ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ; ಪೊಲೀಸರಿಗೆ ಕರೆ ಮಾಡಿ ಆರೋಪಿಗಳನ್ನ ಕಂಬಿ ಹಿಂದೆ ತಳ್ಳಿದ ಸಂತ್ರಸ್ತೆ!

Date:

ಪಾರ್ಟಿ ಮಾಡುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಕರೆಸಿಕೊಂಡು ಅತ್ಯಾಚಾರ ಎಸಗಿರುವ ಹೇಯ ಕೃತ್ಯವೊಂದು ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

- Advertisement -

ಬಂಧಿತರಾದ ಐವರ ಪೈಕಿ ಇಬ್ಬರು ಸಂತ್ರಸ್ತ ಯುವತಿಯ ಪರಿಚಯಸ್ಥರು ಎನ್ನಲಾಗಿದೆ. ಆರೋಪಿಗಳ ಪೈಕಿ ಸೋಮಶೇಖರ್ ಎಂಬಾತ, “ಕಲಬುರ್ಗಿಯಿಂದ ನಮ್ಮ ಸ್ನೇಹಿತರು ಬಂದಿದ್ದಾರೆ, ಪಾರ್ಟಿ ಮಾಡೋಣ ಬಾರಾ” ಎಂದು ಯುವತಿಯನ್ನು ನಂಬಿಸಿ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ದೇವನಹಳ್ಳಿ ಮೂಲದ ಯುವತಿಯು ಸ್ನೇಹಿತನ ಮಾತು ನಂಬಿ ಅಲ್ಲಿಗೆ ತೆರಳಿದ್ದಾಳೆ. ಅಲ್ಲಿ ಪಾರ್ಟಿ ನಡೆಯುತ್ತಿದ್ದ ಸಂದರ್ಭದಲ್ಲಿ, ಆರೋಪಿಗಳಲ್ಲೊಬ್ಬನಾದ ಅಂಬರೀಶ ಎಂಬಾತ ಯುವತಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆರೋಪಿಗಳ ಗುಂಪಿನಿಂದ ಹೇಗೋ ಬಚಾವಾದ ಸಂತ್ರಸ್ತ ಯುವತಿ, ತನ್ನ ಪ್ರಾಣ ರಕ್ಷಿಸಿಕೊಳ್ಳಲು ಅಲ್ಲಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾಳೆ. ಆತಂಕದ ನಡುವೆಯೂ ಎದೆಗುಂದದ ಆಕೆ, ತಕ್ಷಣವೇ ‘112’ ತುರ್ತು ಸಹಾಯವಾಣಿಗೆ ಕರೆ ಮಾಡಿ ತನಗಾದ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಸಂತ್ರಸ್ತೆಯ ಕರೆ ಸ್ವೀಕರಿಸಿ ಎಚ್ಚೆತ್ತ ತಲಘಟ್ಟಪುರ ಪೊಲೀಸರು, ಕೂಡಲೇ ಸ್ಥಳಕ್ಕೆ ದೌಡಾಯಿಸಿ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಕಾಶಿ ವಿಶ್ವನಾಥ ಕಾರಿಡಾರ್ ವಿಸ್ತರಣೆಗೆ 6 ಮಸೀದಿಗಳ ಸ್ವಾಧೀನವನ್ನು ಪ್ರಶ್ನಿಸಿದ್ದ ರಿಟ್ ಅರ್ಜಿ ವಜಾ ಮಾಡಿದ ಅಲಹಾಬಾದ್ ಹೈಕೋರ್ಟ್

ಸ್ಥಳದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಸೋಮಶೇಖರ್, ಅಂಬರೀಶ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೆ, ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪೊಲೀಸರು ವರದಿಯ ನಿರೀಕ್ಷೆಯಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...