ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು : ಸಂಸದ ಎಂ. ಮಲ್ಲೇಶ್ ಬಾಬು.

Date:

ಕೋಲಾರ: ರೈತರಿಗೆ ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಅಗತ್ಯ ಪ್ರಮಾಣಕ್ಕನುಗುಣವಾಗಿ ವಿತರಿಸಲು ಕೃಷಿ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಎಂ. ಮಲ್ಲೇಶ್ ಬಾಬು ಒತ್ತಾಯಿಸಿದರು.

- Advertisement -

ಗುರುವಾರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ದಿಶಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಜತೆಗೆ, ರಾಜ್ಯ ಸರ್ಕಾರದ ಕಾರ್ಯಕ್ರಮಗಳು, ಕಾಮಗಾರಿಗಳ ಪರಿಶೀಲನೆ, ಹಿಂದಿನ ಸಭೆಯ ಅನುಪಾಲನೆ ಕುರಿತು ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೆಲ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಕೊಂಡಾಡಿದ ಸಂಸದರು ಕೆಲ ಅಧಿಕಾರಿಗಳ ಕಾರ್ಯವೈಖರಿಗೆ ಕಿಡಿಕಾರಿದರು. ವಿವಿಧ ಕೆಲಸ ಕಾರ್ಯಗಳ ಕುರಿತು ಕೆಲ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ಅವರು ನೀಡಿದರು.

ರೈಲ್ವೆ ಕಾಮಗಾರಿಗಳು ಕುಂಟುತ್ತಾ ಸಾಗುತ್ತಿರುವ ಬಗ್ಗೆ ಅವರು ಸಭೆಯಲ್ಲಿದ್ದ ರೈಲ್ವೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯಲ್ಲಿ ರಸಗೊಬ್ಬರ ದಸ್ತಾನು ಸಮರ್ಪಕವಾಗಿಲ್ಲದಿರುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು. ಈ ಬಗ್ಗೆ ಸಂಸದ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ವಿಮರ್ಶೆಗೆ ಗುರಿಯಾಗಿಸಿದರು.

ಅಧಿಕಾರಿಗಳು ಸರಿಯಾಗಿ ರಸಗೊಬ್ಬರ ಬೇಡಿಕೆಯನ್ನು ಅಂದಾಜಿಸಿಲ್ಲ. ಇದರಿಂದಾಗಿ ರೈತರಿಗೆ ಬೇಡಿಕೆಗನುಗುಣವಾಗಿ ರಸಗೊಬ್ಬರ ದೊರೆಯುತ್ತಿಲ್ಲ. ವೈಜ್ಞಾನಿಕ ರೀತಿಯಲ್ಲಿ ಬೇಡಿಕೆಗಳನ್ನು ಪೂರೈಸಲು ಕ್ರಮ ವಹಿಸಬೇಕು. ಇಲ್ಲವಾದರೆ ಖಾಸಗಿ ವ್ಯಾಪಾರಸ್ಥರು ರೈತರನ್ನು ಸುಲಿಗೆ ಮಾಡುವ ಸಂಭವ ಇರುತ್ತದೆಂದು ಶಾಸಕ ಕೊತ್ತೂರು. ಜಿ. ಮಂಜುನಾಥ್ ತಿಳಿಸಿದರು.

ತಡವಾಗಿ ಬಿದ್ದ ಮಳೆಯ ನಂತರ ಕೃಷಿ ಚಟುವಟಿಕೆಗಳು ಗರಿಗೆದರಿವೆ. ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಉತ್ತರಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು,ಪೆಬ್ರವರಿ ೨೦೨೬ರ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ತಿಳಿಸಿದರು.

ಕೋಲಾರ ಹಾಗೂ ಮಾಲೂರು ವಿಧಾಸಭಾ ಕ್ಷೇತ್ರಗಳಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಎಂಎಲ್ಸಿ ಅನಿಲ್ ಕುಮಾರ್ ಸಾರ್ವಜನಿಕ ರಸ್ತೆ ಹಾಕುವ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಅರಣ್ಯ ಇಲಾಖೆಯಿಂದ ಮರಗಳನ್ನು ಹಾಕಿದ್ದು ಪ್ರಸ್ತುತ ಅರಣ್ಯ ಇಲಾಖೆಯಿಂದ ಅವನ್ನು ತೆರವುಗೊಳಿಸಡಾ ಹೊರಟು ರಸ್ತೆ ಕಾಮಗಾರಿ ಮುಂದುವರಿಯಲು ಬಿಡುತ್ತಿಲ್ಲ ಎಂದು ಕೋಲಾರ ಶಾಸಕರು ಆಗ್ರಹ ವ್ಯಕ್ತಪಡಿಸಿದರು. ಎಲ್ಲರಿಗೂ ಇದಕ್ಕೆ ದನಿಗೂಡಿಸಿದರು. ಯಾವುದೇ ಅನುಮತಿ ಇಲ್ಲದೆ ರಸ್ತೆ ಕಾಮಗಾರಿ ಮುಂದುವರೆಸಲು ಆದೇಶಿಸಿದರು.

ಬಡವರ ಜಮೀನನ್ನು ಅರಣ್ಯ ಒತ್ತುವರಿ ನೆಪದಲ್ಲಿ ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ಕೂಡಲೇ ಒತ್ತುವರಿ ತೆರವು ಕಾರ್ಯಚರಣೆ ಸ್ಥಗಿತಗೊಳಿಸಿ ಜಂಟಿ ಸರ್ವೇ ನಡೆಸಿ ನಂತರ ಮುಂದುವರೆಯಲು ಆದೇಶಿಸುವಂತೆ ಸಭೆಗೆ ತಿಳಿಸಿದರು.ವಿಧಾನ ಪರಿಷತ್ ಶಾಸಕ ಇಂಚರ ಗೋವಿಂದರಾಜು ದನಿಗೂಡಿಸಿದರು.

ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಸುಪ್ರೀಂ ಕೋರ್ಟ್ ಆದೇಶದಂತೆ ಒತ್ತುವರಿ ತೆರವು ಕಾರ್ಯಚರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಹಿಂಜರಿಯುವ ಪ್ರಮೇಯ ಇಲ್ಲ ಎಂದು ಅರಣ್ಯ ಸಂರಕ್ಷಣಾ ಅಧಿಕಾರಿ ಉತ್ತರಿಸಿದರು.

ಜಲಜೀವನ್ ಮಿಷನ್ ಅಡಿ ಹಲವು ಗ್ರಾಮಗಳಿಗೆ ನೀರಿನ ಪೂರೈಕೆ ಆಗುತ್ತಿಲ್ಲ. ಹಲವು ಕಾಮಗಾರಿಗಳನ್ನು ಈವರೆಗೆ ಕೈಗೆತ್ತಿಕೊಂಡಿಲ್ಲ ಎಂದು ವಿಧಾನ ಪರಿಷತ್ ಶಾಸಕ ಎಂ. ಎಲ್. ಅನಿಲ್ ಕುಮಾರ್ ಆಗ್ರಹಿಸಿದರು ಇದಕ್ಕೆ ಕೋಲಾರ ಶಾಸಕ ಡಾ. ಕೊತ್ತೂರ್. ಜಿ ಮಂಜುನಾಥ್ ದನಿಗೂಡಿಸಿದರು. ಮೊದಲು ಓವರ್ ಹೆಡ್ ಟ್ಯಾಂಕ್ ಗಳನ್ನು ನಿರ್ಮಿಸಿ, ಕೊಳವೆಬಾವಿ ಕೊರೆಸಿ ನಂತರ ಪೈಪ್ಲೈನ್ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಲು ಅನುದಾನವನ್ನು ನೀಡುತ್ತಿದ್ದು ಸುಮಾರು ೧೫೦ ಕೂ ಹೆಚ್ಚಿನ ಮನೆಗಳಿಗೆ ಎರೆಡೆರಡು ಬಿಲ್ ಗಳು ಪಾವತಿ ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಇದನ್ನು ಓದಿದ್ದೀರಾ..? ಅಂಗನವಾಡಿ ಕಾರ್ಯಕರ್ತೆಗೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಬಿಳ್ಕೊಡುಗೆ ಸಮಾರಂಭ

ಈ ಸಂದರ್ಭದಲ್ಲಿ ಶ್ರೀನಿವಾಸಪುರ ಶಾಸಕ ಜಿ. ಕೆ. ವೆಂಕಟಾಶಿವಾರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ. ನಿಖಿಲ್, ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಟಿ. ಕೆ. ರಮೇಶ್,ಯೋಜನ ನಿರ್ದೇಶಕರು,ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು , ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...