ರಿಂಗ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ ಚರ್ಚೆ-25 ವರ್ಷದ ದೃಷ್ಟಿಕೋನ‌ ಇಟ್ಟುಕೊಂಡು ನಿರ್ಮಿಸಿ: ಕೊತ್ತೂರು ಮಂಜುನಾಥ್

Date:

ಕೋಲಾರ: ನಗರದ‌ ಹೊರವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಾಣ ಸಂಬಂಧ‌ ರೂಪುರೇಷೆ‌ ಕುರಿತು ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಗುರುವಾರ ಚರ್ಚೆ‌ ನಡೆಯಿತು. ನಗರದ ಲೋಕೋಪಯೋಗಿ ‌ಇಲಾಖೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ರಿಂಗ್ ರೋಡ್ ವ್ಯಾಪ್ತಿ, ‌ಭೂಸ್ವಾಧೀನ,‌ ಅಡೆತಡೆಗಳ ಬಗ್ಗೆ ‌ಮಾಹಿತಿ‌ ನೀಡಿದರು. ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ₹ 2.8 ‌ಕೋಟಿ ವೆಚ್ಚದಲ್ಲಿ ಟೆಂಡರ್‌ ಕರೆಯಲು ಸಿದ್ಧತೆ ನಡೆಯುತ್ತಿರುವುದಾಗಿ ತಿಳಿಸಿದರು.

- Advertisement -

ಶಾಸಕ ಕೊತ್ತೂರು ಮಂಜುನಾಥ್ ‌ಮಾತನಾಡಿ,‌‌ ಮುಂದಿನ 25 ವರ್ಷಗಳ‌ ದೃಷ್ಟಿಕೋನ ಗಮನದಲ್ಲಿಟ್ಟುಕೊಂಡು ರಿಂಗ್ ರಸ್ತೆ‌ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು.‌ ಇವತ್ತಿನ ಸಂಚಾರ ದಟ್ಟಣೆ,‌ ಮುಂದೆ ಉಂಟಾಗಬಹುದಾದ ದಟ್ಟಣೆ ಗಮನದಲ್ಲಿ ಇಟ್ಟುಕೊಳ್ಳಬೇಕು. ನಾಲ್ಕು‌ ಪಥ ರಸ್ತೆ ಮಾಡಬೇಕು. ಮತ್ತೆ ನಾಲ್ಕು ಪಥ ವಿಸ್ತರಣೆಗೆ ಜಾಗ ಇರಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಿಂಗ್ ರಸ್ತೆ ನಿರ್ಮಾಣ ಸಂಬಂಧ ಮೊದಲು ಸ್ಯಾಟಿಲೈಟ್ ಮ್ಯಾಪ್‌ ಮಾಡಿ ಬಳಿಕ ಚರ್ಚಿಸೋಣ. ಆಮೇಲೆ ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲಿಸೋಣ‌‌ ಎಂದು ತಿಳಿಸಿದರು. ಚೆನ್ನೈ-ಬೆಂಗಳೂರು ಕಾರಿಡಾರ್, ರಾಷ್ಟ್ರೀಯ ಹೆದ್ದಾರಿ, ದೇವನಹಳ್ಳಿ ಹೆದ್ದಾರಿಗೆ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ರಾಜ್ಯ ಸರ್ಕಾರದಿಂದ ಭೂಸ್ವಾಧೀನಕ್ಕೆ‌ ಹಣ ಕೊಡಿಸುವ ಜವಾಬ್ದಾರಿ ‌ನಮ್ಮದು. ಈ ಸಂಬಂಧ ರೈತರ‌ ಜೊತೆ ಸಭೆ‌ ಕೂಡ ನಡೆಸೋಣ ಎಂದರು.

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ,‌‌ ನಗರ ಬೆಳೆಯುತ್ತಿರುವ ವಿಚಾರ, ಅಭಿವೃದ್ಧಿ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ರಿಂಗ್ ರಸ್ತೆ ನಿರ್ಮಾಣ‌ ಮಾಡಬೇಕು. ಕೋಲಾರ ಭಾಗಕ್ಕೆ ಕೈಗಾರಿಕೆಗಳು ಹೆಚ್ಚು ಬರುತ್ತಿವೆ, ಬಿಲ್ಡರ್ಸ್ ಬರುತ್ತಿದ್ದಾರೆ. ಚೆನ್ನೈ-ಬೆಂಗಳೂರು ಕಾರಿಡಾರ್ ಉದ್ಘಾಟನೆ ‌ಆದರೆ‌ ಇನ್ನೂ ಹೆಚ್ಚು ವಾಹನ ಹಾಗೂ ಜನರು ಬರುತ್ತಾರೆ ಎಂದು ಹೇಳಿದರು.

2050ರಲ್ಲಿನ ದೃಷ್ಟಿಕೋನ ‌ಇಟ್ಟುಕೊಂಡು‌ ನಿರ್ಮಾಣ ಮಾಡಬೇಕು‌. ವೇಮಗಲ್‌ ಕೈಗಾರಿಕೆ ಪ್ರದೇಶದವರೆಗೆ ರಿಂಗ್ ರಸ್ತೆ ಸಂಪರ್ಕ ‌ಇರಬೇಕು.‌ ಈ ಕಡೆ ವಡಗೂರುವರೆಗೆ‌ ವಿಸ್ತರಿಸಬೇಕು. ಮುಂದಿನ ವರ್ಷಗಳಲ್ಲಿ ಈ ಭಾಗದಲ್ಲಿ ಹೆಚ್ಚು ಅಭಿವೃದ್ಧಿ ‌ಆಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್‌ ಮಾತನಾಡಿ, ರಿಂಗ್ ‌ರಸ್ತೆ ವ್ಯಾಪ್ತಿಯ ರೇಡಿಯಸ್ 60 ಕಿ.ಮೀ ಇರಲಿದೆ. ಇನ್ನೂ ಹೆಚ್ಚು ವಿಸ್ತರಣೆ ಕಷ್ಟ. ಈ ಸಂಬಂಧ‌‌ ಇನ್ನಷ್ಟು ಚರ್ಚೆ ಆಗಬೇಕಿದೆ ಎಂದು‌ ಹೇಳಿದರು. ಡಿಪಿಆರ್ ಸಿದ್ಧಪಡಿಸಲು‌ ಟೆಂಡರ್ ‌ಕರೆಯಲು ಸರ್ಕಾರ ₹ 2.8 ‌ಕೋಟಿ ನೀಡಲಿದೆ ಎಂದರು.

ಲೋಕೋಪಯೋಗಿ‌ ಇಲಾಖೆಯ ಅಧಿಕಾರಿಗಳು ಮಾತನಾಡಿ,‌‌ ಮುಂಬರುವ ವರ್ಷಗಳ ಸಂಚಾರ ದಟ್ಟಣೆ ಗಮನದಲ್ಲಿ ಇಟ್ಟುಕೊಂಡೇ‌ ರಿಂಗ್ ರಸ್ತೆ ನಿರ್ಮಾಣ‌ ಮಾಡುತ್ತೇವೆ. ಬೇಗನೇ ಆದರೆ ಕಡಿಮೆ ವೆಚ್ಚ ತಗಲುತ್ತದೆ. ತಡವಾದರೆ ವೆಚ್ಚ ಹೆಚ್ಚಳವಾಗುತ್ತದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ 190 ಪ್ರಕರಣ ಇತ್ಯರ್ಥ: ನ್ಯಾ ನೇರಳೆ ವೀರಭದ್ರಯ್ಯ ಭವಾನಿ

ಕೋಮುಲ್‌ ನಿರ್ದೇಶಕ ಚಂಜಿಮಲೆ ಜೆ.ರಮೇಶ್, ವೇಮಗಲ್ ನರಸಾಪುರ ಯೋಜನಾ ‌ಪ್ರಾಧಿಕಾರ ಅಧ್ಯಕ್ಷ ಉರಟಾಗ್ರಹಾರ ಚೌಡರೆಡ್ಡಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ‌ ಮುರಳಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ರಾಮಮೂರ್ತಿ, ನಿವೃತ್ತ ಅಧಿಕಾರಿ ಮಂಜುನಾಥ್ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...