ವಿಶ್ವ ಪರಿಸರ ದಿನ | ವಿಧಾನಸೌಧದ ಮುಂದೆ ಪರಿಸರ ನಡಿಗೆಗೆ ಚಾಲನೆ

Date:

ಪ್ರಕೃತಿ ನಮಗೆ ನೀಡಿರುವ ಸಕಲ ಸಂಪನ್ಮೂಲದ ಹಿತ -ಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ವಿಶ್ವ ಪರಿಸರ ದಿನದ ಅಂಗವಾಗಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪರಿಸರ ನಡಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, “ನಮ್ಮ ಪೂರ್ವಜರು ನೈಸರ್ಗಿಕ ಸಂಪನ್ಮೂಲವನ್ನು ಹಿತ-ಮಿತವಾಗಿ ಬಳಸುತ್ತಿದ್ದರು, ಆದರೆ ಇಂದು ನಾವು ಐಷಾರಾಮಿ ಜೀವನಕ್ಕಾಗಿ ಅತಿಯಾಗಿ ಸಂಪನ್ಮೂಲ ಬಳಸುತ್ತಿದ್ದು, ಪರಿಸರ ನಾಶವಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇಂದು ಜಗತ್ತಿನ ಮುಂದಿರುವ ದೊಡ್ಡ ಸವಾಲು ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆ ಆಗಿದೆ. ಇದಕ್ಕೆ ವೃಕ್ಷ, ಅರಣ್ಯ ನಾಶ ಹಾಗೂ ನಮ್ಮ ಜೀವನ ಶೈಲಿಯೇ ಕಾರಣವಾಗಿದೆ. ಪ್ರತಿಯೊಬ್ಬರೂ ವೃಕ್ಷ ನೆಟ್ಟು ಹಸಿರು ಹೊದಿಕೆ ಹೆಚ್ಚಿಸಿದರೆ ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಬಹುದು” ಎಂದು ಹೇಳಿದರು.

ಏಕ ಬಳಕೆ ಪ್ಲಾಸ್ಟಿಕ್ ಬಳಸದಿರಲು ಸಂಕಲ್ಪ ಮಾಡಿ

“ಏಕ ಬಳಕೆ ಪ್ಲಾಸ್ಟಿಕ್ ನಿಂದ ತಯಾರಿಸಿದ ಉತ್ಪನ್ನಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ರಾಜ್ಯ ಸರ್ಕಾರವೂ ಆದೇಶ ನೀಡಿದೆ. ಆದರೂ ಏಕ ಬಳಕೆ ಪ್ಲಾಸ್ಟಿಕ್ ಹಾವಳಿ ನಿಂತಿಲ್ಲ. ಏಕ ಬಳಕೆ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ನಾವೆಲ್ಲ ಸಂಕಲ್ಪ ಮಾಡಬೇಕು” ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್ ಮತ್ತಿತರರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...