ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ ಕೆ ಶಿವಕುಮಾರ್

Date:

“ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಒಟ್ಟು 34 ಸಚಿವ ಸ್ಥಾನಗಳ ಪೈಕಿ 33 ಸ್ಥಾನಗಳು ಭರ್ತಿಯಾಗಿದ್ದು, 1 ಸ್ಥಾನವನ್ನು ಬಾಕಿ ಕಾಯ್ದಿರಿಸಲಾಗಿದೆ. ಆದರೆ ಒಬ್ಬರೇ ಒಬ್ಬರು ಮಹಿಳೆಯರಿಗೂ ಸಚಿವ ಸ್ಥಾನ ನೀಡಲಾಗಿಲ್ಲ. ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ಟೀಕೆಗೆ ಒಳಗಾಗುತ್ತಿದೆ. ಈ ನಡುವೆ ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಇದನ್ನೂ ಓದಿ: ರಾಜ್ಯ ಸಚಿವ ಸಂಪುಟ: ನಟಿ ಉಮಾಶ್ರೀಗೆ ಮಂತ್ರಿಗಿರಿ ಸಿಗುತ್ತಾ?

ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ದೆಹಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದಾಗ, “ಹೋಗಲೇಬೇಕಲ್ಲವೆ, ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ” ಎಂದರು.

“ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಅಂಗವಾಗಿ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿ ಸ್ಮರಿಸುತ್ತಿದ್ದೇವೆ. ನಾನು ಅನೇಕ ಬಾರಿ ನಿಜಲಿಂಗಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ನಾನು ಹಾಗೂ ಎಸ್ ಎಂ ಕೃಷ್ಣ ಅವರು ಹಲವು ಬಾರಿ ನಿಜಲಿಂಗಪ್ಪ ಅವರ ಜೊತೆಗೆ ಹೋಗಿದ್ದೇವೆ. ಸೋನಿಯಾ ಗಾಂಧಿ ಅವರು ಕೂಡ ನಿಜಲಿಂಗಪ್ಪ ಅವರನ್ನು ಭೇಟಿ ಮಾಡಬೇಕು ಎಂದು ಚಿತ್ರದುರ್ಗಕ್ಕೆ ಆಗಮಿಸಿದ್ದರು. ನಾನು ಎರಡನೇ ಬಾರಿಗೆ ಶಾಸಕನಾದಾಗಲೂ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದೆ” ಎಂದು ಸ್ಮರಿಸಿದರು.

“ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕೆ ದೊಡ್ಡ ಹೋರಾಟ ಮಾಡಿದ್ದರು. ಮಹಾತ್ಮ ಗಾಂಧೀಜಿ ಅವರ ಚಿಂತನೆ ಅಳವಡಿಸಿಕೊಂಡ ನಾಯಕರು. ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ” ಎಂದು ಬಣ್ಣಿಸಿದರು.

“ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಇಂತಹ ನಾಯಕರ ಆಡಳಿತ ಜಾತ್ಯಾತೀತ ತತ್ವ ಬಸವಣ್ಣನವರ ಚಿಂತನೆಯನ್ನು ಪ್ರತಿಬಿಂಬಿಸಿದ ಧೀಮಂತ ನಾಯಕ, ಮುಖ್ಯಮಂತ್ರಿಯಾಗಿದ್ದರು. ನಾವೆಲ್ಲರೂ ಅವರ ಹಾದಿಯಲ್ಲಿ ಸಾಗಬೇಕು” ಎಂದು ಅಭಿಪ್ರಾಯಪಟ್ಟರು.

“ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಐಸಿಸಿ ಅಧ್ಯಕ್ಷರಾಗಿ ಅವರು ಕೊಟ್ಟ ಮಾರ್ಗದರ್ಶನಗಳು, ದಾಖಲೆಗಳಲ್ಲಿ ಇವೆ. 1924ರ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಿಜಲಿಂಗಪ್ಪ ಅವರ ಪಾತ್ರ ದೊಡ್ಡದಾಗಿತ್ತು. ನೀರಾವರಿಗೆ ಭದ್ರಾ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ಪ್ರಮುಖ ಪಾತ್ರ ವಹಿಸಿದ ನಾಯಕರು. ಅವರ ಕುಟುಂಬದವರಿಗೆ ಒಳ್ಳೆಯದನ್ನು ಮಾಡಲಿ. ನಿಜಲಿಂಗಪ್ಪ ಅವರು ಸಿಎಂ ಆಗಿದ್ದರೂ ಅವರ ಪುತ್ರಿ ನಾನು ಓದಿದ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅವರು ಸರಳ ಜೀವನ ನಡೆಸಿದ್ದರು. ಅವರ ಮಾರ್ಗದರ್ಶನ ನಮಗೆ ಸದಾ ಅಗತ್ಯ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ಲಖೀಂಪುರ್ ಖೇರಿ ಪ್ರಕರಣ: ವಿಚಾರಣಾ ನ್ಯಾಯಾಧೀಶರ ಮೇಲೆ ಸಂತ್ರಸ್ತರಿಗೆ ಅನುಮಾನ; ಹೈಕೋರ್ಟ್ ಪರಿಶೀಲನೆಗೆ ಸುಪ್ರೀಂ ಸೂಚನೆ

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಧೀಶರ ನಡವಳಿಕೆ ಮತ್ತು...

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...