ಯಲ್ಲಾಪುರ | ಸಾತೋಡಿ ಫಾಲ್ಸ್ ಮಾರ್ಗದಲ್ಲಿ ಹುಬ್ಬಳ್ಳಿ ಯುವಕರ ಪುಂಡಾಟ; ಪೋಲಿಸರಿಂದ ಪ್ರಕರಣ ದಾಖಲು

Date:

ಯಲ್ಲಾಪುರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಸಾತೋಡಿ ಜಲಪಾತದ ಮಾರ್ಗದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಮೇಲೆ ಹುಬ್ಬಳ್ಳಿಯಿಂದ ಬಂದಿದ್ದ ಏಳು ಯುವಕರ ವಿರುದ್ಧ ಯಲ್ಲಾಪುರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

- Advertisement -

ಸೋಮವಾರ ಪ್ರವಾಸಕ್ಕೆ ಬಂದಿದ್ದ ಯುವಕರ ಗುಂಪೊಂದು ಬೈಕ್‌ಗಳಲ್ಲಿ ಸಂಚರಿಸುವ ವೇಳೆ ಅಜಾಗರೂಕವಾಗಿ ವಾಹನ ಚಲಾಯಿಸಿದ್ದು, ಜೋರಾಗಿ ಹಾಡುಗಳನ್ನು ಹಾಕಿಕೊಂಡು ರಸ್ತೆ ಮೇಲೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದರೆಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ​ದೃಶ್ಯಗಳನ್ನು ಗಮನಿಸಿದ ಸ್ಥಳೀಯರು ಪೊಲೀಸ್ ಇಲಾಖೆಯ ‘ಜನಸ್ನೇಹಿ’ ವಾಟ್ಸಪ್ ಗ್ರೂಪಿನಲ್ಲಿ ದೂರು ನೀಡಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಯಲ್ಲಾಪುರ ಪೊಲೀಸರು, ಪಿಎಸ್‌ಐ ರಾಜಶೇಖರ ವಂದಲಿ ಅವರ ನೇತೃತ್ವದಲ್ಲಿ ಜಲಪಾತದತ್ತ ಧಾವಿಸಿ, ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಹೊನ್ನಾವರ | ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗುಡೆ: 7 ಜನ ಮೀನುಗಾರರ ಜೀವ ರಕ್ಷಣೆ

ಪೊಲೀಸರ ಪರಿಶೀಲನೆ ವೇಳೆಯಲ್ಲಿ ಬೈಕ್‌ಗಳು ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ, ಆದ್ದರಿಂದ ನಾಲ್ಕು ವಾಹನಗಳಿಗೆ ಒಟ್ಟು ₹8 ಸಾವಿರ ದಂಡ ವಿಧಿಸಿದ್ದಾರೆ. ಅತಿವೇಗದ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿರುವುದು ಹಾಗೂ ನಂಬರ್ ಪ್ಲೇಟ್ ಇಲ್ಲದ ವಾಹನ ಬಳಕೆ ಸೇರಿದಂತೆ ವಿವಿಧ ಉಲ್ಲಂಘನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದರ ಜೊತೆಗೆ ಸಾರ್ವಜನಿಕ ಸ್ಥಳದಲ್ಲಿ ಅಶಾಂತಿ ಹಾಗೂ ತೊಂದರೆ ಕೊಟ್ಟಿದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆಯ ಸಂಬಂಧಿತ ವಿಧಿಗಳ ಅಡಿಯಲ್ಲಿ ಏಳು ಯುವಕರ ವಿರುದ್ಧವೂ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರವಾಸಿಗರಿಗೆ ಸೂಚನೆ : ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ಅಥವಾ ಇತರ ವಾಹನ ಸವಾರರಿಗೆ ತೊಂದರೆ ಉಂಟುಮಾಡುವ ರೀತಿಯ ವರ್ತನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...