ವಶಪಡಿಸಿಕೊಂಡ ರೈತರ ಜಮೀನಿನಲ್ಲಿ ಮತ್ತೆ ಗಿಡ ನೆಡಲು ಮುಂದಾಗಿದ್ದಾರೆ

Date:

ಕೋಲಾರ: ಜಿಲ್ಲೆಯಲ್ಲಿ ರೈತರಿಂದ ವಶಪಡಿಸಿಕೊಂಡ ಜಮೀನುಗಳನ್ನು ಜಂಟಿ ಸರ್ವೆ ನಡೆಸದೆ ಅರಣ್ಯ ಇಲಾಖೆಯು ವಿನಾಕಾರಣ ಗಿಡ ನೆಡುವ ಮೂಲಕ ರೈತರಿಗೆ ಅನ್ಯಾಯ ಮಾಡಿ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ರೈತ ಹರಟಿ ಪ್ರಕಾಶ್ ಆರೋಪಿಸಿದರು

- Advertisement -

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ತಿಂಗಳು ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಆದೇಶದಂತೆ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ರೈತರಿಗೆ ತೊಂದರೆ ಕೊಡಬಾರದು ಎಂದು ಹೇಳಿದ್ದರೂ ಸಹ ತೊಂದರೆ ಕೊಡುವುದು ಅಲ್ಲದೇ ರೈತರನ್ನು ಎದುರಿಸಿ ಬೆದರಿಸಿ ಅವರ ಜಮೀನುಗಳಲ್ಲಿ ಗಿಡ ನೆಡಲು ಮುಂದಾಗಿದ್ದಾರೆ ಕೂಡಲೇ ಉಸ್ತುವಾರಿ ಸಚಿವರ ಆದೇಶದಂತೆ ಕೂಡಲೇ ಅರಣ್ಯ ಮತ್ತು ಕಂದಾಯ ಇಲಾಖೆಯ ನೇತೃತ್ವದಲ್ಲಿ ಜಂಟಿ ಸರ್ವೆ ನಡೆಸಿ ರೈತರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಸದನದಲ್ಲಿ ರೈತರ ಪರವಾಗಿ ಚರ್ಚೆ ನಡೆಸಿದ್ದಾರೆ ಅವರಿಗೆ ರೈತರಿಂದ ಅಭಿನಂದನೆಗಳು ರೈತರ ವಿರೋಧಿ ಅಧಿಕಾರಿಯನ್ನು ಸಂಸದರ ಸಹಾಯಕನಾಗಿ ಇಟ್ಟುಕೊಂಡಿದ್ದಾರೆ ಅವರು ರೈತರಿಗೆ ಕಂಠಕ ಅವನನ್ನು ದೂರ ಇಡಬೇಕು ಜೊತೆಗೆ‌ ಜಂಟಿ ಸರ್ವೆ ಮಾಡಿ ಅನುಕೂಲ ಮಾಡಿಕೊಡದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಕೆಲವು ಕಡೆ ಅರಣ್ಯ ಇಲಾಖೆಯವರೇ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಜಿಲ್ಲೆಯಲ್ಲಿ ಸಣ್ಣ ಮತ್ತು ಮಾಧ್ಯಮ ರೈತರು ಹೆಚ್ಚು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಎಪಿ ಪಕ್ಷದ ಜಿಲ್ಲಾ ಅಧ್ಯಕ್ಷ ವೆಂಕಟಚಲಪತಿ ಮಾತನಾಡಿ ರೈತರ ಸಮಸ್ಯೆಗಳು ಪರಿಹಾರ ಆಗಿಲ್ಲ ಶಾಸಕ ನಾರಾಯಣಸ್ವಾಮಿ ಬಿಟ್ಟು ಉಳಿದ ಶಾಸಕರು ರೈತರ ಪರವಾಗಿ ನಿಲ್ಲಲಿಲ್ಲ ಹಿಂದೆ ಇಂದ ಡಿಎಫ್ಒ ಏಡುಕೊಂಡಲು ಪದನ್ನೋತಿಗಾಗಿ ರೈತರ ಮೇಲೆ ದೌರ್ಜನ್ಯ ಮಾಡಿದ್ದಾರೆ ಕೂಡಲೇ ಅವರನ್ನು ವಿಚಾರಣೆಗೆ‌ ಒಳಪಡಿಸಬೇಕು ಅರಣ್ಯ ಅಧಿಕಾರಿಗಳಿಗೆ ಕರುಣೆ ಇಲ್ಲವಾಗಿದೆ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೇ ಅಕ್ರಮ ನಡೆಯುತ್ತಿದ್ದಾರೆ ಅವರು ಯಾವ ರೀತಿ ರೈತರಿಗೆ ನ್ಯಾಯ ಕೊಡಲಿದ್ದಾರೆ ಎಂದು ಪ್ರಶ್ನೆ ಮಾಡಿದರು

ಈ ಸಂದರ್ಭದಲ್ಲಿ ದಲಿತ ಸೇನೆ ರಾಜ್ಯ ಅಧ್ಯಕ್ಷ ದಲಿತ್ ನಾರಾಯಣಸ್ವಾಮಿ ಮಾತನಾಡಿ ಅರಣ್ಯ ಇಲಾಖೆಯಲ್ಲಿ ಜಮೀನುಗಳಿಗೆ ಸಂಬಂಧಿಸಿದ ಸರಿಯಾದ ದಾಖಲೆಗಳು ಇಲ್ಲ ಆದರೆ ರೈತರ ಮೇಲೆ ವಿನಾಕಾರಣ ‌ದೌರ್ಜನ್ಯದ ಮೂಲಕ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಕೆಲವು ಕಡೆ ಮರಗಳನ್ನು ಉಳಿಸುವರೇ ಮರಗಳನ್ನು ಕಡಿಯುತ್ತಿದ್ದಾರೆ‌.‌‌ಲಕ್ಷಾಂತರ‌ ಮರಗಳನ್ನು ಕಡಿಮೆ ಬೆಲೆಗೆ ಹರಾಜಿನಲ್ಲಿ ಮಾರಾಟ ಮಾಡಿದ್ದಾರೆ ಇದನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ೧.೫೦ ಲಕ್ಷ ಬಹುಮಾನ ಗೆದ್ದು ಬೀಗಿದ ತಮಿಳುನಾಡು, ಲಕ್ನೋ, ಪುಣೆ ತಂಡಗಳು

ಈ ಸಂದರ್ಭದಲ್ಲಿ ಎಎಪಿ ಪಕ್ಷದ ಮುಖಂಡ ಮಂಜುನಾಥರೆಡ್ಡಿ, ರೈತರಾದ ವೆಂಕಟೇಶ್ ಗೌಡ, ರವಿ, ಸಂಜೀವಪ್ಪ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...