ಉತ್ತರ ಕನ್ನಡ | ಹನೂರು ರೈತರ ಎನ್ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹ

Date:

ಹನೂರು ತಾಲ್ಲೂಕಿನ ಮರಿಮಂಗಳ ಅರಣ್ಯ ಬೀಟ್ ವ್ಯಾಪ್ತಿಯ ತೋಮಿಯಾರ್ ಪಾಳ್ಯದಲ್ಲಿ ಮೂವರು ರೈತರನ್ನು ಎನ್‌ಕೌಂಟರ್ ಹೆಸರಿನಲ್ಲಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕರ್ನಾಟಕ ಪ್ರಾಂತ ರೈತ ಸಂಘ (KPRS) ಉತ್ತರ ಕನ್ನಡ ಜಿಲ್ಲಾ ಸಮಿತಿ, ಘಟನೆಗೆ ಕಾರಣರಾದ ಎಲ್ಲರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದೆ.

- Advertisement -

ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಈ ಕಗ್ಗೊಲೆಗಳನ್ನು KPRS ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದ್ದು, ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಬುಡಕಟ್ಟು ಹಾಗೂ ಇತರೆ ಜನರು ಅರಣ್ಯ ಇಲಾಖೆಯಿಂದ ಅನುಭವಿಸುತ್ತಿರುವ ದಬ್ಬಾಳಿಕೆಗೆ ಈ ಘಟನೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಶಾಂತಾರಾಮ ನಾಯಕ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಶಿರಸಿ | ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ನಡೆದ ಸ್ಥಳದ ‘ಶುದ್ಧೀಕರಣ’ ಖಂಡನೀಯ: ಪ್ರಸನ್ನ ಶೆಟ್ಟಿ

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನ ಅಧೀನದ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಸುತ್ತಿರುವ ಮ್ಯಾಜಿಸ್ಟ್ರೇಟ್ ತನಿಖೆಯನ್ನು ಹಿಂಪಡೆದು, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕಗ್ಗೊಲೆಗೆ ಒಳಗಾದ ರೈತರ ಕುಟುಂಬಗಳಿಗೆ ಕನಿಷ್ಠ ₹5 ಕೋಟಿ ಪರಿಹಾರ ಘೋಷಿಸಬೇಕು. ಅಲ್ಲದೆ, ಎನ್‌ಕೌಂಟರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಅನ್ವಯ ಕೊಲೆ ಪ್ರಕರಣ ದಾಖಲಿಸಿ, ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು KPRS ಜಿಲ್ಲಾ ಸಮಿತಿ ಆಗ್ರಹಿಸಿದೆ.

ಇದೇ ವೇಳೆ, ಅಖಿಲ ಭಾರತ ಕಿಸಾನ್ ಸಭಾ (AIKS) ರಾಷ್ಟ್ರೀಯ ಸಹ ಕಾರ್ಯದರ್ಶಿ ಕಾಮ್ರೇಡ್ ಡಿ. ರವೀಂದ್ರನ್ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ. ಯಶವಂತ ಟಿ. ಅವರ ನೇತೃತ್ವದಲ್ಲಿ ರೈತ ಸಂಘದ ಉನ್ನತ ಮಟ್ಟದ ನಿಯೋಗವು ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದೆ. ಅಲ್ಲದೆ, ಅಂತಿಮ ಸಂಸ್ಕಾರದಲ್ಲೂ ನಿಯೋಗ ಭಾಗವಹಿಸಲಿದೆ ಎಂದು ಶಾಂತಾರಾಮ ನಾಯಕ ತಿಳಿಸಿದ್ದಾರೆ.

ಘಟನೆ ದೇಶದಾದ್ಯಂತ ತೀವ್ರ ಆತಂಕ ಮೂಡಿಸುವಂತಹ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಪ್ರಕರಣದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಮೃತ ರೈತರ ಕುಟುಂಬಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೋರಾಟವನ್ನು ಮುಂದುವರಿಸಲು ರೈತ ಸಂಘದ ಉನ್ನತ ಸಮಿತಿ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...