ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Date:

ಬಾಗೇಪಲ್ಲಿ:-ತಾಲ್ಲೂಕು ದಲಿತರ ಭೂಮಿ-ವಸತಿ ಹಕ್ಕಿಗಾಗಿ ಮತ್ತು ಇತರೆ ಹಕ್ಕೋತ್ತಾಯಗಳಿಗೆ ಆಗ್ರಹಿಸಿ, ತಾಲ್ಲೂಕು ಘಟಕ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಬಿ.ವಿ.ವೆಂಕಟರವಣ ಹೇಳಿದರು.

- Advertisement -

ಅವರು ತಾ.ಪಂ ಕಛೇರಿ ಮುಂದೆ ದಲಿತರ ಮೂಲಭೂತ ಸೌಲಭ್ಯಗಳಾದ ನೀರು,ನಿವೇಶನ, ಭೂಮಿ,ಹಕ್ಕುಪತ್ರ ವಿತರಣೆ ಹಾಗೂ ಎಲ್ಲಾ ಗ್ರಾಮಪಂಚಾಯಿತಿ ಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಒತ್ತಾಯಿಸಿ ಪ್ರತಿಭಟನೆಯನ್ನು ಉದ್ದೇಶಿ ಮಾತನಾಡಿದರು ತಾಲ್ಲೂಕಿನಾದ್ಯಂತ ದಲಿತರ ದರಕಾಸ್ತು ಭೂಮಿ ಸಮೀಕರಣ ಸಮಿತಿಗಳ ನಿರ್ಲಕ್ಷ್ಯದಿಂದ ಸಭೆಗಳು ಜರುಗದೆ ಫಾರಂ 54, 53, 57 ಸಲ್ಲಿಸಿರುವ ದಲಿತ, ತಳ ಸಮುದಾಯಗಳ ಅರ್ಜಿಗಳು ಹಾಗೆಯೇ ಉಳಿದಿವೆ. ಅವುಗಳಲ್ಲಿ ಜಿಪಿಎಸ್‌ ಮೂಲ ಉಳುಮೆ ಮಾಡುತ್ತಿಲ್ಲ ಎಂದು ಹೇಳಿ ಸಾವಿರಾರು ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಈ ಬಗ್ಗೆ ಸರಕಾರವನ್ನು ಎಚ್ಚರಿಸಲು ಹಾಗೂ ದಲಿತರ ಭೂಮಿ-ವಸತಿ ಹಕ್ಕಿಗಾಗಿ ಮತ್ತು ಇತರೆ ಹಕ್ಕೋತ್ತಾಯಗಳಿಗೆ ಆಗ್ರಹಿಸಿ ಹೋರಾಟ ಆಯೋಜಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

15ನೇ ಹಣಕಾಸು ಯೋಜನೆಯಡಿ ಬಿಡುಗಡೆಗೊಂಡಿರುವ ಅನುದಾನವನ್ನು ಗ್ರಾಮದ ಅಭಿವೃದ್ಧಿಗೆ ಬಳಸದೆ ಜನಪ್ರತಿನಿಧಿಗಳು ದುರುಪಯೋಗಪಡಿಸಿ ಕೊಳ್ಳುತ್ತಿರುವುದನ್ನು ನಿಲ್ಲಿಸಬೇಕು. ಶೇ.22.75ರಡಿ ಬಿಡುಗಡೆಗೊಳ್ಳುವ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ ಸರಿಯಾಗಿ ಗ್ರಾಮ ಸಭೆಗಳನ್ನು ನಡೆಸಬೇಕು ಎಂದು ಹೇಳಿದರು.

