ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ

Date:

ಕೆಜಿಎಫ್: ತಾಲೂಕಿನ ಬೇತಮಂಗಲದ ಸಾರ್ವಜನಿಕ ಶೌಚಾಲಯ ಸ್ಥಳದಲ್ಲಿ ಅಕ್ರಮ ಕೊಠಡಿಗಳನ್ನು ನಿರ್ಮಿಸಿ ಬಾಡಿಗೆ ನೀಡಿರುವ ಹಾಗೂ ಕ್ಯಾಸಂಬಳ್ಳಿ ಹೋಬಳಿಯ ಕಾಜಿಮಿಟ್ಟಹಳ್ಳಿ ಸರ್ವೆ ನಂಬರ್ 28ರಲ್ಲಿ ಸರ್ಕಾರಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ 15 ಎಕರೆಯಲ್ಲಿ ಸೋಲಾರ್ ಪ್ಲಾಂಟ್ ಒತ್ತುವರಿ‌ ತೆರಿಗೆ ಒತ್ತಾಯಿಸಿ ಅಂಬೇಡ್ಕರ್ ಸಮತಾದಳ ಸಂಘಟನೆ ರಾಜ್ಯಾಧ್ಯಕ್ಷ ಸಂದಾ ಮುನಿಸ್ವಾಮಿ ನೇತೃತ್ವದಲ್ಲಿ ಹೆಚ್ಚು ತಾಲೂಕು ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆ ನಡೆಸಿ ತಹಸಿಲ್ದಾರ್ ಎಚ್ ಕೆ ಭರತ್ ಅವರಿಗೆ ಮನವಿ ನೀಡಿ ಮಾತನಾಡಿದ ಅವರು, ಕೆ ಜಿ ಎಫ್ ತಾಲೂಕಿನ ಬೇತಮಂಗಲ ಸಾರ್ವಜನಿಕ ಶೌಚಾಲಯದ ಸ್ಥಳದಲ್ಲಿ‌ ಬಲಾಢ್ಯರು ಅಕ್ರಮವಾಗಿ ದಾಖಲೆ ಸೃಷ್ಟಿಸಿ ಎರಡು ಕೊಠಡಿಗಳನ್ನು ಲಕ್ಷಾಂತರ ರೂ.,ಗಳಿಗೆ ಬಾಡಿಗೆಗೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕ್ಯಾಸಂಬಳ್ಳಿ ಹೋಬಳಿಯ ಕಾಜಿಮಿಟ್ಟಹಳ್ಳಿ ಸರ್ವೆ ನಂಬರ್ 28ರಲ್ಲಿ 15 ಎಕರೆಯಲ್ಲಿ ಸೋಲಾರ್ ಪ್ಲಾಂಟ್ ಗಳನ್ನು ನಿರ್ಮಿಸಿ ಕೋಟ್ಯಾಂತರ ರೂಪಾಯಿಗಳನ್ನು ಲಪಟಾಯಿಸಲಾಗುತ್ತಿದೆ.

ಆಂಧ್ರ ಗಡಿಭಾಗದಲ್ಲಿರುವ ಪಂಥನಹಳ್ಳಿಯ ಸರ್ವೇ ನಂಬರ್ 84 87 ರಲ್ಲಿ ಆಂಧ್ರ ಮೂಲದವರು ಒತ್ತುವರಿ ಮಾಡಿಕೊಳ್ಳಲು ಯತ್ನಿಸುತ್ತಿದ್ದು ಹೇ ಭಾಗದಲ್ಲಿ ಎಕರೆಗೆ 50 ರಿಂದ 60 ಕೋಟಿ ಬೆಲೆ ಎಂದು ತಕ್ಷಣ ಒತ್ತುವರಿಸಿ ಸರ್ಕಾರದ ಭೂಮಿಯನ್ನು ಉಳಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಮೂಲದ ಬಲಾಟಿಯರು ತಾಲೂಕಿನ ಸರ್ಕಾರಿ ಗೋಮಾಲ ಗುಂಡು ತೋಪು ಇನಾಂತಿ ಜಮೀನಿನನ್ನು ತಕ್ಷಣ ಸರ್ವೆ ನಡೆಸಿ ಉಳಿಸಿಕೊಂಡು , ಸ್ಥಳೀಯ ರೈತರ, ಬಡ ಕೂಲಿ , ಕಾರ್ಮಿಕರಿಗೆ ಉಳಿಮೆ ಮಾಡಲು ಹಾಗೂ ನಿವೇಶನ ರಹಿತರಿಗೆ ಸೈಟ್ ಗಳ ಹಂಚಿಕೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ತಹಸಿಲ್ದಾರ್ ಎಚ್ ಕೆ ಭರತ್ ಮಾತನಾಡಿ, ಇದೇ ತಿಂಗಳ 18ನೇ ತಾರೀಖಿನವರೆಗೂ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು , ಪೂರ್ಣಗೊಂಡ ತಕ್ಷಣ ಈ ಜಮೀನುಗಳ ಬಗ್ಗೆ ಪರಿಶೀಲನೆ ನೈಜತೆ ವರದಿ ಪಡೆದುಕೊಂಡು‌ ಒತ್ತುವರಿ ತೆರವುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಪ್ರತಿಭಟನಾಕಾರರು ಒಂದು ತಿಂಗಳ ಕಾಲಾವಕಾಶ ನೀಡಿ ನಮ್ಮ ಸಮಸ್ಯೆ ಪರಿಹಾರ ವಾಗದಿದ್ದರೆ ತಾಲೂಕು ಕಚೇರಿ ಬಳಿ ಅನಿರ್ದಿಷ್ಟ ಅವಧಿ ಧರಣಿ ನಡೆಸುವುದಾಗಿ ಗಡುವು ನೀಡಿದರು.

ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಮತಾ ದಳ ಸಂಘಟನೆ ರಾಜ್ಯಾಧ್ಯಕ್ಷ ಸಂದಾ ಮುನಿಸ್ವಾಮಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷ ಭಾರತಮ್ಮ, ಮುಖಂಡರಾದ ಬಾರ್ಲಿ ಮುನಿ ವೆಂಕಟಸ್ವಾಮಿ, ಕವರಗಾನಹಳ್ಳಿ ಬಾಲಸುಬ್ರಮಣಿ, ಆನಂದಪ್ಪ , ಅರುಣ್ ಕುಮಾರ್, ‌ ವೆಂಕಟಮನಿ, ‌ ನಾರಾಯಣಸ್ವಾಮಿ, ಅನೇಕ ಮಹಿಳೆಯರು ,ಸಂಘಟನೆ ಪದಾಧಿಕಾರಿಗಳು, ವಿವಿಧ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ..? ರಿಂಗ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ ಚರ್ಚೆ-25 ವರ್ಷದ ದೃಷ್ಟಿಕೋನ‌ ಇಟ್ಟುಕೊಂಡು ನಿರ್ಮಿಸಿ: ಕೊತ್ತೂರು ಮಂಜುನಾಥ್

ಚಿತ್ರ01 ವಿವಿಧ ಅಕ್ರಮ ಚಟುವಟಿಕೆಗಳ ವಿರುದ್ಧ ಡಾ.ಬಿ.ಆರ್ ಅಂಬೇಡ್ಕರ್ ಸಮತಾ ದಳ ಸಂಘಟನೆ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಚ್ ಕೆ ಭರತ್ ಅವರಿಗೆ ಮನವಿ ಸಲ್ಲಿಸಿದರು. ಸಿಪಿಐ ಪಿ.ಎಂ.ನವೀನ್ ಇತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...