ವನ್ಯಜೀವಿ-ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಈಶ್ವರ ಖಂಡ್ರೆ ಸೂಚನೆ

Date:

ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಸ್ಥಳೀಯ ಜನಪ್ರತಿನಿಧಿಗಳು ಎನ್‌ಜಿಒ, ಪರಿಸರ ತಜ್ಞರನ್ನು ಒಳಗೊಂಡ ರಾಜ್ಯ ಮಟ್ಟದ ವನ್ಯಜೀವಿ ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

- Advertisement -

ಸರಗೂರು ತಾಲೂಕಿನಲ್ಲಿ ಹುಲಿ ದಾಳಿಯ 2 ಪ್ರಕರಣ ನಡೆದಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡು, ಮತ್ತೊಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬಂಡೀಪುರದಲ್ಲಿಂದು ವನ್ಯಜೀವಿ ವಿಭಾಗದ ಉನ್ನತಾಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಈ ಕಾರ್ಯಪಡೆ ಕಾಡಿನಂಚಿನ ಗ್ರಾಮಗಳ ಜನರಿಗೆ ವನ್ಯ ಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಹೇಗೆ? ವನ್ಯಜೀವಿಗಳ ವಿಚಾರದಲ್ಲಿ ಏನೆಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬ ಜಾಗೃತಿ ಮೂಡಿಸಲಿದ್ದಾರೆ. ಜೊತೆಗೆ ಕಾಡಿನಂಚಿನ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ವನ್ಯಜೀವಿ ವಿಚಾರದಲ್ಲಿ ಹೇಗೆ ಸಂವೇದನಾಶೀಲರಾಗಿರಬೇಕು ಎಂಬ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಸ್ನೇಹಸೇತುವಾಗಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ” ಎಂದರು.

“ಆನೆ, ಹುಲಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ಸೆರೆ ಕಾರ್ಯಾಚರಣೆ ವೇಳೆ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ಪಾಲಿಸಬೇಕು. 155 ಸೆಕ್ಷನ್ ಅಡಿಯಲ್ಲಿ ನಿರ್ಬಂಧಕಾಜ್ಞೆ ಜಾರಿ ಮಾಡಿ ಕಾರ್ಯಾಚರಣೆ ನಡೆಸಬೇಕು. ಅರಣ್ಯ ಸಿಬ್ಬಂದಿ, ಅರಣ್ಯಾಧಿಕಾರಿಗಳು ಅರಣ್ಯದಂಚಿನ ಗ್ರಾಮಸ್ಥರೊಂದಿಗೆ ಸೌಹಾರ್ದತೆ ಕಾಪಾಡಿಕೊಳ್ಳಬೇಕು. ಸ್ನೇಹಪರವಾಗಿರಿಬೇಕು ಮತ್ತು ಆನೆ, ಹುಲಿ ವಸತಿ ಪ್ರದೇಶದಲ್ಲಿ ಬಂದರೆ ಕೂಡಲೇ ಮೈಕ್ ಗಳ ಮೂಲಕ ಜನರಿಗೆ ಮಾಹಿತಿ ನೀಡಬೇಕು. ಸಾಮಾಜಿಕ ತಾಣಗಳ ಮೂಲಕ ಸಕಾಲದಲ್ಲಿ ಮಾಹಿತಿ ರವಾನಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್‌ಗಷ್ಟೇ ಅಲ್ಲ, ಸಮಾಜಕ್ಕೆ ಅರ್ಥವಾಗಿದೆಯೇ ಆರ್‌ಎಸ್‌ಎಸ್ ಅಜೆಂಡಾ?

“ಥರ್ಮಲ್ ಕ್ಯಾಮೆರಾ, ಡ್ರೋನ್ ಸೇರಿದಂತೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ವನ್ಯಜೀವಿಗಳು ವಸತಿ ಪ್ರದೇಶಗಳ ಬಳಿ ಮತ್ತು ಕಾಡಿನಂಚಿನ ಗ್ರಾಮಗಳ ಹೊಲ ಗದ್ದೆಗಳ ಸಮೀಪ ಕಾಣಿಸಿಕೊಂಡಾಗ ತತ್ ಕ್ಷಣವೇ ಜನರಿಗೆ ವಾಟ್ಸ್ ಅಪ್ ಸಂದೇಶಗಳ ಮೂಲಕ ಮಾಹಿತಿ ನೀಡಲು ಸಮಗ್ರ ಕಮಾಂಡ್ ಸೆಂಟರ್ ಸ್ಥಾಪಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು ತುರ್ತು ಕ್ರಮ ಕೈಗೊಳ್ಳುವಂತೆ” ತಿಳಿಸಿದರು.

“ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಂದ ಜನರಿಗಾಗಲೀ, ಜನರಿಂದ ವನ್ಯಜೀವಿಗಳಿಗಾಗಲೀ ತೊಂದರೆ ಆಗದಂತೆ, ಬೆಳೆ ಹಾನಿ ಆಗದಂತೆ ನಿಗಾ ಇಡಲು ಗಸ್ತು ಹೆಚ್ಚಳದ ಅಗತ್ಯವಿದೆ. ಆದರೆ, ಇದಕ್ಕೆ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆ ಇದ್ದು, ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ. ಅಗತ್ಯ ಇರುವ ಮುಂಚೂಣಿ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು. ಆನೆ, ಹುಲಿಗಳು ಸೇರಿದಂತೆ ವನ್ಯಜೀವಿ ಕಾಡಿನಿಂದ ಹೊರಗೆ ಹೋಗದಂತೆ ನಿಯಂತ್ರಿಸಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಿ” ಎಂದು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರುಗಳಾದ ಅನಿಲ್ ಚಿಕ್ಕಮಾದು, ಗಣೇಶ್ ಪ್ರಸಾದ್, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ, ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್, ಎ.ಪಿ.ಸಿಸಿಎಫ್ ಮನೋಜ್ ರಾಜನ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮತ್ತು ಪೊಲಿಸ್ ವರಿಷ್ಠಾಧಿಕಾರಿ ಕವಿತಾ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...