಮೀನುಗಳನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ಸದುಪಯೋಗಪಡಿಸಿಕೊಂಡು, ಶಿಕ್ಷಣ ಹಾಗೂ ವಸತಿ...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಕರವೇ ಸಿಂಹ ಸೇನೆ ಆಗ್ರಹ

ರಾಜ್ಯದ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ...