ಮಾಲೂರಿನ ಯುಕೆನ್ ಇಂಡಿಯಾ ಕಂಪನಿಯಿಂದ ಕಾರ್ಮಿಕರಿಗೆ ಕಿರುಕುಳ

Date:

ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ಯುಕೆನ್ ಇಂಡಿಯಾ ಲಿಮಿಟೆಡ್ ಪೋಸ್ಟ್ ಕಂಪನಿಯಿಂದ ಕಾರ್ಮಿಕರಿಗೆ ಕಿರುಕುಳ ಹಾಗೂ ದುರುದ್ದೇಶದಿಂದ ತೊಂದರೆ ಕೊಡುತ್ತಿದ್ದು ಕೂಡಲೇ ಜಿಲ್ಲಾಧಿಕಾರಿ ಎಂ.ಆರ್ ರವಿ ಮಧ್ಯಪ್ರವೇಶಿಸಿ ಕಾರ್ಮಿಕರ ಹಿತ ಕಾಪಾಡುವಂತೆ ಸೋಮವಾರ ಸಿಐಟಿಯು ನೇತೃತ್ವದ ಬೆಂಗಳೂರು ಈಸ್ಟ್ ಇಂಡಸ್ಟ್ರಿಯಲ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಕಾರ್ಮಿಕರು ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಸಿಐಟಿಯು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಹೆಚ್ ಎನ್ ಗೋಪಾಲಗೌಡ ಮಾತನಾಡಿ ಯುಕೆನ್ ಲಿಮಿಟೆಡ್ ಕಂಪನಿಯು ಅಕ್ರಮವಾಗಿ ಕಾರ್ಮಿಕರ ನಡವಳಿಕೆ ಅನುಸರಿಸಿ ಸಂಸ್ಥೆಯ ಖಾಯಂ ನೌಕರರಿಗೆ ಕಿರುಕುಳ ನೀಡಿ ವಿನಾಕಾರಣ ದೂರದ ಹರ್ಯಾಣಗೆ ವರ್ಗಾವಣೆ ಮಾಡುವ ಜೊತೆಗೆ ವೇತನ ಕಡಿತಗೊಳಿಸಿದ್ದಾರೆ ಕಾರ್ಮಿಕ ವಿರೋಧಿ ನೀತಿಗಳ ಜಾರಿಯಿಂದ ಆಡಳಿತ ಮಂಡಳಿಯು ಕಾರ್ಮಿಕರನ್ನು ಜೀತದಾಳುಗಳ ರೀತಿಯಲ್ಲಿ ದುಡಿಸಿಕೊಳ್ಳುತ್ತಿದ್ದಾರೆ ಆಡಳಿತ ಮಂಡಳಿಯ ವಿರುದ್ದ ಪ್ರಶ್ನಿಸಿದಾಗ ಕಾರ್ಮಿಕರಿಗೆ ದೌರ್ಜನ್ಯ ಮತ್ತು ದಬ್ಬಾಳಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಸುಮಾರು 40 ವರ್ಷಗಳ ಹಿಂದೆ ಪ್ರಾರಂಭವಾದ ಯುಕೆನ್ ಕಂಪನಿಯಲ್ಲಿ ಆಡಳಿತ ಮಂಡಳಿಯು ಅಕ್ರಮದ ಕಾರ್ಮಿಕ ನಡವಳಿಕೆಯಿಂದ ಕಾನೂನು ಬಾಹಿರವಾಗಿ ಕಾರ್ಮಿಕರನ್ನು ಹರ್ಯಾಣಕ್ಕೆ ವರ್ಗಾವಣೆ ಮಾಡಿದ್ದಾರೆ ಇದು ಅಲ್ಲದೇ ವರ್ಗಾವಣೆ ಹೆಸರಿನಲ್ಲಿ ಕಂಪನಿಯಿಂದ ಹೊರಹಾಕುವ ಕಾರ್ಯವು ವ್ಯವಸ್ಥಿತವಾಗಿ ನಡೆಯುತ್ತಿದೆ ಸ್ಥಳೀಯವಾಗಿ ಇದ್ದವರನ್ನು ಕೆಲಸ ಬಿಡುವಂತೆ ಮಾಡಿದ್ದಾರೆ ಇತ್ತೀಚಿಗೆ ಹೊಸದಾಗಿ ಸೇರ್ಪಡೆಯಾದ ಕಾರ್ಮಿಕರ ಮಧ್ಯೆ ಒಗ್ಗಟ್ಟನ್ನು ಮುರಿಯುವ ಕೆಲಸ ಮಾಡಿದ್ದಾರೆ ಕಂಪನಿಯ ಆಡಳಿತ ಮಂಡಳಿಯ ಉದ್ದಟನ ಹಾಗೂ ಹಠಮಾರಿ ದೋರಣೆ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.

ಕಂಪನಿಯ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಿಸಿದ್ದರು ಇವು ಯಾವುದೂ ಗಣನೆಗೆ ತೆಗೆದುಕೊಳ್ಳುವುದಿಲ್ಲ ಏಕಪಕ್ಷೀಯವಾಗಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ದುಡಿಯುವ ವರ್ಗದ ಪರವಾಗಿ ಜಿಲ್ಲೆಯ ಜನಪರ, ದಲಿತ ಪರವಾದ ಸಂಘಟನೆಗಳು ಜೊತೆಗೆ ಇದ್ದು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶದಿಂದ ಕಾರ್ಮಿಕರ ಹಿತ ಕಾಪಾಡುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಚಿಕ್ಕನಹಳ್ಳಿ ಡೇರಿ ಅಧ್ಯಕ್ಷರಾಗಿ ಸಿ.ಅಮರೇಶ್ ಎರಡನೇ ಬಾರಿಗೂ ಅವಿರೋಧ ಆಯ್ಕೆ

ಈ ಸಂದರ್ಭದಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಪಿ.ಮುನಿರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕಾರ್ಯದರ್ಶಿ ಶಿವಾನಂದ್, ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್, ಜನವಾದಿ ಸುಶೀಲಾ, ಯುಕೆನ್ ಕಂಪನಿಯ ಮುಖಂಡರಾದ ರಾಮಮೋಹನ್, ರುದ್ರೇಶ್, ಶ್ರೀನಿವಾಸ್ ಭಟ್, ರವೀಂದ್ರ, ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...