‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ಆಕ್ರೋಶ: ತಕ್ಷಣ ಕ್ರಮಕ್ಕೆ ಮಹಿಳಾಪರ ಸಂಘಟನೆಗಳ ಆಗ್ರಹ

Date:

‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಎಂಬ ಮಹಿಳಾ ವಿರೋಧಿ ಸಾಹಿತ್ಯವನ್ನು ಒಳಗೊಂಡಿರುವ ಹಾಡಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಹಲವು ಮಹಿಳಾಪರ ಸಂಘಟನೆಗಳು ಈ ಹಾಡನ್ನು ನಿಷೇಧಿಸುವಂತೆ ಮತ್ತು ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.

- Advertisement -

ಈ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಕರ್ನಾಟಕ ಲೇಖಕಿಯರ ಸಂಘ, ಜನವಾದಿ ಮಹಿಳಾ ಸಂಘಟನೆಯು ಸೆನ್ಸಾರ್‌ ಮಂಡಳಿ, ನಿರ್ಮಾಪಕರ ಸಂಘ, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಮಹಿಳಾ ಆಯೋಗಕ್ಕೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? “ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

“ಧ್ರುವ ಸರ್ಜಾ ನಟನೆಯ ಕೆ.ಡಿ: ದಿ ಡೆವಿಲ್ ಎಂಬ ಸಿನಿಮಾದಲ್ಲಿ ‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಎಂದು ಆರಂಭವಾಗುವ ಹೀನ ಅಭಿರುಚಿಯ ಈ ಹಾಡು ಬಿಡುಗಡೆಯಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲರ ಮೇಲೂ ಇದು ಕೆಟ್ಟ ಪರಿಣಾಮ ಬೀರಲಿದೆ. ಇದು ಒಳಗೊಂಡಿರುವ ಸಾಹಿತ್ಯವು ಅತ್ಯಂತ ಕೀಳು ಮಟ್ಟದಲ್ಲಿದೆ. ಶೃಂಗಾರಕ್ಕೂ ಅಶ್ಲೀಲಕ್ಕೂ ತುಂಬ ವ್ಯತ್ಯಾಸವಿದೆ. ಈ ಹಾಡು ಅಶ್ಲೀಲತೆಯಿಂದ ಕೂಡಿದೆ” ಎಂದು ಸಂಘಟನೆಗಳು ಹೇಳಿದೆ.

“ಈಗಾಗಲೇ ಹಲವು ರೀತಿಯಲ್ಲಿ ಹೆಣ್ಣುಮಕ್ಕಳ ಮೇಲೆ ಆಕ್ರಮಣ ಆಗುತ್ತಿದೆ. ಇಂತಹ ಹಾಡುಗಳು ಹೆಣ್ಣನ್ನು ಕಾಮದ ಗೊಂಬೆ ಎಂಬಂತೆ ಬಿಂಬಿಸಿ, ಹೆಂಗಸರನ್ನು ಆ ರೀತಿ ನೋಡಲು ಪ್ರಚೋದಿಸುತ್ತದೆ. ಕರ್ನಾಟಕ ಸರಕಾರವು 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್ ಅನ್ನು ನಿಷೇಧಿಸುವಲ್ಲಿ ತೋರಿದ ಕಾಳಜಿಯನ್ನು ಈಗಲೂ ತೋರಿಸಬೇಕಾಗಿದೆ” ಎಂದು ಆಗ್ರಹಿಸಿದೆ.

“ಇಂತಹ ಹಾಡುಗಳು ನಮ್ಮ ಯುವಜನತೆಯ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಗಮನಿಸಬೇಕು. ಸೆನ್ಸಾರ್ ಮಂಡಳಿಯು ತೋರಿರುವ ನಿರ್ಲಕ್ಷ್ಯ, ಬೇಜವಾಬ್ದಾರಿಗಳಿಂದಾಗಿ ಇಂತಹ ಹಾಡುಗಳು ಎಗ್ಗಿಲ್ಲದೆ ಬಿಡುಗಡೆಯಾಗುತ್ತಿವೆ. ಸೆನ್ಸಾರ್‌ ಮಂಡಳಿ ಈ ಹಾಡನ್ನು ಹೇಗೆ ಒಪ್ಪಿತು ಎಂಬುದೇ ಆಶ್ಚರ್ಯವಾಗುತ್ತಿದೆ” ಎಂದು ಮಹಿಳಾಪರ ಸಂಘಟನೆಗಳು ಆರೋಪಿಸಿದೆ.

“ಮಹಿಳೆಯನ್ನು ಅವಮಾನಿಸುವ ಇಂಥ ಹಾಡುಗಳನ್ನು ಯಾವ ಕಾರಣಕ್ಕೂ ನಾವು ಒಪ್ಪುವುದಿಲ್ಲ. ಈ ಹಾಡನ್ನು ಸಂಪೂರ್ಣವಾಗಿ ಕೈಬಿಡಬೇಕು. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು” ಲೇಖಕಿಯರು, ಮಹಿಳಾಪರ ಹೋರಾಟಗಾರರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...