ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಇತ್ತ ಹಿಂಗಾರು ಕಾಲಿಟ್ಟ ವಾರದಲ್ಲೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ವಾಡಿಕೆ ಪ್ರಕಾರ ಹಿಂಗಾರು 41 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ದಕ್ಷಿಣ ಒಳನಾಡು ಭಾಗದಲ್ಲಿ 54 ಮಿ.ಮೀ ಮಳೆಯಾಗಿದೆ. ಶೇ. 32ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಉತ್ತರ ಒಳನಾಡು, ಹಾಗೂ ಕರಾವಳಿ ಭಾಗದಲ್ಲಿ ಮಳೆ ಕೊರತೆಯಾಗಿದೆ. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...