ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ ಇರುತ್ತಾರೋ ಇಲ್ಲವೋ?: ಸಿ ಎಂ ಇಬ್ರಾಹಿಂ

Date:

  • ‘ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಮಾಡಲಿದೆ’
  • ‘ನಾನು ಕೂಡ ಕಾನೂನು ಹೋರಾಟ ಮಾಡುತ್ತೇನೆ’

ಎಚ್​ ಡಿ ದೇವೇಗೌಡ ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಜೆಡಿಎಸ್‌ ನಿಕಟಪೂರ್ವ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ ನೀಡಿದರು.

ಜೆಡಿಎಸ್ ಪಕ್ಷದಿಂದ ಅಮಾನತುಗೊಂಡ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಅವರು, “ದೇವೇಗೌಡರು ರಾಷ್ಟ್ರಾಧ್ಯಕ್ಷರಾಗಿ ಇರುತ್ತಾರಾ ಇಲ್ಲವಾ ಎಂಬುದು ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಮಾಡಲಿದೆ” ಎಂದರು.

“ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ. ‌ಮಗನಿಗಾಗಿ ಈ ತರ ಮಾಡುವುದು ಸರಿಯಲ್ಲ. ಈಗಲೂ ಮನವಿ ಮಾಡುತ್ತೇವೆ, ನಿರ್ಣಯವನ್ನು ವಾಪಸ್ ಪಡೆಯಿರಿ” ಎಂದು ಇಬ್ರಾಹಿಂ ಅವರು ದೇವೇಗೌಡರನ್ನು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬಿಜೆಪಿ ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ಅಕ್ರಮ; ತನಿಖೆಗೆ ಸತೀಶ್ ಜಾರಕಿಹೊಳಿ ಅದೇಶ

“ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ದೇವೇಗೌಡರನ್ನು ರಾಷ್ಟ್ರಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರೆ ಏನು ಮಾಡುತ್ತೀರಿ? ಅಮಾನತು ಮಾಡುವ ಬಗ್ಗೆ ನನಗೆ ನೋಟಿಸ್ ಕೊಟ್ಟಿಲ್ಲ. ನಾನೇನು ಅವರ ಮನೆ ಕೆಲಸದವನಾ? ಏನು ಇವರ ಹುಚ್ಚಾಟ? ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ” ಎಂದು ಎಚ್ಚರಿಸಿದ್ದಾರೆ.

“ಕುಮಾರಸ್ವಾಮಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ಅಮಾನತು ಮಾಡಲು ನನಗೆ ನೋಟಿಸ್ ಕೊಟ್ಟಿದ್ದಾರಾ? ಎಲ್ಲೋ ರೆಸಾರ್ಟ್​​ನಲ್ಲಿ 8ರಿಂದ 10 ಜನ ಸಭೆ ಮಾಡುವುದಲ್ಲ. ನ್ಯಾಷನಲ್ ಕೌನ್ಸಿಲ್ ಮೆಂಬರ್​​ನಲ್ಲಿ 26 ಜನ ಇವರ ಮನೆಯವರೇ ಇದ್ದಾರೆ” ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ವಿರುದ್ಧ ಇಬ್ರಾಹಿಂ ಕಿಡಿಕಾರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ : ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ...