ಸುಜಾತಾ ಭಟ್‌ಗೆ ತಕ್ಷಣ ರಕ್ಷಣೆ ಒದಗಿಸಿ: ಸರ್ಕಾರಕ್ಕೆ ಮಹಿಳಾ ಆಯೋಗ ಒತ್ತಾಯ

Date:

Advertisements

ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಹಿನ್ನೆಲೆಯಲ್ಲಿ, ಅನನ್ಯಾ ಭಟ್ ನಾಪತ್ತೆ ಪ್ರಕರಣದ ದೂರುದಾರರಾದ ಸುಜಾತಾ ಭಟ್ ಅವರಿಗೆ ಮಾಧ್ಯಮಗಳಿಂದ ಉಂಟಾಗುತ್ತಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗವು, ಎಸ್‌ಐಟಿಗೆ ಪತ್ರ ಬರೆದು ತಕ್ಷಣ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದೆ.

ಸಮೂಹ ಮಾಧ್ಯಮಗಳ ವರದಿಗಳ ಆಧಾರದ ಮೇಲೆ ಆಯೋಗವು ಈ ಕ್ರಮಕ್ಕೆ ಮುಂದಾಗಿದೆ. ಕಳೆದ ಎರಡು ವಾರಗಳಿಂದ ಸುಜಾತಾ ಭಟ್ ಅವರನ್ನು ಮಾಧ್ಯಮದವರು ನಿರಂತರವಾಗಿ ಹಿಂಬಾಲಿಸಿ ಹೇಳಿಕೆ ನೀಡಲು ಪೀಡಿಸುತ್ತಿದ್ದಾರೆ ಎಂದು ಆಯೋಗ ಗಮನಿಸಿದೆ. ಅಲ್ಲದೆ, ಅವರನ್ನು ತೇಜೋವಧೆ ಮಾಡಿ ಹೀಯಾಳಿಸುವುದು, ತಡ ರಾತ್ರಿಯಲ್ಲಿ ಮನೆಗೆ ನುಗ್ಗಿ ವಿಡಿಯೋ ಚಿತ್ರೀಕರಣ ಮಾಡುವುದು, ಕಾರಿನಲ್ಲಿ ಕೂರಿಸಿಕೊಂಡು ವೈರುಧ್ಯಗಳಿಂದ ಕೂಡಿದ ಹೇಳಿಕೆಗಳನ್ನು ಪಡೆಯುವುದು ಮತ್ತು ಮಾನಸಿಕವಾಗಿ ಕುಗ್ಗಿಸುವ ವರದಿಗಳನ್ನು ಪ್ರಸಾರ ಮಾಡುವುದು ಇತ್ಯಾದಿ ಘಟನೆಗಳು ನಡೆದಿರುವುದನ್ನು ಆಯೋಗ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ಮಹಿಳೆಯರ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ಥರು ಮತ್ತು ದೂರುದಾರರು ನಿರ್ಭೀತಿಯಿಂದ ಮಾಹಿತಿ ನೀಡುವಂತೆ ಮಾಡುವುದು ಅಗತ್ಯ ಎಂದು ಆಯೋಗ ಹೇಳಿದೆ. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಟ್ಟು ಅವರಿಗೆ ರಕ್ಷಣೆ ನೀಡುವಂತೆ ಕೋರಲಾಗಿದೆ. ಸುಜಾತಾ ಭಟ್ ಅವರು ಮಾಧ್ಯಮಗಳ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿ ಹೋಗುವ ಸಂಭವವಿದೆ ಎಂದು ಆಯೋಗ ಆತಂಕ ವ್ಯಕ್ತಪಡಿಸಿದೆ.

ಈ ಸದರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು, ಸರ್ಕಾರಕ್ಕೆ ಕೂಡಲೇ ವಿಶೇಷ ತನಿಖಾ ತಂಡದ ಮೂಲಕ ಸುಜಾತಾ ಭಟ್ ಅವರಿಗೆ ಭದ್ರತೆ ಒದಗಿಸಿ, ನಿರ್ಭೀತಿಯಿಂದ ಅಹವಾಲು ಸಲ್ಲಿಸುವ ಸೂಕ್ತ ವ್ಯವಸ್ಥೆ ಮಾಡಿಕೊಡುವಂತೆ ಆದೇಶಿಸಿದೆ. ಅಲ್ಲದೆ, ಕೈಗೊಂಡ ಕ್ರಮದ ವರದಿಯನ್ನು ತುರ್ತಾಗಿ ಆಯೋಗಕ್ಕೆ ಕಳುಹಿಸಿಕೊಡುವಂತೆ ಕೋರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X