ಕಾರ್ಮಿಕ ಸಂಹಿತೆಗಳು ರದ್ದುಗೊಳಿಸಿ ದುಡಿಯುವ ವರ್ಗದ ರಕ್ಷಣೆಗೆ ಸರ್ಕಾರ ಮುಂದಾಗಲು ಸಿಐಟಿಯು ಪ್ರತಿಭಟನೆ

Date:

ಕೋಲಾರ: ಕಾರ್ಮಿಕರಿಗೆ ಸಂಬಂಧಿಸಿದ 29 ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು. ಈ ನೀತಿಯಿಂದಾಗಿ ದುಡಿಯುವ ವರ್ಗವನ್ನು ಬೀದಿಗೆ ತಂದು ನಿಲ್ಲುಸುವ ಉನ್ನಾರವಾಗಿದೆ ಕಾರ್ಮಿಕ ವಿರೋಧಿ ಈ ಸಂಹಿತೆಗಳನ್ನು ರದ್ದುಗೊಳಿಸಿ ಕಾರ್ಮಿಕ ವರ್ಗದ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ ಎಂದು ನಗರದ ಮೆಕ್ಕೆ ವೃತ್ತದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂದ ನಂತರದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಹ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಇತ್ತಿಚೆಗೆ ನಡೆದ ಬಿಹಾರ್ ರಾಜ್ಯದ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿ ಅಧಿಕಾರಕ್ಕೆ ಬಂದ ತಕ್ಷಣವೇ ಕಾರ್ಮಿಕರ ಸಂಹಿತೆಗಳು ಜಾರಿ ಮಾಡಿ ಕಾರ್ಮಿಕರನ್ನು ಬೀದಿಗೆ ನಿಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಿಕೃಷ್ಣ ಮಾತನಾಡಿ ದೇಶದಲ್ಲಿ ಶೇಕಡಾ 70ರಷ್ಟು ದುಡಿಯುವ ವರ್ಗದ ಕಾರ್ಮಿಕರು ಈ ಸಂಹಿತೆಗಳ ವ್ಯಾಪ್ತಿಗೆ ಒಳಪಡುವುದೇ ಇಲ್ಲ. ಕಾರ್ಮಿಕ ಸಂಘಗಳ ಮುಷ್ಕರದ ಹಕ್ಕುಗಳನ್ನು ಹಂತ ಹಂತವಾಗಿ ನಿರ್ಬಂಧಿಸಲಾಗುತ್ತಿದೆ. ಸಂಘಟಿತರಾಗಿ ಕಾರ್ಯಕ್ರಮಗಳನ್ನು ನಡೆಸಿದರೆ ಅದೂ ಅಪರಾಧ ಆಗುತ್ತದೆ. ಬಂಡವಾಳಶಾಹಿಗಳ ಹಿತಕ್ಕಾಗಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ ಎಂದು ದೂರಿದರು.

ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ ಮಾತನಾಡಿ ನರೇಂದ್ರ ಮೋದಿ ಅವರು ದೇಶವನ್ನು ಹಿಂದುತ್ವದ ಆಧಾರದಲ್ಲಿ ಕಟ್ಟಬೇಕು ಎನ್ನುತ್ತಾರೆ. ಇಲ್ಲಿ ಕೆಲಸ ಮಾಡುವ ಬಹುತೇಕರು ಹಿಂದೂಗಳೇ ಆಗಿದ್ದಾರೆ. ಆದರೆ ಹಿಂದೂ ಎನ್ನುವ ಪದವನ್ನು ಬಂಡವಾಳಶಾಹಿಗಳ ಹಿತ ಕಾಯಲು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಕಾರ್ಮಿಕರನ್ನು ಜೀತದಾಳು ಮಾಡಲು ಹೊರಟಿದೆ ಈ ಸಂಹಿತೆಗಳು ಅನುಷ್ಠಾನವಾದರೆ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಇರುವುದಿಲ್ಲ. 8 ಗಂಟೆಗಳ ಬದಲಾಗಿ 12 ಗಂಟೆ ಕೆಲಸ ಮಾಡಬೇಕು. ಹೀಗೆ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ರದ್ದುಗೊಳಿಸುವಂತೆ ನಡೆಸುತ್ತಿರುವ ಹೋರಾಟವು ಅಪರಾಧದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ದೇಶದಲ್ಲಿರುವ ಅಸಂಘಟಿತ, ಅನೌಪಚಾರಿಕ ಕಾರ್ಮಿಕರನ್ನು ಕಾರ್ಮಿಕ ಕಾನೂನಿನ ಅಡಿ ತರಬೇಕು ಎನ್ನುವ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ತಿರಸ್ಕರಿಸಿದೆ ಇದರಿಂದ ಕಾರ್ಮಿಕರು ನಾನಾ ಸೌಲಭ್ಯ ವಂಚಿತರಾಗುತ್ತಾರೆ ಮುಷ್ಕರ ಮಾಡುವವರಿಗೆ, ಬೆಂಬಲ ಸೂಚಿಸುವವರಿಗೆ ಜೈಲು, ದಂಡ, ಕೆಲಸದಿಂದ ತೆಗೆಯುವ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಇದರಿಂದ ಇನ್ನು ಮುಂದೆ ಮುಷ್ಕರ ಮಾಡುವಂತಿಲ್ಲ. ಸಂಘಗಳನ್ನು ಕಟ್ಟುವಂತಿಲ್ಲ. ಇಂತಹ ಮಾರಕವಾದ ಅಂಶಗಳನ್ನು ಈ ಕಾಯಿದೆಯಲ್ಲಿ ಅಡಕಗೊಳಿಸಲಾಗಿದೆ ಎಂದರು.

ಇದನ್ನು ಓದಿದ್ದೀರಾ..? ಆಗ್ನೇಯ ಪದವೀಧರರ ಕ್ಷೇತ್ರ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪೂರ್ವಭಾವಿ ಸಭೆ

ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ , ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶ್, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಸಿಐಟಿಯು ಜಿಲ್ಲಾ ಪದಾಧಿಕಾರಿಗಳಾದ ಎಂ.ಭೀಮರಾಜ್, ಬಿ.ಎಲ್.ಕೇಶವರಾವ್, ಎನ್.ಕಲ್ಪನಾ, ಮಂಜುಳ, ವೆಂಕಟಲಕ್ಷ್ಮಿ, ಲಕ್ಷ್ಮಿದೇವಿ, ಲೋಕೇಶ್ವರಿ, ಮೋಹನ್, ಅಪ್ಪಯ್ಯಣ್ಣ, ಆರೋಗ್ಯನಾಥನ್, ಶಿವರಾಜ್, ಅಂಜಿನಪ್ಪ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜನಗಣತಿ-2027 ನಿಖರವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮುಂದಿನ ಹತ್ತು ವರ್ಷಗಳ ಅಭಿವೃದ್ಧಿ ಯೋಜನೆ, ಬಜೆಟ್ ಹಂಚಿಕೆ, ಎಸ್‌ಸಿಪಿ-ಟಿಎಸ್‌ಪಿ ಅನುದಾನ...

ಗೆಲುವಿಗಿಂತ ಕ್ರೀಡಾಸ್ಫೂರ್ತಿ ಮುಖ್ಯ: ಪತ್ರಕರ್ತರಿಗೆ ಸಚಿವ ನರೇಂದ್ರಸ್ವಾಮಿ ಕಿವಿಮಾತು

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ...

ಮಂಡ್ಯ | ಪ್ರತಿಭೆ ಅನಾವರಣಕ್ಕೆ ʻಯುವಜನೋತ್ಸವʼ ಉತ್ತಮ ವೇದಿಕೆ: ಶಾಸಕ ರವಿಕುಮಾರ್.ಪಿ

ಯುವಜನತೆ ತಮ್ಮಲ್ಲಿರುವ ಸುಪ್ತ ಪ್ರತಿಭೆ ಹಾಗೂ ವಿಶಿಷ್ಟ ಸಾಮರ್ಥ್ಯವನ್ನು ಸ್ಪರ್ಧೆಗಳ ಮೂಲಕ...

ಮೈಸೂರಿನಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ಗೆ ಅದ್ಧೂರಿ ಚಾಲನೆ

ರಾಜ್ಯದ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಹಾಗೂ ಯುವ ಆಟಗಾರರ ಕ್ರೀಡಾ...