ನಟ ದರ್ಶನ್‌ಗೆ ಜಾಮೀನು ನೀಡದಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ: ಪರಮೇಶ್ವರ್

Date:

ನಟ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ಜಾಮೀನು ನೀಡದಂತೆ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸುತ್ತೇವೆ. ಚಿಕಿತ್ಸೆ ಪಡೆದ ಬಳಿಕ ಅವರು ಮತ್ತೆ ಜೈಲಿಗೆ ಹೋಗಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಗೃಹ ಸಚಿವರು, “ಚಿಕಿತ್ಸೆಗಾಗಿ ದರ್ಶನ್ ಅವರಿಗೆ ಮೂರು ತಿಂಗಳು ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಜಾಮೀನಿ ಅವಧಿ ವಿಸ್ತರಿಸುವಂತೆ ಅವರು ಮೇಲ್ಮನವಿ ಸಲ್ಲಿಸಿರುವುದು ನನಗೆ ತಿಳಿದಿಲ್ಲ. ಅವರಿಗೆ ಜಾಮೀನು ನೀಡದಂತೆ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ನಟ ದರ್ಶನ್‌ಗೆ ನೀಡಿದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ

“ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರೆದಿದೆ. ಇನ್ನೂ ಅಧಿಕ ಸಾಕ್ಷ್ಯ ಸಂಗ್ರಹಿಸಲಾಗುತ್ತಿದ್ದು, ಅದಾದ ಬಳಿಕ ದೋಷಾರೋಪಪಟ್ಟಿ ಸಲ್ಲಿಸಲಾಗುವುದು” ಎಂದು ತಿಳಿಸಿದರು.

ಈಗಾಗಲೇ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿದೆ. ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಗಳು ಜಾಮೀನು ರದ್ದತಿಗೆ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇನ್ನು ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ನವೆಂಬರ್ 26ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...