ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ಅವಧಿ ವಿಸ್ತರಿಸಲು ಡಾ.ನಾಗರಾಜ್ ಒತ್ತಾಯ

Date:

ಕೋಲಾರ: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ಅವಧಿಯನ್ನು ವಿಸ್ತರಿಸುವಂತೆ ಆಗ್ನೇಯ ಪದವೀಧರರ ಕ್ಷೇತ್ರದ ಎನ್.ಡಿ.ಎ ಮೈತ್ರಿ ಕೂಟದ ಆಕಾಂಕ್ಷಿ ಹಾಗೂ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ‌ ಕೆ ನಾಗರಾಜ್ ಪ್ರಾದೇಶಿಕ ಚುನಾವಣಾ ಆಯುಕ್ತರನ್ನು ಒತ್ತಾಯಿಸಿದ್ದಾರೆ,

- Advertisement -

ಈ ಕುರಿತು ಪತ್ರಿಕ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಮುಂಬರುವ 2026ರ ಜೂನ್ ನಲ್ಲಿ ನಡೆಯಲಿರುವ ಆಗ್ನೇಯ ವಿಧಾನಪರಿಷತ್ ಗ ಚುನಾವಣೆ ನಡೆಯುವ ಸಲುವಾಗಿ ಮತದಾರ ಪಟ್ಟಿಯಲ್ಲಿ ಅರ್ಹ ಪದವೀಧರರು ಹಾಗೂ ಶಿಕ್ಷಕರು ನೋಂದಣಿ ಮಾಡಿಸಲು ಕೊನೆಯ ದಿನಾಂಕ ನವೆಂಬರ್ 6 ಮುಗಿದಿದ್ದು ಬಹುತೇಕ ಪದವೀಧರರಿಗೆ ಸರಿಯಾದ ಸಮಯ ಮತ್ತು ಮಾಹಿತಿ ಕೊರತೆಯಿಂದ ನೋಂದಣಿ ಮಾಡಿಸಲು ಸಾಧ್ಯವಾಗಿಲ್ಲ ನೋಂದಣಿ ಅವಧಿಯನ್ನು ವಿಸ್ತರಿಸಿ ಎಲ್ಲಾ ಅರ್ಹ ಪದವೀಧರರಿಗೆ ಹಾಗೂ ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕೆಂದು ಚುನಾವಣಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ…? ನ. 1ರಿಂದ ಡಿ.15 ರವರೆಗೆ ರಾಜ್ಯದಾದ್ಯಾಂತ ಸಿಪಿಎಂ ರಾಜಕೀಯ ಪ್ರಚಾರಾಂದೋಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪದವೀಧರ ಕ್ಷೇತ್ರದ ಮತದಾರರರ ಪಟ್ಟಿಯನ್ನು ಪ್ರತಿಯೊಂದು ಚುನಾವಣೆಯಲ್ಲಿ ಸಹ ಹೊಸದಾಗಿ ಪಟ್ಟಿ ತಯಾರಿಸಬೇಕಾಗಿದ್ದು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರರ ಪಟ್ಟಿಯಲ್ಲಿರುವ ಎಲ್ಲಾ ಪದವೀಧರರು ಸಹ ನಿಗದಿತ ನಮೂನೆಯಲ್ಲಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸ ಸಮಯ ಬೇಕಾಗಿದೆ ಇನ್ನೂ ಎರಡು ಬಾರಿ ಚುನಾವಣೆಗೆ ಸಂಬಂಧಿಸಿದಂತೆ ನೋಟಿಫಿಕೇಷನ್ ಹೊರಡಿಸಲಿದ್ದು ಪ್ರತಿಯೊಬ್ಬ ಪದವೀಧರರ ಮತದಾರರರು ಪಟ್ಟಿಯಲ್ಲಿ ತನ್ನ ಹೆಸರು ಸೇರಿಸಲು ಅವಧಿ ವಿಸ್ತರಿಸಿ ಅನುಕೂಲವಾಗುವಂತೆ ಮಾಡಬೇಕು ಎಂದು ಡಾ.ಕೆ ನಾಗರಾಜ್ ಮನವಿ ಮಾಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...