ಉದ್ಯಮಿಗಳನ್ನು ರಾಜ್ಯದಿಂದ ಹೊರಹೋಗಲು ಬಿಡುವುದಿಲ್ಲ: ‌ಆಂಧ್ರದ ಆಮಿಷಕ್ಕೆ ಎಂ ಬಿ ಪಾಟೀಲ್ ಪ್ರತ್ಯುತ್ತರ

Date:

ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಹೇಳಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿ, “ರಾಜ್ಯವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮ್ಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ. ಉದ್ಯಮಗಳಿಗೆ ಭೂಮಿ ಕೊಟ್ಟಮಾತ್ರಕ್ಕೆ ಅವು ಅಲ್ಲಿಗೆ ಹೋಗುವುದಿಲ್ಲ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ. ಎಂ ಬಿ ಪಾಟೀಲ್‌ನಿಗೂ ಸಾಮರ್ಥ್ಯವಿದೆ, ಕರ್ನಾಟಕ ರಾಜ್ಯವೂ ಸಮರ್ಥವಾಗಿದೆ . ರಾಜ್ಯದ ಅನೇಕ ಕಡೆಗಳಲ್ಲಿ ಏರೋಸ್ಪೇಸ್ ಮಾತ್ರವಲ್ಲ, ಎಐ, ಡೀಪ್-ಟೆಕ್, ಐಟಿ ಹೀಗೆ ಎಲ್ಲಾ ತರಹದ ಉದ್ಯಮಗಳಿಗೂ ಭೂಮಿ ಇದೆ. ಒಬ್ಬೇ ಒಬ್ಬ ಉದ್ಯಮಿಯೂ ಕರ್ನಾಟಕದಿಂದ ಹೊರಹೋಗಲು ನಾನು ಬಿಡುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಏರೋಸ್ಪೇಸ್ ಉದ್ಯಮಿಗಳಿಗೆ ನಾವು ಜಮೀನು ಕೊಡುತ್ತೇವೆ: ಆಂಧ್ರ ಸಚಿವ ನಾರಾ ಲೋಕೇಶ್

“ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳಿಗೆ ನಮ್ಮ‌ ಪಾಲಿನ ನೀರು ಬಳಸಿಕೊಳ್ಳಲು 3,600 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಯೋಜನೆಯನ್ನೇ ರೂಪಿಸಲಾಗಿದೆ” ಎಂದು ತಿಳಿಸಿದರು.

“ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಈಗ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ಸರಕಾರವೇನಾದರೂ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದರೆ, ಆಗ ಅವರು ರೈತರ ಪರವಾಗಿ ಮಾತನಾಡುತ್ತಿದ್ದರು. ವಿರೋಧ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ, ನನಗೆ ರಾಜ್ಯದ ಹಿತಾಸಕ್ತಿ ಮಾತ್ರ ಮುಖ್ಯ” ಎಂದರು.

“ಕೈಗಾರಿಕಾ ಇಲಾಖೆಯಲ್ಲಿ ಸಾಧಿಸಿರುವ ಪ್ರಗತಿ ಮತ್ತು ದೇವನಹಳ್ಳಿ ವಿದ್ಯಮಾನವನ್ನೆಲ್ಲ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರಿಗೆ ಹೇಳಿದ್ದೇನೆ. ಇಲಾಖೆಯ ಪ್ರಗತಿ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...