ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಸೌಹಾರ್ದ ಸಾಮರಸ್ಯಕ್ಕೆ ಜಿಲ್ಲಾ ಮಟ್ಟದ ಸಮಾವೇಶ

Date:

ಬಾಗೇಪಲ್ಲಿ:-ದೇಶದಲ್ಲಿ ಕಾಂಗ್ರೆಸ್, ಬಿಜೆಪಿ ಅಧಿಕಾರ ಉಳಿಸಲು ದಲಿತರ, ಹಿಂದುಳಿದ, ಅಲ್ಪಸಂಖ್ಯಾತ ಜನರ ನಡುವೆ ಕೋಮುದ್ವೇಷ ಹರಡಿ, ವಿಭಜನೆ ಮಾಡುತ್ತಿವೆ. ಇದರ ವಿರುದ್ಧ ಜನ ಎಚ್ಚೆತ್ತುಕೊಳ್ಳಬೇಕು ಎಂದು ಸಿಪಿಎಂ ಮುಖಂಡ ಡಾ.ಅನಿಲ್‍ಕುಮಾರ್ ಹೇಳಿದರು. ಪಟ್ಟಣದಲ್ಲಿ ಸಿಪಿಐಎಂ ನ ಸುಂದರಯ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮುಸ್ಲಿಂ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ, ಸೌಹಾರ್ದ ಸಾಮರಸ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

- Advertisement -

ಹಿಂದುತ್ವದ ಹೆಸರಿನಲ್ಲಿ, ಆಮಿಷ, ಹಣ ಹಂಚಿಕೆ ಮೂಲಕ ಕಾಂಗ್ರೆಸ್, ಬಿಜೆಪಿ ಅಧಿಕಾರ ಪಡೆದು ನಂತರ ಜನರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದಿಲ್ಲ. ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ, ಇಂದಿಗೂ ಕೆಳವರ್ಗದ ಜನರಿಗೆ ನಿವೇಶನ, ಮನೆ ಇಲ್ಲ. ಅರಣ್ಯಭೂಮಿಗೆ ಸಾಗುವಳಿ ಚೀಟಿ ನೀಡಿಲ್ಲ. ಆರೋಗ್ಯ, ಶಿಕ್ಷಣ, ಉದ್ಯೋಗ ಸಿಗುತ್ತಿಲ್ಲ. ಹಿಂದುತ್ವದ ಹೆಸರಿನಲ್ಲಿ ಜಾತಿ, ಧರ್ಮಗಳ ನಡುವೆ ಕೋಮುದ್ವೇಷ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಾರೆ. ಅಶಾಂತಿ ಸೃಷ್ಟಿಸಿದವರು ತಪ್ಪಿಸಿಕೊಳ್ಳುತ್ತಾರೆ. ಕೂಲಿ, ಕಾರ್ಮಿಕರು ಬಲಿಯಾಗಿ ಜೈಲಿಗೆ ಹೋಗುತ್ತಾರೆ. ಅನೇಕ ಕುಟುಂಬಗಳು ಬಲಿಪಶು ಆಗಿವೆ. ಅಲ್ಪಸಂಖ್ಯಾತರು ಎಚ್ಚೆತ್ತುಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅಲ್ಪಸಂಖ್ಯಾತರು ಕೂಲಿಕೆಲಸ ಮಾಡುವ ಶ್ರಮಜೀವಿಗಳು. ಸರ್ಕಾರಗಳು ಸಮುದಾಯಗಳ ಏಳಿಗೆಗೆ ಕೋಟ್ಯಂತರ ಹಣ ಜಾರಿ ಮಾಡಲಾಗಿದೆ ಎಂದು ಜಾಹೀರಾತುಗಳಲ್ಲಿ ಪ್ರಕಟ ಮಾಡುತ್ತದೆ. ಆದರೆ ಇಂದಿಗೂ ಸಹ ಕಟ್ಟಕಡೆಯ ಪ್ರಜೆಗೆ ಸೌಲಭ್ಯ ಸಿಕ್ಕಿಲ್ಲ ಎಂದರು.

