ಮತ ಕಳ್ಳತನ ಬಿಜೆಪಿ ಆಯೋಗ ಶಾಮೀಲು: ಶಾಸಕ ಕೊತ್ತೂರು ಮಂಜುನಾಥ್ ಆರೋಪ

Date:

ಕೋಲಾರ: ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು ಇದರಿಂದಲೇ ತಿಳಿಯುತ್ತದೆ ಮತಗಳ್ಳತನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಆಗ್ರಹಿಸಿದರು.

- Advertisement -

ನಗರದ ಹೊಸ ಬಸ್ ನಿಲ್ದಾಣ ಬಳಿ ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸಿದ್ದಾರಾ ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ. ಮತಗಳ್ಳತನ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಳ್ಳಿ ಹಳ್ಳಿಗೂ ಹೋಗಿ ಮತಗಳ್ಳತನದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವುದು ಆಯೋಗದ ಮೊದಲ ಕರ್ತವ್ಯ. ಆದರೆ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬುದು ಗೊತ್ತಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಒಂದು ಮತಕ್ಕೆ 80 ರೂಪಾಯಿ ಕೊಟ್ಟು 6000 ಸಾವಿರ ಮತಗಳನ್ನು ಖರೀದಿ ಮಾಡಿರುವ ಸತ್ಯ ತನಿಖೆಯಿಂದ ಹೊರಬಂದಿದೆ. ಚುನಾವಣಾ ಆಯೋಗ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಒಂದು ಪಕ್ಷದ ಏಜೆಂಟ್ ರೀತಿ ಕೆಲಸ ಮಾಡಬಾರದು ಯಾವುದೋ ಒಂದು ಸರ್ಕಾರದ ಪರ ಕೆಲಸ ಮಾಡುವುದಲ್ಲ ಸಿಬಿಐ, ಇಡಿ, ಚುನಾವಣಾ ಆಯೋಗ ಸೇರಿ ಎಲ್ಲದರಲ್ಲೂ ರಾಜಕೀಯಕರಣಗೊಳಿಸಿದ್ದಾರೆ ಜೊತೆಗೆ ಸುಪ್ರೀಂಕೋರ್ಟ್ ಅನ್ನು ಸಹ ಬೇರೆ ದೃಷ್ಟಿಯಲ್ಲಿ ನೋಡುವ ಹಾಗೆ ಇಟ್ಟಿದ್ದಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

ಇದನ್ನು ಓದಿದ್ದೀರಾ..? ಕಾರ್ಮಿಕರು ಜೀತದಾಳುಗಳಾಗಿದ್ದಾರೆ ದುಡಿಯುವ ವರ್ಗ ಒಗ್ಗಟ್ಟಿನಿಂದ ಹೋರಾಟಕ್ಕೆ ಮುಂದಾಗಬೇಕಾಗಿದೆ: ಮೀನಾಕ್ಷಿ ಸುಂದರಂ

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್,ಕೂಡಾ ಅಧ್ಯಕ್ಷ ಹನೀಫ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಫ್ಸರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಮುಂತಾದವರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...