ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ; ಶ್ರೀರಾಮ ಸೇನೆ ಮುಖಂಡನ ಬಂಧನ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ವಿರುದ್ಧ ಸ್ಮಶಾನವೊಂದರಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಮಾಚಾರ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ ಓರ್ವ ಶ್ರೀರಾಮ ಸೇನೆಯ ಮುಖಂಡನೆಂದು ತಿಳಿದುಬಂದಿದೆ.

- Advertisement -

ಆರೋಪಿ, ಶೀರಾಮ ಸೇನೆಯ ಮುಖಂಡ ಮಂಗಳೂರು ಮೂಲದ ಪ್ರಸಾದ್ ಅತ್ತಾವರ ಎಂದು ಹೇಳಲಾಗಿದೆ. ಆರೋಪಿಯ ಮೊಬೈಲ್‌ನಲ್ಲಿ ವಾಮಾಚಾರದ ವಿಡಿಯೋ ದೊರೆತಿದೆ. ಆರೋಪಿಗಳು ಬೆಂಗಳೂರಿನ ಆಶೋಕ ನಗರ ಸ್ಮಶಾನದಲ್ಲಿರುವ ಕಾಳಿಕಾಂಬ ಗುಡಿಯಲ್ಲಿ ವಾಮಾಚಾರ ಮಾಡಿದ್ದಾರೆ. ಕುರಿಯನ್ನು ಬಲಿಕೊಟ್ಟು, ಅದರ ರಕ್ತವನ್ನು ಸ್ನೇಹಮತಿ ಕೃಷ್ಣ ಮತ್ತು ಗಂಗರಾಜು ಅವರ ಫೋಟೋಗೆ ಲೇಪಿಸಿ ದೇವರ ವಿಗ್ರಹಕ್ಕೆ ನೇತುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇತ್ತೀಚೆಗೆ, ಮಂಗಳೂರಿನ ಬಿಜೈ ಬಳಿಯ ಸಲೂನ್ ಒಂದರ ಮೇಲೆ ಶ್ರೀರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ ಹಲವರು ದಾಳಿ ನಡೆಸಿದ್ದರು. ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ದಾಂಧಲೆ ನಡೆಸಿದ್ದರು. ಸಲೂನ್ ಮಾಲೀಕ ಬರ್ಕೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಕೊಂಡ ಪೊಲೀಸರು ಆರೋಪಿ ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು. ವಿಚಾರಣೆ ವೇಳೆ, ಆತನ ಮೊಬೈಲ್‌ಅನ್ನು ಪರಿಶೀಲಿಸಿದಾಗ ವಾಮಾಚಾರ ಮಾಡಿರುವ ವಿಡಿಯೋ ಪತ್ತೆಯಾಗಿದೆ.

ವಿಡಿಯೋದಲ್ಲಿ, ಸ್ಮಶಾನದ ಗುಡಿಯ ಮುಂದೆ, ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಫೋಟೋಗೆ ಲೇಪಿಸಿದ್ದಾರೆ. ಅಲ್ಲದೆ, ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ ಹಾಗೂ ಸುಮಾ ಆಚಾರ್ಯ ಹೆಸರುಗಳಿರುವ ಚೀಟಿಗಳನ್ನು ಹಾರದಂತೆ ಜೋಡಿಸಿ, ದೇವರ ವಿಗ್ರಹದ ಕೊರಳಿಗೆ ಹಾಕಿರುವುದು ಕಂಡು ಬಂದಿದೆ.

ಜೊತೆಗೆ, ಹಲವಾರು ಸರಣಿ ಪ್ರಾಣಿ ಬಲಿ ಕೊಟ್ಟಿರುವ ವಿಡಿಯೋಗಳು ಆತನ ಮೊಬೈಲ್‌ನಲ್ಲಿ ದೊರೆತಿವೆ. ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...