ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

Date:

ಕೋಲಾರ: ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚಲ್ಲಾಟದ ಜೊತೆಗೆ ಜನಸಂಖ್ಯೆಯ 2% ಇರುವ ಬಂಡವಾಳಗಾರರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದ್ದಾರೆ ಕಾರ್ಮಿಕರು, ರೈತರು ಒಗ್ಗಟ್ಟ ಪ್ರದರ್ಶನದ ಮೂಲಕ ತಮ್ಮ ಹಕ್ಕನ್ನು ಪಡೆಯಬೇಕಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್.ಎನ್ ಗೋಪಾಲಗೌಡ ತಿಳಿಸಿದರು

- Advertisement -

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶನಿವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸಂಘಟನೆಯ ಏಳನೇ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಯನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಗಳು ಮಾಲೀಕನಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಿ ಕಾರ್ಮಿಕರನ್ನು ಬೀದಿಗೆ ತಳ್ಳಿದ್ದಾರೆ ರಾಜಕೀಯ ವ್ಯವಸ್ಥೆ ಯಾವತ್ತೂ ಕಾರ್ಮಿಕರ ಪರ ನಿಲ್ಲುವುದಿಲ್ಲ ಶೋಷಣೆ ಇಲ್ಲದ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಒಂದಾಗುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಂಡವಾಳಶಾಹಿಗಳು ಕಾರ್ಮಿಕರ ಅವಶ್ಯಕತೆ ಇ್ಲಲವೆಂದು ನಿರಾಕರಿಸುತ್ತಿದ್ದು, ಸ್ವಯಂಘೋಷಿತ ಪ್ರಭುಗಳಾಗಲು ಹೊರಟಿದ್ದಾರೆ. ಸರ್ಕಾರಗಳು ತಮ್ಮ ಕಾರ್ಯ ಯಶಸ್ವಿಗೊಳಿಸಲು ಖಾಯಂ ಹೊರಗುತ್ತಿಗೆ ನೌಕರರನ್ನು ಬಳಸಿಕೊಳ್ಳುತ್ತಿದ್ದು, ಅವರ ಬದುಕಿನ ಸೇವಾ ಭದ್ರತೆಗೆ ಗಮನ ಹರಿಸದೆ ದುಡಿಸಿಕೊಳ್ಳುತ್ತಿದ್ದಾರೆ ಕಾರ್ಮಿಕರ ಹೋರಾಟದ ಫಲವಾಗಿ ಗಳಿಸಿದ್ದ 29 ಕಾರ್ಮಿಕರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ ಇದನ್ನು ವಿರೋಧಿಸಬೇಕಾಗಿದೆ ಕಾರ್ಮಿಕರ ಕನಿಷ್ಠ ವೇತನ 36 ಸಾವಿರ ಜಾರಿಗೆ ದೇಶಾದ್ಯಂತ ಇರುವ ಕಾರ್ಮಿಕರು ಒತ್ತಾಯ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಕಾರ್ಮಿಕರ ಹೋರಾಟಗಳನ್ನು ಸರ್ಕಾರಗಳು ಸಹಿಸಿಕೊಳ್ಳುತ್ತಿಲ್ಲ ಕಾರ್ಮಿಕರ ಕಾಯ್ದೆಗಳು ಅಪಾಯಕಾರಿಯಾಗಿದ್ದು ಬಂಡವಾಳಗಾರರಿಗೆ ಸರ್ಕಾರಗಳೇ ಮುಕ್ತ ಅವಕಾಶ ನೀಡಿವೆ ಕಾರ್ಮಿಕರು ಆಧುನಿಕ ಜೀತದಾಳುಗಳಾಗಿ ದುಡಿಯಬೇಕಾಗಿವೆ ಯುವ ಪೀಳಿಗೆಯ ಭವಿಷ್ಯವನ್ನು ಕಂಪನಿಗಳು ಆಳು ಮಾಡಲು ಹೊರಟಿದ್ದಾರೆ ಶಾಸಕರು ಸಂಸದರು ಸೇರಿದಂತೆ ಜನಪ್ರತಿನಿಧಿಗಳಿಗೆ ಕಾರ್ಮಿಕರ ಪರ ಧ್ವನಿಯಿಲ್ಲ ಒಗ್ಗಟ್ಟು ಒಂದೇ ದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರು ಬೆಳೆದ ವಸ್ತುಗಳಿಗೆ ಸರಿಯಾದ ಬೆಂಬಲ ಬೆಲೆ, ಮಾರುಕಟ್ಟೆ ವ್ಯವಸ್ಥೆ ಇಲ್ಲ, ಕೈಗಾರಿಕೆಗಳು ಇಲ್ಲದೇ ಹಣ್ಣು ತರಕಾರಿಗಳು ಕೊಳೆಯುವ ಸ್ಥಿತಿಗೆ ಬಂದಿದೆ ಸರ್ಕಾರಗಳು ನಮ್ಮ ಬೇಡಿಕೆ ಕೇಳಿಸಿಕೊಳ್ಳಲ್ಲ ಕಿವುಡತನ ತೋರುತ್ತಿವೆ. ಇದಕ್ಕಾಗಿ ಒಗ್ಗಟ್ಟು ಮತ್ತು ಐಕ್ಯತೆ ಬೇಕು ದೆಹಲಿ ಮತ್ತು ದೇವನಹಳ್ಳಿಯ ರೈತ ಹೋರಾಟಗಳು ನಮಗೆಲ್ಲ ಮಾದರಿಯಾಗಬೇಕು ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಪ್ರಸ್ತಾವಿಕವಾಗಿ ಮಾತನಾಡಿ, ದುಡಿಯುವ ಜನರಿಗೆ ಬದುಕಲು ಯೋಗ್ಯ ಕೂಲಿ, ವಸತಿ, ಪಿಂಚಣಿ ನೀಡಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರ ಕಾಯಂ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಮಗ್ರ ಸಾಮಾಜಿಕ ಭದ್ರತೆ, ಬರಪೀಡಿತ-ಒಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಮಧುಗಿರಿ ಉಪ ವಿಭಾಗಕ್ಕೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಈ ಪ್ರದೇಶಗಳಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕಿಸುವಂತೆ ಈ ಸಮ್ಮೇಳನದಲ್ಲಿ ಚರ್ಚೆಯಾಗಬೇಕು ಎಂದರು.

