ಬೃಹತ್ ಸಾಲದ ಕಾರಣವನ್ನು ಪ್ರಧಾನಿ ಮೋದಿ ತಿಳಿಸುವರೇ: ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು

Date:

1947ರಿಂದ 2014ರವರೆಗೆ ಭಾರತದ ಸಾಲ – 54 ಲಕ್ಷ ಕೋಟಿ ರೂ. ಆದರೆ, 2014ರಿಂದ 2025ರವರೆಗೆ 200.16 ಲಕ್ಷ ಕೋಟಿಗೆ ಏರಿದೆ. ಕೇವಲ 10 ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿದೆ ಬಿಜೆಪಿಯ ಕೇಂದ್ರ ಸರ್ಕಾರ. ಪಾವತಿಸುತ್ತಿರುವ ಬಡ್ಡಿ 12.76 ಲಕ್ಷ ಕೋಟಿ ರೂ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

- Advertisement -

“ಸ್ವತಂತ್ರಾನಂತರ 67 ವರ್ಷಗಳಲ್ಲಿ ಶೂನ್ಯದಿಂದ ದೇಶವನ್ನು ಕಟ್ಟಲಾಗಿದೆ. ಬೃಹತ್ ಡ್ಯಾಮ್ ಗಳನ್ನು, ಬೃಹತ್ ಕೈಗಾರಿಕೆಗಳನ್ನು, ವಿಸ್ತಾರದ ರೈಲ್ವೆ ವ್ಯವಸ್ಥೆಯನ್ನು, ಏಮ್ಸ್ ನಂತಹ ಸುಸಜ್ಜಿತ ಆಸ್ಪತ್ರೆಗಳನ್ನು, ಶಿಕ್ಷಣ ಸಂಸ್ಥೆಗಳನ್ನು ಕಟ್ಟಲಾಗಿದೆ, ಬಾಹ್ಯಾಕಾಶ ಸಾಧನೆಗಳನ್ನು ಮಾಡಲಾಗಿದೆ, ಮೂರು ಯುದ್ಧಗಳನ್ನು ಎದುರಿಸಲಾಗಿದೆ, ಜಗತ್ತಿನ 4ನೇ ಶಕ್ತಿಶಾಲಿ ಸೈನ್ಯವನ್ನು ಕಟ್ಟಲಾಗಿದೆ, ರಸ್ತೆ, ನೀರು, ವಿದ್ಯುತ್ ನಂತಹ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ, ಅಣು ಪರೀಕ್ಷೆ ನಡೆಸಲಾಗಿದೆ” ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

“67ವರ್ಷಗಳಲ್ಲಿನ ಇಷ್ಟೆಲ್ಲ ಸಾಧನೆಗಳ ಹೊರತಾಗಿಯೂ ಭಾರತದ ಸಾಲ 54 ಲಕ್ಷ ಕೋಟಿ ಮಾತ್ರವಿತ್ತು, ಆದರೆ ಕೇವಲ 10 ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚು ಸಾಲ ಮಾಡಿದ ಮೋದಿ ಸರ್ಕಾರ ದೇಶಕ್ಕೆ ಕೊಟ್ಟಿದ್ದೇನು? ಈ ಸಾಲದ ಹಣ ಎಲ್ಲಿ ಹೋಯ್ತು? ಎಲ್ಲಿ ವಿನಿಯೋಗವಾಯ್ತು? ಮೋದಿಯವರ ಅಮೃತ ಕಾಲದಲ್ಲಿ ಆಗಿರುವುದು ವಿಕಸಿತ ಭಾರತವಲ್ಲ, ವಿಕಸಿತ ಸಾಲ” ಎಂದಿದ್ದಾರೆ.

“ತೆರಿಗೆ ಹೆಸರಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದರೂ ಇಷ್ಟು ಮೊತ್ತದ ಸಾಲ ಮಾಡಿದ್ದೇಕೆ? ಯಾರ ಜೇಬು ತುಂಬಿಸುವುದಕ್ಕೆ?
ಬಿಜೆಪಿ ಈ ಬಗ್ಗೆ ಮಾತನಾಡುವುದೇ? ಪ್ರಧಾನಿ ಕೇವಲ ಒಂದೇ ಒಂದಾದರೂ ಪತ್ರಿಕಾಗೋಷ್ಠಿ ನಡೆಸಿ ಈ ಬೃಹತ್ ಸಾಲದ ಕಾರಣವನ್ನು ತಿಳಿಸುವರೇ” ಎಂದು ಸವಾಲು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...