ನಷ್ಟ ಆದಂತಹ ರೈತರ ಬೆಳೆಗಳಿಗೆ ಪರಿಹಾರಕ್ಕೆ ಒತ್ತಾಯ

Date:

ಕೋಲಾರ: ಇತ್ತಿಚೆಗೆ ಬಿದ್ದ ಬಾರಿ ಮಳೆಗೆ ನಷ್ಟವಾದ ರೈತರ ಬೆಳೆಗಳಿಗೆ ಕೂಡಲೇ ಪರಿಹಾರ ಕೊಡಬೇಕೆಂದು ನರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಒತ್ತಾಯಿಸಿದರು

- Advertisement -

ತಾಲೂಕಿನ ನರಸಾಪುರ ಗ್ರಾಮದಲ್ಲಿ ಮಳೆಯ ನೀರು ಹರಿದು ನಷ್ಟವಾಗಿರುವ ಕೃಷಿ ಜಮೀನುಗಳ ವೀಕ್ಷಣೆಗಾಗಿ ಭೇಟಿ ನೀಡಿ ಬೆಳೆಗಳ ಪರಿವೀಕ್ಷಣೆ ಮಾಡಿ ಮಾತನಾಡಿ ಕೆ.ಸಿ ವ್ಯಾಲಿ ಯೋಜನೆಯ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿಯಿಂದ 3 ವರ್ಷಗಳ ಹಿಂದೆ ಇದೇ ಸಮಸ್ಯೆ ಉಂಟಾಗಿ ಅನೇಕ ರೈತರು ನಷ್ಟ ಅನುಭವಿಸಿದರು ಮಳೆಯಿಂದ ಮಳೆಯ ನೀರು ಮತ್ತು ಕೆ.ಸಿ ವ್ಯಾಲಿ ನೀರು ಎರಡು ಜೋಡಣೆಯಾಗಿ ಹರಿದ ಪರಿಣಾಮ ರೈತರ ಜಮೀನುಗಳಿಗೆ ನೀರು ನುಗ್ಗಿ ಸುಮಾರು 200 ರಿಂದ 250 ಎಕರೆ ಕೃಷಿ ಭೂಮಿಯಲ್ಲಿ ಬೆಳೆದಂತ ತರಕಾರಿ ಬೆಳೆಗಳು ನಷ್ಟವಾಗಿದ್ದು, ರೈತರು ಲಕ್ಷಾಂತರ ರೂಗಳ ನಷ್ಟ ಅನುಭವಿಸಿದ್ದಾರೆ, ಕೆಸಿ ವ್ಯಾಲಿ ಯೋಜನೆಯ ಕಾಲುವೆ ನಿರ್ಮಾಣ ಸಂದರ್ಭದಲ್ಲಿ ಕಾಲುವೆಯ ಕಟ್ಟಡವನ್ನು ಎತ್ತರ ಮಾಡಿದ್ದರೆ ಹಾಗೂ ತಡೆಗೋಡೆಯನ್ನು ಸರಿಯಾಗಿ ನಿರ್ಮಾಣ ಮಾಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆರೋಪಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರೈತರ ತೊಂದರೆಗಳಿಗೆ ಕೆ.ಸಿ ವ್ಯಾಲಿ ಅಧಿಕಾರಿಗಳೇ ನೇರ ಹೊಣೆಗಾರರಾಗಿದ್ದಾರೆ ಯೋಜನೆಯ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿಯಿಂದ ಅವಾಂತರ ಸೃಷ್ಟಿಯಾಗಿದೆ, ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ರೈತರ ಬಗ್ಗೆ ಕಾಳಜಿ ವಹಿಸಬೇಕಿತ್ತು ಅನಾಹುತವನ್ನು ತಪ್ಪಿಸಬಹುದಾಗಿತ್ತು, ನರಸಾಪುರ ದಿನ್ನೆಹೊಸಳ್ಳಿ ಡಾಂಬರು ರಸ್ತೆಯ ಮೇಲೆ ನೀರು ಹರಿದು ರಸ್ತೆ ಕಿತ್ತು ಹೋಗಿದೆ ಕೂಡಲೇ, ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು ‌

