ಹಣಬಲದಿಂದ ಕೇರಳಂ ಬಿಜೆಪಿ ಅಧ್ಯಕ್ಷರಾಗಿರುವ ರಾಜೀವ್ ಚಂದ್ರಶೇಖರ್‌: ಪ್ರಿಯಾಂಕ್ ಖರ್ಗೆ

Date:

ಕೇರಳಂ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ರಾಜೀವ್ ಚಂದ್ರಶೇಖರ್ ಅವರನ್ನು ನೇಮಿಸಲು ಅವರ ಆರ್ಥಿಕ ಹಿನ್ನೆಲೆ ಅಥವಾ ಹಣದ ಬಲವೇ ಏಕೈಕ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಓರ್ವ ಕೈಗಾರಿಕೋದ್ಯಮಿಯಾಗಿ, ರಾಜಕಾರಣಿಯಾಗಿ ಅಥವಾ ಮುತ್ಸದ್ದಿಯಾಗಿ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ಯಾವುದೇ ಕೆಲಸವನ್ನು ಸ್ವಯಂಪ್ರೇರಿತರಾಗಿ ಮಾಡಿದ್ದನ್ನು ನಾನು ನೋಡಿಲ್ಲ. ಹೀಗಿರುವಾಗ ಕೇರಳಂ ಜನತೆಗೆ ಅವರಿಂದ ಹೇಗೆ ಲಾಭವಾಗುತ್ತದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಿಯಾಂಕ್‌ ಖರ್ಗೆ ಅವರ ಸುದ್ದಿಗೋಷ್ಠಿಯನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಕೇಂದ್ರ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. “ಯಾವುದೇ ಪಾರದರ್ಶಕ ಸರ್ಕಾರವಿದ್ದಿದ್ದರೂ, ರಾಜೀವ್ ಚಂದ್ರಶೇಖರ್ ಅವರ ಚುನಾವಣಾ ಅಫಿಡವಿಟ್ ಅನ್ನು ತಿರಸ್ಕರಿಸಲಾಗುತ್ತಿತ್ತು. ಬಿಜೆಪಿ, ಎಲ್‌ಡಿಎಫ್ ಮತ್ತು ಚುನಾವಣಾ ಆಯೋಗವು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂಬುದು ಇದರಿಂದ ಅತ್ಯಂತ ಸ್ಪಷ್ಟವಾಗಿದೆ. ನಾನೇನಾದರೂ 200 ಕೋಟಿ ರೂ ಮೌಲ್ಯದ ಆಸ್ತಿಯನ್ನು ಘೋಷಿಸದಿದ್ದರೆ ಏನಾಗುತ್ತಿತ್ತು ಎಂಬುದನ್ನು ಒಮ್ಮೆ ಊಹಿಸಿ, ಆಗ ಆಯೋಗವು ಸುಮ್ಮನಿರುತ್ತಿತ್ತೇ?” ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಮೈಬಣ್ಣದ ಕಾರಣಕ್ಕೆ ನನ್ನನ್ನು ಕಡೆಗಣಿಸಿದರು’- ಕಹಿ ನೆನಪುಗಳನ್ನು ಬಿಚ್ಚಿಟ್ಟ ಮಾಜಿ ಲೆಗ್ ಸ್ಪಿನ್ನರ್ ಶಿವರಾಮಕೃಷ್ಣನ್

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ಕಿಡಿಕಾರಿರುವ ಅವರು, “ಮುಖ್ಯ ಚುನಾವಣಾ ಆಯುಕ್ತರನ್ನು ಕಾನೂನಾತ್ಮಕವಾಗಿ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಕಾನೂನಿಗೆ ತಿದ್ದುಪಡಿಯನ್ನು ತಂದಿರುವುದೇ ಈ ಕಾರಣಕ್ಕಾಗಿ. ಆ ಮೂಲಕ ಅವರು ಚುನಾವಣಾ ಆಯೋಗದ ಪಾತ್ರವನ್ನು ಸಂಪೂರ್ಣವಾಗಿ ದುರ್ಬಲಗೊಳಿಸಿದ್ದಾರೆ ಮತ್ತು ಕಾನೂನಿನ ಶಕ್ತಿಯನ್ನೇ ಕುಗ್ಗಿಸಿದ್ದಾರೆ. ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿರಬಹುದು, ಆದರೆ ಅದು ಖಂಡಿತವಾಗಿಯೂ ಸಂವಿಧಾನಕ್ಕಿಂತ ಮೇಲಲ್ಲ” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...