ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ

Date:

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 94ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಸೋಮವಾರ ನಗರದ ಸಾಯಿಬಾಬಾ ಮಂದಿರ ದೇವೇಗೌಡರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿದರು.

- Advertisement -

ನಂತರ ಮಾಧ್ಯಮಗಳೊಂದಿಗೆ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ದೇಶದಲ್ಲಿ ಪ್ರಧಾನಿಯಾಗಿ ರೈತ ನಾಯಕರಾಗಿ ರಾಷ್ಟ್ರಕ್ಕೆ ನೀಡಿದ ಕೊಡುಗೆ ಅಪಾರವಾದದ್ದು ರಾಜಕೀಯ ವಲಯದಲ್ಲಿ ಎಲ್ಲಾ ಪಕ್ಷಗಳ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ ಕೃಷಿ ನೀರಾವರಿ, ಗ್ರಾಮೀಣ ವಲಯಕ್ಕೆ ಅವರ ಕೊಡುಗೆ ಅಪಾರ ತಮ್ಮ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೇವೇಗೌಡರ ಗರಡಿಯಲ್ಲಿ ಬೆಳದ ಎಷ್ಟೋ ನಾಯಕರು ಇವತ್ತು ರಾಜಕಾರಣದಲ್ಲಿ ಬೇರೆ ಬೇರೆ ಪಕ್ಷಗಳಲ್ಲಿ ಇದ್ದಾರೆ ದೇಶದ ಹಿತಾಸಕ್ತಿ ಹಾಗೂ ರೈತರ ಹಿತಾಸಕ್ತಿಯಲ್ಲಿ ಇವತ್ತು ಕೂಡ ರಾಜ್ಯಸಭೆಯಲ್ಲಿ ಇದ್ದು ಪ್ರಶ್ನೆ ಮಾಡಿದ್ದಾರೆ ಅವರ ವ್ಯಕ್ತಿತ್ವ ಹಾಗೂ ಮೌಲ್ಯಾಧಾರಿತ ಸಿದ್ದಾಂತವು ಇವತ್ತಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಮುಂದಿನ ದಿನಗಳಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ನಿಖಿಲ್ ಕುಮಾರಸ್ವಾಮಿ ನಾಯಕತ್ವದಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಲಿದ್ದು ಜನಪರ, ರೈತ ಪರ ಆಡಳಿತ ಬರಲಿದೆ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ದೇಶದ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಛಾಪು ಮೂಡಿಸಿದ ನಾಯಕ. ರೈತರ ಸಮಸ್ಯೆ, ಗ್ರಾಮೀಣಾಭಿವೃದ್ಧಿ ಹಾಗೂ ಜನಸಾಮಾನ್ಯರ ಪರ ಹೋರಾಟದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರ ಸರಳತೆ ಮತ್ತು ಜನಪರ ಆಡಳಿತ ಇಂದಿಗೂ ಅನೇಕರಿಗೆ ಪ್ರೇರಣೆ. ಅವರ ಜನ್ಮದಿನವನ್ನು ಹಬ್ಬದಂತೆ ದೇಶಾದ್ಯಂತ ಆಚರಿಸುತ್ತಿದ್ದಾರೆ ಎಂದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ ರಾಜ್ಯದಿಂದ ಹೋಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಮೊದಲಿಗರು ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿ ಅದರ ಆಸಿತ್ವವನ್ನು ಉಳಿಸಿದ್ದಾರೆ ಎಂದರೆ ಅದಕ್ಕೆ ಕಾರಣ ದೇವೇಗೌಡರು ಕಾರಣ ಅವರಿಗೆ ದೇವರು ಆರೋಗ್ಯ ಆಯಸ್ಸು ಹೆಚ್ಚಾಗಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಈ ಸಂದರ್ಭದಲ್ಲಿ ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅನುಷ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಡಾ ಡಿ.ಕೆ ರಮೇಶ್, ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಕೋಮುಲ್ ನಿರ್ದೇಶಕ ವಡಗೂರು ಹರೀಷ್, ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ ಮುಖಂಡರಾದ ಯಲವಾರ ಸೊಣ್ಣೇಗೌಡ, ಮೂರಾಂಡಹಳ್ಳಿ ಬಾಬು, ವಡಗೂರು ರಾಮು, ಲಕ್ಷ್ಮಣ್ ಗೌಡ, ಲೋಕೇಶ್ ಮರಿಯಪ್ಪ, ಕುರಗಲ್ ರಮೇಶ್, ಯಲುವಗುಳಿ ನಾಗರಾಜ್, ಬಲಿಜ ಸಂಘದ ತೋಟಗಳ ಅಶೋಕ್, ಚಂಬೆ ರಾಜೇಶ್, ದಿಂಬ ನಾಗರಾಜ್ ಗೌಡ, ಮುದುವಾಡಿ ಮಂಜುನಾಥ್, ಛತ್ರಕೋಡಿಹಳ್ಳಿ ಕುಮಾರ್, ಅಮ್ಮನಲ್ಲೂರು ರಮೇಶ್, ಹೋಲೇರಹಳ್ಳಿ ಅಶೋಕ್, ಜಯನಗರ ಕಾರ್ತಿಕ್, ಜನಪನಹಳ್ಳಿ ಆನಂದ್, ವಿಜಯ್ ಗೌಡ, ವಿಕೆ ರಾಜೇಶ್, ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...