ಕೋಲಾರ : ಶಾಶ್ವತ ನೀರಾವರಿ ಹೋರಾಟ ಸಮಿತಿ ಯಿಂದ ಹೊಸದಾಗಿ ಜಂಟಿ ಕ್ರಿಯಾ ಸಮಿತಿ ರೂಪಿಸಿಕೊಂಡು ಚಿಕ್ಕ ಬಳ್ಳಾಪುರದ ಕೆಇಬಿ ಸಮುದಾಯ ಭವನದಲ್ಲಿ ಅ.2ರಂದು ಜಲಗ್ರಹ ಕ್ಕಾಗಿ ಹೋರಾಟ ಹಮ್ಮಿಕೊಳ್ಳ ಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ತಿಳಿಸಿದರು.
ನಗರದ ಪತ್ರಕರ್ತರ ಭವನ ದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ನ್ಯಾಯ ಮೂರ್ತಿ ಗೋಪಾಲಗೌಡ ನೇತೃತ್ವ ದಲ್ಲಿ ತೆಲಂಗಾಣ ಮಾದರಿಯಲ್ಲಿ ಜಂಟಿ ಕ್ರಿಯಾ ಸಮಿತಿ ರೂಪಿಸಿ ಕೊಂಡು ಹೋರಾಟಕ್ಕೆ ಇಳಿಯು ತ್ತಿದ್ದೇವೆ. ಸಹಕಾರ ನೀಡಿದರೆ ಸಾಲದು; ಹೋರಾಟಕ್ಕೆ ಧುಮುಕ ಬೇಕು. ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವಿದೆ. ಕುಡಿಯುವ ನೀರು ಪಡೆಯಲು ದೊಡ್ಡ ಹೋರಾಟ ರೂಪಿಸಿ ಸರ್ಕಾರವನ್ನು ಬಗ್ಗಿಸ ಬೇಕಿದೆ ಎಂದರು.
ಮುಂದಿನ ಪೀಳಿಗೆಯ ಅಳಿವು ಉಳಿವಿನ ಪ್ರಶ್ನೆ ಇದು. ನೀರಿನ ಹಕ್ಕಿಗಾಗಿ ವಿದ್ಯಾರ್ಥಿಗಳು, ಯುವ ಸಮುದಾಯ, ಬುದ್ದಿಜೀವಿಗಳು, ಪ್ರಗತಿಪರರು ಹಾಗೂ ಎಲ್ಲಾ ಸಂಘ ಟನೆಗಳು ಹೋರಾಟಕ್ಕೆ ಬರಬೇಕು. ಇದು ಮಾಡು ಇಲ್ಲವೇ ಮಡಿ ಹೋರಾಟ ಎಂದು ಹೇಳಿದರು. ಎತ್ತಿನಹೊಳೆ ಯೋಜನೆಯಲ್ಲಿ ಮೋಸವಾಗುತ್ತಿದೆ, ಕೆ.ಸಿ.ವ್ಯಾಲಿ
ಮೂರನೇ ಹಂತದ ಶುದ್ದೀಕರಣ ನಡೆಯುತ್ತಿಲ್ಲ ಎಂಬ ನಮ್ಮ ಹೋರಾಟದ ಕಾರಣ ಸರ್ಕಾರ ನಮ್ಮನ್ನು ಅಸ್ಪೃಶ್ಯರಂತೆ ಕಾಣುತ್ತಿದೆ ಎಂದು ದೂರಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ 30 ವರ್ಷಗಳಿಂದ ನೀರಿನ ಹಾಹಾಕಾರ ಅನುಭವಿಸುತ್ತಿವೆ. ಹೋರಾಟಗಳೂ ನಡೆಯುತ್ತಿವೆ. ಶುದ್ಧ ನೀರು ಪೂರೈಸುವ ಕೆಲಸ ಸರ್ಕಾರದಿಂದ ಈವರೆಗೆ ಆಗಿಲ್ಲ. ಪೆನ್ನಾರ್ ಯೋಜನೆ ಮರೆತು ಹೋಗಿದೆ. ಕೆರೆಗಳ ಸ್ವರೂಪವೂ ಸರಿ ಇಲ್ಲ. ಮುಂದಿನ ಪೀಳಿಗೆಗೆ ನೀರಿನ ಭದ್ರತೆ ಇಲ್ಲವಾಗಿದೆ. ಆಳದಲ್ಲಿ ಸಿಗುತ್ತಿರುವ ನೀರು ವಿಷಯುಕ್ತವಾಗಿದೆ. ಆಹಾರ ವಿಷಮಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಅನಾರೋಗ್ಯ ಸಮಸ್ಯೆ ಕಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಎತ್ತಿನಹೊಳೆ ಯೋಜನೆ ಯಿಂದ ನೀರು ಬರಲ್ಲ ಎಂದು ಗೊತ್ತಿದ್ದರೂ ಅನುದಾನ ಹೆಚ್ಚಿಸುತ್ತಲೇ ಇದ್ದಾರೆ. 30 ಸಾವಿರ ಕೋಟಿ ವೆಚ್ಚ ಮಾಡಿದ್ದಾರೆ. ಆದರೂ ಈ ಭಾಗದ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ..? ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾಗಿ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಪ್ಸರ್ ನೇಮಕ
ಸಂಚಾಲಕ ಹೊಳಲಿ ಪ್ರಕಾಶ್ ಮಾತನಾಡಿ, ನೀರಿಗಾಗಿ ನಡೆಯು ತ್ತಿರುವ ಧರ್ಮ ಯುದ್ಧವಿದು. ನಾವು ಪಾಂಡವರ ಸ್ಥಾನದಲ್ಲಿ ನಿಂತು ಹೋರಾಟ ಮಾಡುತ್ತಿದ್ದೇವೆ. ನಮ್ಮ ಜಲಾಗ್ರಹ ಹೋರಾಟಕ್ಕೆ ಕೈಜೋಡಿ ಸದಿದ್ದರೆ ಕೌರವರ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದರು. ನಮ್ಮ ಹೋರಾಟಕ್ಕೆ ಬೆಂಬಲ ನೀಡದ ರಾಜಕಾರಣಿಗಳಿಗೆ ನೇಪಾಳದ ರೀತಿ ದಂಗೆ ಏಳಲು ಗ್ರಾಮದಲ್ಲಿ ಜನರನ್ನು ಸಂಘಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀಕೃಷ್ಣ,ನೀರಾವರಿ ರಾಜೇಶ್, ಮಳ್ಳೂರು ಹರೀಶ್, ಗೋವರ್ದನ್, ಸಲಾಲುದ್ದೀನ್ ಬಾಬು, ರಾಮು ಶಿವಣ್ಣ, ಡಾ. ರಮೇಶ್, ಜಿ.ನಾರಾಯಣಸ್ವಾಮಿ, ಇದ್ದರು.