ಯೋಗೀಶಗೌಡ ಕೊಲೆ ಪ್ರಕರಣ | ಸೆಷನ್ಸ್‌ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ವಿನಯ್‌ ಕುಲಕರ್ಣಿ ಮೇಲ್ಮನವಿ

Date:

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೊಳಗಾಗಿದ್ದ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಸೆಷನ್ಸ್‌ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಈ ಶಿಕ್ಷೆ ವಿಧಿಸಿ ಆದೇಶಿಸಿದ ತೀರ್ಪನ್ನು ಪ್ರಶ್ನಿಸಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಸಲ್ಲಿಸಲಾಗಿರುವ ಈ ಅರ್ಜಿಗಳು ಇನ್ನಷ್ಟೇ ವಿಚಾರಣೆಗೊಳಪಡಬೇಕಿದೆ. ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್, ವಿನಯ ಕುಲಕರ್ಣಿ ಪರ ವಕಾಲತ್ತು ವಹಿಸಿದ್ದಾರೆ.

ಇದನ್ನೂ ಓದಿ : ಕೇಸರಿ ಶಾಲು ಹೊದಿಸಿಕೊಂಡ ರಾಘವ ಚಡ್ಡಾ | ಮಹಾರಾಷ್ಟ್ರ ಮಾದರಿಯ ಆಪರೇಷನ್ ಗೆ ಬಿಜೆಪಿ…

- Advertisement -

ಈ ಕೊಲೆ ಪ್ರಕರಣದಲ್ಲಿ 17 ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿರುವ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿತ್ತು. 

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...