ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

Date:

ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ ಘಟನೆ ಮೈಸೂರು ಹೆಚ್ ಡಿ ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ ಸಂಜೆ ನಡೆದಿದೆ.

ಹೆಚ್ ಡಿ ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಿಳೆಯ ಮೃತದೇಹ ಅರಣ್ಯ ವೀಕ್ಷಣೆಯ ಟವರ್ ಮೇಲೆ ಭಾನುವಾರ ಬೆಳಗ್ಗೆ ದೊರೆತಿದೆ.

ಎನ್ ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿ ದಾಳಿಗೆ ಸಿಲುಕಿದ ಮೃತರು. ಮೂರ್ಬಾಂದ್ ಬೆಟ್ಟದ ಸಮೀಪ ಮೇಕೆ ಮೇಯಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಮಹಿಳೆಯೊಂದಿಗೆ ಕುರಿ ಮೇಯಿಸುತ್ತಿದ್ದ ಸಹಚರ ಗ್ರಾಮಕ್ಕೆ ತೆರಳಿ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಘಟನಾ ಸ್ಥಳಕ್ಕೆ ಎನ್ ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ಮೃತದೇಹಕ್ಕಾಗಿ ಹುಡುಕಾಟ ನಡೆದರೂ ಕತ್ತಲು ಆವರಿಸಿದ್ದರಿಂದ ಸಿಕ್ಕಿರಲಿಲ್ಲ. ಬಳಿಕ ಭಾನುವಾರ ಬೆಳಗ್ಗೆ ಅರಣ್ಯ ವೀಕ್ಷಣೆಯ ಟವರ್ ಮೇಲೆ ಶವ ಪತ್ತೆಯಾಗಿದೆ. ಮೃತ ಮಹಿಳೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ | ನೂತನವಾಗಿ ಆಯ್ಕೆಯಾದ 17 ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಸೋಮವಾರ (ಜೂ.24) ಪ್ರಮಾಣ...

ಕಲಬುರಗಿ: ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು,...

ಭದ್ರತೆ ದೃಷ್ಟಿಯಿಂದ ನಟ ದರ್ಶನ್‌ ಬೇರೆ ಜೈಲಿಗೆ ವರ್ಗಾವಣೆ ಸಾಧ್ಯತೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ...

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್‌...