ಬೆಂಗಳೂರು | ಭಾನುವಾರ ನೇರಳೇ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ

Date:

ಬೆಂಗಳೂರು ಮೆಟ್ರೋದ ಹೊಸ ಮಾರ್ಗಗಳಲ್ಲಿ ಸುರಕ್ಷತಾ ಪರೀಕ್ಷೆಗಳು ನಡೆಯುವ ಕಾರಣ ಭಾನುವಾರ (ಆಗಸ್ಟ್‌ 27) ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೆಟ್ರೋ ನಿಗಮ ತಿಳಿಸಿದೆ.

ಭಾನುವಾರದಂದು ಕೆ.ಆರ್‌ಪುರಂನಿಂದ ಬೈಯ್ಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚೆಲ್ಲಘಟ್ಟ ನಡುವಿನ ಹೊಸ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತಾ ಪರೀಕ್ಷೆಗಳು ನಡೆಯಲಿವೆ. ಹಾಗಾಗಿ, ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರಳೆ ಮಾರ್ಗದಲ್ಲಿ ಕೆಲವು ನಿಲ್ಧಾಣಗಳಿಗೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ನಿಗಮ ಹೇಳಿದೆ.

ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವೆ, ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ನಿಲ್ದಾಣದ ನಡುವೆ ಹಾಗೂ ವೈಟ್‌ಫೀಲ್ಡ್‌ನಿಂದ ಕೆ.ಆರ್‌ಪುರಂ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ. ಈ ಸಮಯದಲ್ಲಿಯೂ ಬೈಯಪ್ಪನಗಳಲ್ಲಿ ಮತ್ತು ಮೈಸೂರು ರಸ್ತೆಯ ನಡುವೆ ಮೆಟ್ರೋ ಸಂಚಾರ ಇರುತ್ತದೆ ಎಂದು ನಿಗಮ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಸೋಂಕುಗಳು, ಅಪಘಾತಗಳೂ ಕಾರ್ನಿಯಲ್ ಕುರುಡುತನಕ್ಕೆ ಕಾರಣವಾಗುತ್ತವೆ: ಕಣ್ಣಿನ ತಜ್ಞ

ಮಧ್ಯಾಹ್ನ 1 ಗಂಟೆಯ ನಂತರ ಎಂದಿನಂತೆ ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗೆ ಹಾಗೂ ಕೆಆರ್‌ಪುರಂನಿಂದ ವೈಟ್‌ಫೀಲ್ಡ್‌ ವರೆಗೆ ಮೆಟ್ರೋ ಸೇವೆ ಇರುತ್ತದೆ ಎಂದು ಹೇಳಿದೆ.

ಅಲ್ಲದೆ, ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದೂ ನಿಗಮ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...

ದಾವಣಗೆರೆ | ಜಾತ್ಯತೀತ ಪಕ್ಷಕ್ಕೆ ಮತ ಹಾಕುವಂತೆ ಮಾನವ ಬಂಧುತ್ವ ವೇದಿಕೆ ಮನವಿ

ಮತದಾನದ ಹಕ್ಕು ಸಂವಿಧಾನ ನೀಡಿರುವ ಅತ್ಯಂತ ಶ್ರೇಷ್ಟವಾದದ್ದು ಮತ್ತು ಪವಿತ್ರವಾದ ಅವಕಾಶ....