ಬಿಜೆಪಿ ಹಿಂದುತ್ವದ ಮೂಲಕ ಜನರನ್ನು ಹುಬ್ಬೇರಿಸುವಂತೆ ಮಾಡಿದೆ. ಅಧಿಕಾರಕ್ಕೆ ಬರುವ ಮುನ್ನ ವಿದೇಶದಲ್ಲಿನ ಕಪ್ಪು ಹಣ ತಂದು ಖಾತೆಗೆ ₹15 ಲಕ್ಷ ಹಾಕುತ್ತೇನೆ. 2 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇನೆ ಎಂದು ನರೇಂದ್ರಮೋದಿ ಭರವಸೆ ನೀಡಿದರು. ಆದರೆ ನರೇಂದ್ರಮೋದಿ ಪ್ರಧಾನಮಂತ್ರಿ ಆದ ನಂತರ ₹130 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅಲ್ಪಸಂಖ್ಯಾತರ, ದಲಿತರ, ಹಿಂದುಳಿದವರ ಮೇಲೆ ದಾಳಿ, ಹಲ್ಲೆ, ಹತ್ಯೆಗಳು ಹೆಚ್ಚಾಗಿವೆ. ಹಿಂದುತ್ವದ ಹೆಸರಿನಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುತ್ತಿವೆ. ಅಲ್ಪಸಂಖ್ಯಾತರು ಹಕ್ಕು ಪಡೆಯಲು ಸಂಘಟಿತರಾಗಬೇಕು ಎಂದರು.

ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕೋಟ್ಯಂತರ ಹಣ ವ್ಯಯ ಮಾಡಲಾಗಿದೆ ಎಂದು ಬಿಜೆಪಿ, ಕಾಂಗ್ರೆಸ್ ಸುಳ್ಳು ಹೇಳಿಕೊಂಡಿದೆ. ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ ಎಂದರು. ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಸಿಪಿಎಂ ಹೋರಾಟ ಮಾಡುತ್ತಿದೆ. ಭೂಮಿ, ಮನೆ, ನಿವೇಶನ ಕಲ್ಪಿಸಲು ಸಂಘಟಿತರಾಗಬೇಕು. ಸಂಘಟಿತರಾಗಿ ಹೋರಾಟಗಳ ಮೂಲಕ ಹಕ್ಕುಗಳನ್ನು ಪಡೆಯಬೇಕು ಎಂದರು.

ಇದನ್ನು ಓದಿದ್ದೀರಾ..? ನಷ್ಟ ಆದಂತಹ ರೈತರ ಬೆಳೆಗಳಿಗೆ ಪರಿಹಾರಕ್ಕೆ ಒತ್ತಾಯ

ಅಲ್ಪಸಂಖ್ಯಾತರ ಮುಖಂಡ ಷಫೀವುಲ್ಲಾ, ರಶೀದ್‍ಸಾಬ್, ಮೊಹಿದ್ದೀನ್, ಜಿ.ಮುಸ್ತಾಫ, ಇಮ್ರಾನ್, ರಫೀಕ್ ಅಹಮದ್, ನೆಟ್ಟುಕುಂಟಪಲ್ಲಿ ಜಹೀಗ್‌ಬೇಗ್, ಡಾ.ಮೌಲಾಷರೀಫ್, ಚಿಂತಾಮಣಿ ಬಾಬಾಜಾನ್, ಮೆಹಬೂಬ್, ರಫೀ, ಬಿ.ಎಚ್.ರಫೀಕ್, ಬಿ.ಎಚ್.ಸಾದಿಕ್, ತಬ್ರೇಜ್, ದಿಲಾನ್, ಮುಸ್ತಾಫ, ಸಿದ್ದಗಂಗಪ್ಪ, ಎಂ.ಎನ್.ರಘುರಾಮರೆಡ್ಡಿ, ಬಿಳ್ಳೂರು ನಾಗರಾಜ್, ಅಶ್ವತ್ಥಪ್ಪ, ಚನ್ನರಾಯಪ್ಪ, ಜಿ.ಕೃಷ್ಣಪ್ಪ, ಹರೀಶ್, ಸೋಮಶೇಖರ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....