ಹಕ್ಕೊತ್ತಾಯಗಳು:-
ಬಾಗೇಪಲ್ಲಿ, ತಾಲ್ಲೂಕು ಕೇಂದ್ರ ಸ್ಥಾನ ಗೂಳೂರು ವೃತ್ತದ ಬಳಿ ಅಂಬೇಡ್ಕರ್ ಭವನಕ್ಕೆ ಜಾಗವನ್ನು ಮಂಜೂರು ಮಾಡಿ ಅಂಬೇಡ್ಕರ್ ಭವನ ನಿರ್ಮಿಸಬೇಕು. ಬಾಗೇಪಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ/ವರ್ಗ ಹಾಗೂ ಹಿಂದುಳಿದ ವರ್ಗದವರ ಮನೆಗಳಿಗೆ ಖಾತೆ ಬದಲಾವಣೆ ಮತ್ತು ಈ-ಸ್ವತ್ತು ಮಾಡಿಕೊಡಬೇಕು. ಬಾಗೇಪಲ್ಲಿ ತಾಲ್ಲೂಕಿನ ಗೂಳೂರು, ಪಾತಪಾಳ್ಯ, ಮಿಟ್ಟೇಮರಿ ಹೋಬಳಿ, ಕೇಂದ್ರ ಸ್ಥಾನದಲ್ಲಿ ಅಂಬೇಡ್ಕರ್ ಭವನಕ್ಕೆ ನಿವೇಶನ ಕಾಯ್ದಿರಿಸಿ ಅಂಬೇಡ್ಕರ್ ಭವನ ನಿರ್ಮಿಸುವುದು., ಬಾಗೇಪಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೇ. 22.75% ಅನುಧಾನ ದುರ್ಬಳಿಕೆ ಆಗಿದ್ದು ಇದರ ಬಗ್ಗೆ ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಜರುಗಿಸುವುದು.
ನಿವೇಶನ ಮತ್ತು ಮನೆಯ ಮೂಲದಾಖಲೆಗಳ ನೆಪವೊಡ್ಡಿ ಖಾತೆ ಮಾಡಿ ಈ ಸ್ವತ್ತು ಮಾಡಿಕೊಡದೇ, ಭೂಮಾಫಿಯ, ರಿಯಲ್ ಎಸ್ಟೇಟ್ ಕುಳಗಳಿಗೆ ಈ ಸ್ವತ್ತು ಮಾಡಿಕೊಡುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವುದು.( ಉದಾ : ಪರಗೋಡು & ಘಂಟಂವಾರಿಪಲ್ಲಿ)
, ಘಂಟಂವಾರವಲ್ಲಿ ಗ್ರಾಮ ಪಂಚಾಯಿತಿ ನಾರೇಪಲ್ಲಿ ಸ.ನಂ:18 ರಲ್ಲಿ 2-00 ಎಕರೆ ಜಮೀನು ಆಶ್ರಯ ಯೋಜನೆಯಡಿ ಮಂಜೂರು ಮಾಡಿದ್ದು ಇನ್ನು 3-00 ಎಕರೆ ಜಮೀನು ಮಂಜೂರು ಮಾಡಿಸಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ ಮಾಡಿ ವಸತಿ ಸೌಲಭ್ಯ ಕಲ್ಪಿಸಬೇಕು.
ಘಂಟಂವಾರಪಲ್ಲಿ ಗ್ರಾಮ ಪಂಚಾಯಿತಿ ಗೌನವಲ್ಲಿ ಸ.ನಂ:15 ರಲ್ಲಿ 5-20 ಗುಂಟೆ ಜಮೀನು ಆಶ್ರಯ ಯೋಜನೆಯಡಿಯಲ್ಲಿ ಮಂಜೂರಾಗಿದ್ದು 150 ಫಲಾನುಭವಿಗಳಲ್ಲಿ ಇನ್ನೂ 60 ಜನ ನಿವೇಶನ ರಹಿತರಿಗೆ ಹಕ್ಕು ಪತ್ರ ನೀಡಿರುವುದಿಲ್ಲ ಇವರಿಗೆ ಕೂಡಲೇ ಹಕ್ಕುಪತ್ರ ಮತ್ತು ವಸತಿ ಯೋಜೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ನಾನು ಅಧಿಕಾರಕ್ಕೆ ಆಸೆ ಪಡುವನನು ಅಲ್ಲಾ:ಮೊಹಮ್ಮದ್ ಶಫೀಕ್

ತದನಂತರ ಸ್ಥಳಕ್ಕೆ ಬಂದ ತಹಸೀಲ್ದಾರ್ ಮನೀಷಾ ಎನ್ ಪತ್ರಿ ಹಾಗೂ ಇಓ ರಮೇಶ್ ಮನವಿ ಪತ್ರ ಸ್ವೀಕರಿಸಿ ಈ ಮೇಲಿನ ವಿಷಯಗಳ ಬಗ್ಗೆ ತನಿಖೆ ನಡೆಸಿ 100 %100 ರಷ್ಟು ಬಡವರಿ ಭೂಮಿ ನಿವೇಶನ ಹಕ್ಕು ಪತ್ರಗಳನ್ನು ಕೊಡಲು ಎರಡು ತಿಂಗಳು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ ಮೇಲೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆಯನ್ನು ಹಿಂಪಡೆದರು.
ಈ ಸಂದರ್ಭದಲ್ಲಿ ಪೈಪಾಳ್ಯ ರವಿ,ಎನ್. ಸತೀಶ್,ಪ್ರಕಾಶ್,ಚೌಡಯ್ಯ,ಸೂರಿ,ನಂಜುಂಡಪ್ಪ,ಶ್ರೀನಿವಾಸ್, ಭಾನುಪ್ರಕಾಶ್,ಮುನಿರಾಜು,ಈರಪ್ಪ,ಗಂಗಾಧರ, ಇಂದ್ರಾ ಗೋಪಿ,ಬಾಬು ಹಾಗೂ ತಾಲ್ಲೂಕು ಘಟಕದ ಪಧಾಧಿಕಾರಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...