ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿರುವ ಉಚ್ಚ ನ್ಯಾಯಾಲಯವು, ಅವರನ್ನು ‘ದೋಷಿ’ ಎಂದು ಪ್ರಕಟಿಸಿದ್ದ ತೀರ್ಪಿಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಜಾಮೀನು ಮಂಜೂರು ಮಾಡುವ ವೇಳೆ ಹೈಕೋರ್ಟ್ ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಐದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಸೂಕ್ತ ಶ್ಯೂರಿಟಿ (ಜಾಮೀನುದಾರರು) ಒದಗಿಸುವಂತೆ ವಿನಯ್ ಕುಲಕರ್ಣಿ ಅವರಿಗೆ ಕೋರ್ಟ್ ಸೂಚಿಸಿದೆ.
ಅಲ್ಲದೆ, ಪ್ರಕರಣವು ವಿಚಾರಣೆ ಹಂತದಲ್ಲಿರುವುದರಿಂದ, ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ಯಾವುದೇ ಕಾರಣಕ್ಕೂ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಹೈಕೋರ್ಟ್ ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ಈ ಎಲ್ಲಾ ಷರತ್ತುಗಳಿಗೆ ಒಳಪಟ್ಟು ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ 10 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ.