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ ಕೆ.ಸಿ ವ್ಯಾಲಿ ಯೋಜನೆಯ ಇಂಜಿನಿಯರ್ ಗಳು ಕಾಮಗಾರಿಯನ್ನು ಮಾಡುವ ಸಂದರ್ಭದಲ್ಲಿ ಸಣ್ಣ ಕಾಲುವೆಯನ್ನು ನಿರ್ಮಾಣ ಮಾಡಿಲ್ಲ ಅದರಿಂದಲೇ ರೈತರ ತೋಟಗಾರಿಕಾ ಬೆಳೆ ಮತ್ತು ಕೃಷಿ ಬೆಳೆಗಳ ಮೇಲೆ ಹರಿದು ನಷ್ಟ ಅನುಭವಿಸಿದ್ದಾರೆ ಮುಂದಿನ ದಿನಗಳಲ್ಲಿ ಆಗಬಹುದಾದಂತಹ ಸಮಸ್ಯೆಗಳ ಬಗ್ಗೆ ಗಮನದಲ್ಲಿಟ್ಟುಕೊಂಡು ಕಾಲುವೆ ಕಟ್ಟಡ ನಿರ್ಮಾಣ ಮಾಡಬೇಕು ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಈ ರೀತಿಯ ಮಳೆ ಹೆಚ್ಚಾಗಿ ಬಿದ್ದಾಗ ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಆರೋಪಿಸಿದರು

ಸ್ಥಳದಲ್ಲಿ ಇದ್ದ ನರಸಾಪುರ ಕಂದಾಯ ವೃತ್ತದ ಕಂದಾಯ ನಿರೀಕ್ಷಕ ಲೋಕೇಶ್ ಮಾತನಾಡಿ ತೋಟಗಾರಿಕಾ ಮತ್ತು ಕೃಷಿ ಬೆಳಿಗಳಿಗೆ ಮಳೆ ನೀರು ಹರಿದಿದ್ದು ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಹಾಗೂ ಅವರನ್ನು ಸ್ಥಳ ವೀಕ್ಷಣೆಗೆ ಕರೆದುಕೊಂಡು ಬರುವ ಪ್ರಯತ್ನ ಮಾಡಲಾಗುತ್ತದೆ, ನೀರು ಹರಿದಿರುವಂತಹ ಹಾಗೂ ನಷ್ಟ ಉಂಟಾಗಿರುವಂತಹ ರೈತರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಮತ್ತು ತಮ್ಮ ಜಮೀನಿನ ಪಹಣಿಯನ್ನು ಗ್ರಾಮ ಆಡಳಿತ ಅಧಿಕಾರಿಗೆ ನೀಡಿದರೆ ಅದನ್ನು ಸಂಬಂಧಪಟ್ಟ ಇಲಾಖೆಗೆ ವರದಿಯನ್ನು ಕಳುಹಿಸಿ ಪರಿಹಾರವನ್ನು ಕೊಡಿಸುವಂತಹ ಪ್ರಯತ್ನ ಮಾಡಲಾಗುತ್ತದೆ, ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಆಗದಂತೆ ನೋಡಿಕೊಳ್ಳಲು ಈ ಯೋಜನೆಯ ಅಧಿಕಾರಿಗಳಿಗೆ ತಿಳಿಸಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ..? ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ

ಈ ಸಂದರ್ಭದಲ್ಲಿ ನರಸಾಪುರ ಕಂದಾಯ ಗ್ರಾಮ ಆಡಳಿತ ಅಧಿಕಾರಿ ರಮ್ಯ, ಕೋಲಾರ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಳ್ಳಿ ರಮೇಶ್, ರೈತರಾದ ಶಶಿಕುಮಾರ್, ಮಂಜುನಾಥ್, ಶಿವಕುಮಾರ್, ರಾಮಚಂದ್ರ, ಚಿಕ್ಕ ಅಣ್ಣಗಿರಿಯಪ್ಪ, ಪೈಲ್ವಾನ್ ವೆಂಕಟೇಶ್, ಮುನಿರಾಜು ಪುರುಷೋತ್ತಮ್, ವೆಂಕಟೇಶ್, ಮಂಜುನಾಥ್ ಹಾಗೂ ರೈತರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...