‘ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿ’: ಸಿ ಟಿ ರವಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

Date:

‘ಕಾನೂನಿಗೆ ಸವಾಲು ಹಾಕುತ್ತೇನೆ ಎನ್ನುವ ನಿಮ್ಮ ಧಾರ್ಷ್ಟ್ಯ ನಡೆಯುವುದಿಲ್ಲ. ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿರಿ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

- Advertisement -

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿರುವ ಅವರು, ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಸಿ ಟಿ ರವಿ ಒಂದು ಸುಳ್ಳಿಗೆ ಮತ್ತೊಂದು ಸುಳ್ಳು ಸೇರಿಸುತ್ತಿದ್ದು, ಸುಳ್ಳಿನ ಹಾರವನ್ನೇ ಹೆಣೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಸಿ ಟಿ ರವಿ ಅವರಂತಹವರು ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ. ಸಿ.ಟಿ. ರವಿ ಸೇರಿದಂತೆ ಬಿಜೆಪಿಯವರ ಎದೆ ಸೀಳಿದರೆ ನಾಲ್ಕು ಅಕ್ಷರಗಳೂ ಸಿಗುವುದಿಲ್ಲ. ಜೊತೆಗೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿಯೂ ಕಾಣುವುದಿಲ್ಲ,” ಎಂದು ಖರ್ಗೆ ಟೀಕಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ದೊಡ್ಡ ಮಟ್ಟದ ಕೋಮು ಕಲಹ ಸೃಷ್ಟಿಸಲು ಸಾಧ್ಯವಾಗದ ಕಾರಣ ಬಿಜೆಪಿಯವರು ಅಸಹನೆಯಿಂದ ವರ್ತಿಸುತ್ತಿದ್ದಾರೆ. ಯಾವುದೇ ವಿಷಯವಿರಲಿ ಅದಕ್ಕೆ ಪಾಕಿಸ್ತಾನ ಹಾಗೂ ಹಿಂದೂ-ಮುಸ್ಲಿಂ ವಿಚಾರವನ್ನು ಜೋಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ವಾಗ್ದಾಳಿ ನಡೆಸಿದ್ದಾರೆ.

ನೀಟ್ ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿಯೂ ಧರ್ಮದ ವಿಚಾರವನ್ನು ಎಳೆದು ತಂದಿರುವ ಸಿ ಟಿ ರವಿ, ತಮ್ಮ ಹೇಳಿಕೆಯನ್ನು ಸಮರ್ಥಿಸಲು ಪ್ರತಿಭಟನೆಗೆ ಸಂಬಂಧವೇ ಇಲ್ಲದ ವಿಡಿಯೊವನ್ನು ತೋರಿಸಿ ಜನರನ್ನು ದಿಕ್ಕು ತಪ್ಪಿಸುವ ವಿಫಲ ಯತ್ನ ಮಾಡಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ.

ಸಿ.ಟಿ. ರವಿ ಅವರನ್ನು ಉದ್ದೇಶಿಸಿ, “ಸತ್ಯ ಹೇಳಲು ಹಿಂಜರಿಕೆ ಬೇಕಿಲ್ಲ. ಆದರೆ ಸುಳ್ಳು ಹೇಳಲು ನೈತಿಕ ಹಾಗೂ ಸಾಮಾಜಿಕ ಭಯ ಇರಬೇಕು. ಅಂತಹ ಯಾವುದೇ ಭಯ ನಿಮಗಿಲ್ಲ ಎಂಬುದನ್ನು ಪದೇಪದೇ ಸಾಬೀತುಪಡಿಸುತ್ತಿದ್ದೀರಿ,” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಒಬ್ಬ ಪ್ರಧಾನ್ ಹೋದರೆ ಮತ್ತೊಬ್ಬ ಪ್ರಧಾನ್ ಬರುತ್ತಾರೆ; ಹೋರಾಟ ಮುಗಿದಿಲ್ಲ: ವಿದ್ಯಾರ್ಥಿ ನಾಯಕಿ ನೇಹಾ

ಈ ಹಿಂದೆ ವಿಧಾನಸಭೆಯಲ್ಲಿ ಆಡಿದ ಮಾತಿನ ಕುರಿತು ಉಲ್ಲೇಖಿಸಿದ ಅವರು, ಆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದಿಗೂ ಧ್ವನಿ ಮಾದರಿ (ವಾಯ್ಸ್ ಸ್ಯಾಂಪಲ್) ನೀಡದಿರುವುದು ಅವರ ಪಲಾಯನವಾದ ಮತ್ತು ಅನೈತಿಕತೆಯನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ಜು.25 ರಂದು ಚಿಕ್ಕಮಗಳೂರಿನಲ್ಲಿ ನಡೆದ ಯೂತ್ ಫಾರ್ ನೇಷನ್ ಕಾರ್ಯಕ್ರಮದಲ್ಲಿ, “ಎದೆ ಸೀಳಿದರೆ ಮೂರಕ್ಷರ ಇರುವುದಿಲ್ಲ, ನೀಟ್‌ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ” ಎಂದು ಸಿ ಟಿ ರವಿ ಅವರು ನೀಡಿದ್ದ ಅಸಂಬದ್ಧ, ವಿವಾದಾತ್ಮಕ ಹೇಳಿಕೆ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಸಂಬಂಧ ಜು.26 ರಂದು ಪೊಲೀಸರು ನೋಟಿಸ್‌ ನೀಡಲು ಅವರ ಮನೆಗೆ ತೆರಳಿದ್ದರು. ಈ ವೇಳೆ ನೋಟಿಸ್‌ ಸ್ವೀಕರಿಸದೇ ಪೊಲೀಸರನ್ನು ವಾಪಸ್‌ ಕಳಿಸಿದ್ದರು. ಇದೀಗ ನೋಟಿಸ್‌ಗೆ ಉತ್ತರಿಸಲು ರವಿ ಅವರು 7 ದಿನಗಳ ಕಾಲಾವಕಾಶ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...