ಇದಕ್ಕೂ ಮುಂಚೆ ನಗರದ ಪ್ರವಾಸಿ ಮಂದಿರದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಸಿಐಟಿಯು ಕಾರ್ಯಕರ್ತರು ಸರ್ಕಾರಗಳ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮೆರವಣಿಗೆ ಮೂಲಕ ರಂಗಮಂದಿರಕ್ಕೆ ಆಗಮಿಸಿದರು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿಯಲ್ಲಿ: ಜಡಮಡಗು ಧುಮ್ಮಿಕ್ಕುತ್ತಿರುವ ಜಲಪಾತ

ಬಹಿರಂಗ ಸಭೆಯ ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಸಲ್ಲಾವುದ್ದೀನ್ ಬಾಬು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ,‌ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಆಂಜಲಮ್ಮ, ಮುಖಂಡರಾದ ಪಿ.ಶ್ರೀನಿವಾಸ್, ಪಿ.ಆರ್ ಸೂರ್ಯನಾರಾಯಣ, ಎ.ಆರ್ ಬಾಬು, ಪಾತಕೋಟ ನವೀನ್ ಕುಮಾರ್, ತಂಗರಾಜ್, ಜಯಲಕ್ಷ್ಮಿ, ಭೀಮರಾಜ್, ಶಿವಾನಂದ್, ವೀರಭದ್ರ, ತಿರುಪತಿ, ಆನಂದ್, ಕೇಶವರಾವ್ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...