ಬಿಜೆಪಿ ಮತಿಗೇಡಿಗಳ ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ: ಡಿ ಕೆ ಶಿವಕುಮಾರ್

Date:

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿತು.

- Advertisement -

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, “ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ” ಎಂದು ಹೇಳಿದರು.

“ರಾಹುಲ್ ಗಾಂಧಿ ಅವರು ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

ಧರ್ಮದ ವಿಚಾರದಲ್ಲಿ ಬಿಜೆಪಿ ರಾಜಕಾರಣ

“ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣಬೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ?” ಎಂದು ವಾಗ್ದಾಳಿ ನಡೆಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

“ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಬಲಿಷ್ಠವಾಯಿತು. ಇದನ್ನು ಬಿಜೆಪಿ ಸಹಿಸಲು ಆಗುತ್ತಿಲ್ಲ. ನಾವೆಲ್ಲರೂ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆದ ಭಾರತ ಜೋಡೋ ಯಾತ್ರೆ ವೇಳೆ ರಾಜ್ಯದಲ್ಲಿ ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಲಾಯಿತು. ಇದರ ಯಶಸ್ಸಿನಿಂದಾಗಿ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಸೇವೆಗೆ ಅವಕಾಶ ಸಿಕ್ಕಿದೆ. ರಾಹುಲ್ ಗಾಂಧಿ ಅವರ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಹುಟ್ಟಿದೆ” ಎಂದರು.

ಸದ್ಯದಲ್ಲೇ ಕಾರ್ಯಕರ್ತರ ಸಮಾವೇಶದ ದಿನ ಪ್ರಕಟ

“ಇದೇ 26ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಧ್ವಜಾರೋಹಣ ಮಾಡಲು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 21ರಂದು ನಡೆಯಬೇಕಿದ್ದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದ್ದು, ಪಕ್ಷದ ಅಧ್ಯಕ್ಷರ ಜತೆ ಮಾತನಾಡಿ ಶೀಘ್ರದಲ್ಲೇ ಸಮಾವೇಶದ ದಿನಾಂಕ ಪ್ರಕಟಿಸುತ್ತೇವೆ” ಎಂದರು.

“ಲೋಕಸಭೆ ಚುನಾವಣೆ ನಂತರ ಪಾಲಿಕೆ ಹಾಗೂ ಇತರೆ ಚುನಾವಣೆ ನಡೆಯುತ್ತದೆ. ನಿಮ್ಮ ಸಂಘಟನೆ ನೋಡಿ ನಾವು ಪಾಲಿಕೆ ಚುನಾವಣೆಯಲ್ಲಿ ನಿಮಗೆ ಅವಕಾಶ ನೀಡುತ್ತೇವೆ. ನಿಮ್ಮನ್ನು ಶಕ್ತಿಶಾಲಿಯಾಗಿ ಬೆಳೆಸುವ ಕೆಲಸ ಮಾಡುತ್ತೇವೆ” ಎಂದರು.

ಎಲ್ಲರ ಅಭಿಪ್ರಾಯ ಸ್ವೀಕಾರ

ನಿಗಮ ಮಂಡಳಿ ನೇಮಕದಲ್ಲಿ ನಮ್ಮ ಅಭಿಪ್ರಾಯ ಪಡೆದಿಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಎಲ್ಲರ ಅಭಿಪ್ರಾಯವನ್ನು ಪಡೆದು, ಮಾರ್ಗಸೂಚಿ ನಿಗದಿ ಮಾಡಿದ್ದು, ಅದರಂತೆ ಎಲ್ಲರಿಗೂ ಅಧಿಕಾರ ಹಂಚಲಾಗುವುದು” ಎಂದು ತಿಳಿಸಿದರು.

ಸಚಿವರಾದ ಕೆ ಜೆ ಜಾರ್ಜ್, ಕೃಷ್ಣಬೈರೇಗೌಡ, ಹಿರಿಯ ಮುಖಂಡ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್ಎಂ ರೇವಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹227 ಕೋಟಿ ವನ್ಯಜೀವಿ ಶುಲ್ಕವನ್ನು ₹2.27 ಕೋಟಿಗೆ ಇಳಿಸಿದ್ದ ಅದಾನಿ ಯೋಜನೆಗೆ ಬ್ರೇಕ್!

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸಂಸ್ಥೆಯ 'ತಾರಲಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಸುಪ್ರೀಂಗೆ ವರದಿ ನೀಡುವ ಹೊಸ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಪಾರದರ್ಶಕತೆ...

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ...

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ ಕುರಿತು ರಘುರಾಮ್ ರಾಜನ್ ಒಳನೋಟ

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ...