ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ

Date:

ಬಾಗೇಪಲ್ಲಿ : ಜನಸ್ಪಂದನ ಕಾರ್ಯಕ್ರಮದ ಮೂಲಕ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಸ್ಥಳದಲ್ಲೇ ವಿತರಣೆ ಯಾವುದೇ ಮಧ್ಯವರ್ತಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ

- Advertisement -

ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಈ ಜನಸ್ಪಂದನ ಕಾರ್ಯಕ್ರಮ ಮಾಡಲಾಗುತ್ತಿದೆ ಹಾಗೂ ಬಡವರಿಗೋಸ್ಕರ ಮಾಡುತ್ತಿರುವ ಈ ಕಾರ್ಯಕ್ರಮಕ್ಕೆ ಜನರು ಸ್ಪಂದಿಸಬೇಕು ವಿವಿಧ ಇಲಾಖೆಗಳಿಂದ ಸರ್ಕಾರಿ ಸೌಲಭ್ಯಗಳು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂದಾಯ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಜನಸ್ಪಂದನ ಕಾರ್ಯಕ್ರಮ ಹಾಗೂ ಸರ್ಕಾರದಿಂದ ವಿವಿಧ ಇಲಾಖೆ ಯೋಜನೆಯಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಸೌಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಬಾಗೆಪಲ್ಲಿ ತಾಲೂಕಿನ ಬಿಳ್ಳೂರು ಸರ್ಕಾರಿ ಪ್ರೌಢಶಾಲಾ ಆವರಣ ಹಮ್ಮಿಕೊಳ್ಳಲಾಗಿತ್ತು. ಈ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಎಸ್. ಎನ್ ಸುಬ್ಬಾರೆಡ್ಡಿ ಅವರು ಮಾತನಾಡಿ ಪ್ರತಿಯೊಂದು ಪಂಚಾಯತಿ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಹಾಗೂ ತಾವುಸಹ ಈ ಕಾರ್ಯಕ್ರಮಕ್ಕೆ ಸ್ಪಂದಿಸಬೇಕು ಜನರು ಸರ್ಕಾರಿ ಕಚೇರಿಗಳನ್ನು ಅಳದಾಡುವುದರ ಬದಲು ಸ್ಥಳದಲ್ಲೇ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಇನ್ನೂ ಕಂದಾಯ ಇಲಾಖೆಯಿಂದ ನೂರು ಜನರಿಗೆ ಪಿಂಚಣಿ ಸೌಲಭ್ಯ, 45 ಹಕ್ಕುಪತ್ರಗಳು, ಸಾಗುವಳಿ ಚೀಟಿಗಳ ಖಾತೆ 10, ಸ್ಮಶಾನಗಳಿಗೆ ಜಾಗ, ನೂರು ಜನರಿಗೆ ಜಮೀನಿನ ಪೋಡಿ, ಬರಿ ಕಂದಾಯ ಇಲಾಖೆಯಿಂದ ಮಾತ್ರ 490 ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ, ಜನರ ಮನೆಯ ಬಳಿ ಬಂದು ಕೆಲಸ ಮಾಡಲಾಗುತ್ತದೆ. ಹಾಗೂ ತಾಲೂಕು ಪಂಚಾಯಿತಿಯಿಂದ 300 ಜನ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳು , ಇನ್ನು ಆರೋಗ್ಯ ಇಲಾಖೆ, ಕಾರ್ಮಿಕರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ಇನ್ನು ಅನೇಕ ಇಲಾಖೆಗಳು ನಿಮಗೋಸ್ಕರ ಇವತ್ತು ಸೌಲಭ್ಯಗಳು ವಿತರಿಸಲಾಗುತ್ತಿದೆ. ಬಡವರಿಗೋಸ್ಕರ ಬಡವರಿಗಾಗಿ ಈ ಜನಸ್ಪಂದನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಲ್ಲರೂ ಇಂತಹ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ಮನೀಷಾ ಎಸ್ ಪತ್ರಿ ಮಾತನಾಡಿ ಪ್ರತಿಯೊಬ್ಬರು ಜನಸ್ಪಂದನ ಕಾರ್ಯಕ್ರಮದ ವಿಶೇಷತೆ ಏನು ಎಂಬುದು ತಿಳಿಯಬೇಕು ಇದು ಯಾವುದೇ ರಾಜಕೀಯ ಉದ್ದೇಶದಿಂದ ಅಲ್ಲ ಕರ್ನಾಟಕ ಸರ್ಕಾರದ ವತಿಯಿಂದ ಮಾಡಲಾಗುತ್ತಿರುವ ಒಂದು ಕಾರ್ಯಕ್ರಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಮಾಡಲಾಗುತ್ತಿದೆ ವಿವಿಧ ಜನರಿಗೆ ಸರ್ಕಾರಿ ಸೌಲತ್ತುಗಳನ್ನು ವಿತರಿಸಲು ಜನಸ್ಪಂದನವನ್ನು ಮಾಡಲಾಗುತ್ತಿದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿ ಮಹಿಳೆಯರಿಗೆ ಶ್ರೀಮಂತವನ್ನು ಮಾಡಲಾಯಿತು.

ಇದನ್ನು ಓದಿದ್ದೀರಾ..? ಕೋಲಾರ ಜಿಲ್ಲೆ ಬಂದ್ ಬಹುತೇಕ ಯಶಸ್ವಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ಎನ್. ಮನೀಷಾ ಮಹೇಶ್ ಪತ್ರಿ, ಇಒ ಜಿ.ವಿ.ರಮೇಶ್, ಡಾ,, ಸಿ.ಎನ್. ಸತ್ಯನಾರಾಯಣರೆಡ್ಡಿ, ಶಿಶುಅಭಿವೃದ್ದಿ ಇಲಾಖೆಯ ರಾಮಚಂದ್ರ, ಬಿ.ಇ.ಒ. ವೆಂಕಟೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶಿವಪ್ಪ, ಪಶುವೖದ್ಯಾದಿಕಾರಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆಯ ಲಲಿತ, ಕೃಷಿ ಇಲಾಖೆಯ ಶ್ರೀನಿವಾಸ್, ಬೆಸ್ಕಾಂ ಇಲಾಖೆಯ ಸೋಮಶೇಖರ್, ಶ್ರೀನಿವಾಸ್, ಅರಣ್ಯ ಇಲಾಖೆಯ ವಾಸುದೇವಮೂರ್ತಿ, ಆಹಾರ ಇಲಾಖೆಯ ಪುಷ್ಪಾ, ರೇಷ್ಮೆ ಇಲಾಖೆಯ ಸುರೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ನಿರ್ಮಲಮ್ಮ, ಪಿ.ಡಿ.ಒ. ಭಾಗ್ಯಮ್ಮ, ಮುಖಂಡರಾದ ಪಿ. ಮಂಜುನಾಥರೆಡ್ಡಿ, ಕೆ.ಕೆ. ವೆಂಕಟೇಶ್, ಕೆ.ಸಿ. ಚಂದ್ರಶೇಖರರೆಡ್ಡಿ, ಬಿ.ವಿ. ವೆಂಕಟರವಣ, ಪ್ರಸನ್ನಕುಮಾರ್, ರಾಮಲಿಂಗಾರೆಡ್ಡಿ, ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...