ನಟ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ಜಾಮೀನು ನೀಡದಂತೆ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸುತ್ತೇವೆ. ಚಿಕಿತ್ಸೆ ಪಡೆದ ಬಳಿಕ ಅವರು ಮತ್ತೆ ಜೈಲಿಗೆ ಹೋಗಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಗೃಹ ಸಚಿವರು, “ಚಿಕಿತ್ಸೆಗಾಗಿ ದರ್ಶನ್ ಅವರಿಗೆ ಮೂರು ತಿಂಗಳು ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಜಾಮೀನಿ ಅವಧಿ ವಿಸ್ತರಿಸುವಂತೆ ಅವರು ಮೇಲ್ಮನವಿ ಸಲ್ಲಿಸಿರುವುದು ನನಗೆ ತಿಳಿದಿಲ್ಲ. ಅವರಿಗೆ ಜಾಮೀನು ನೀಡದಂತೆ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದನ್ನು ಓದಿದ್ದೀರಾ? ನಟ ದರ್ಶನ್‌ಗೆ ನೀಡಿದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ
“ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರೆದಿದೆ. ಇನ್ನೂ ಅಧಿಕ ಸಾಕ್ಷ್ಯ ಸಂಗ್ರಹಿಸಲಾಗುತ್ತಿದ್ದು, ಅದಾದ ಬಳಿಕ ದೋಷಾರೋಪಪಟ್ಟಿ ಸಲ್ಲಿಸಲಾಗುವುದು” ಎಂದು ತಿಳಿಸಿದರು.
ಈಗಾಗಲೇ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿದೆ. ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಗಳು ಜಾಮೀನು ರದ್ದತಿಗೆ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು.
ಇನ್ನು ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ನವೆಂಬರ್ 26ಕ್ಕೆ ಮುಂದೂಡಿದೆ.
