ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ ಎಸ್ ಎಫ್ ಐ ಶೈಕ್ಷಣಿಕ ಜಾಥಾ‌

Date:

ಬಾಗೇಪಲ್ಲಿ:-ರಾಜ್ಯ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳಕ್ಕಾಗಿ, ಖಾಲಿ ಇರುವ ಉದ್ಯೋಗದ ಭರ್ತಿಗಾಗಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯಬೇಕಾದ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಮಾವೇಶ ಅಕ್ಟೋಬರ್ 29 ಹಾಗೂ30 ರಂದು ಹಾವೇರಿ ಗುರುಭವನದಲ್ಲಿ ಎಸ್. ಎಫ್.ಐ ರಾಜ್ಯ ಸಮಿತಿ ವತಿಯಿಂದ “ಶಿಕ್ಷಣ ಉಳಿಸಿ ಹಾಸ್ಟೆಲ್ ಬಲಪಡಿಸಿ” ಘೋಷವಾಕ್ಯದಡಿಯಲ್ಲಿ ಶೈಕ್ಷಣಿಕ ಜಾಥಾ ಯಶಸ್ವಿಯಾಗಿ ನೆರವೇರಿಸುವಂತೆ ಎಂದು ಬಾಗೇಪಲ್ಲಿ ತಾಲ್ಲೂಕು ಎಸ್. ಎಫ್.ಐ ಅದ್ಯಕ್ಷ ಸೋಮಶೇಖರ್ ತಿಳಿಸಿದರು.

ಪಟ್ಟಣದ ಜಿ.ವಿ.ಶ್ರೀರಾಮ ರೆಡ್ಡಿ ಪುಥಳಿಗೆ ಹೂವಿನ ಹಾರ ಹಾಕುವ ಮೂಲಕ ಚಾಲನೆ ನೀಡಿದರು.
ತದನಂತರ ಮಾತನಾಡಿ ಶಿಕ್ಷಣದ ವ್ಯಾಪಾರೀಕರಣ, ಕೇಂದ್ರೀಕರಣ, ಭ್ರಷ್ಟಾಚಾರ ಹಾಗೂ ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ವಿರುದ್ಧ ನಿರಂತರವಾಗಿ ಎಸ್ ಎಫ್ ಐ ಹೋರಾಟ ರೂಪಿಸುತ್ತಾ ಬಲಿಷ್ಠ ವಿದ್ಯಾರ್ಥಿ ಚಳವಳಿಯನ್ನು ಎಸ್ ಎಫ್ ಐ ಮುನ್ನಡೆಸುತ್ತಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು ಖಾಸಗಿ ಶಾಲೆಗಳು ನಾಯಿಕೊಡೆಯಂತೆ ತಲೆಎತ್ತಿ ನಿಂತು ಶಿಕ್ಷಣವನ್ನು ದುಬಾರಿ ಮಾಡಿದೆ ಎಂದು ತಿಳಿಸಿದರು ಹಲವಾರು ಸರ್ಕಾರಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದ್ದು ಸರ್ಕಾರಗಳು ಹೆಚ್ಚಿನ ಕಾಳಜಿ ವಹಿಸುತ್ತಿಲ್ಲ. ಇದು ಖಂಡನೀಯ ಎಂದರು.

ಎಸ್. ಎಫ್.ಐ ಜಿಲ್ಲಾದ್ಯಕ್ಷ ಸೋಮಶೇಖರ್ ಮಾತನಾಡಿ ರಾಜ್ಯ, ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ಒಂದು ಶಿಕ್ಷಣ ನೀತಿಯನ್ನು ಸರ್ಕಾರ ವಿದ್ಯಾರ್ಥಿಗಳಿಗೆ ಜಾರಿ ಮಾಡುತ್ತಿಲ್ಲ ದಿನದಿಂದ ದಿನಕ್ಕೆ ಶಿಕ್ಷಣ ಕ್ಷೇತ್ರ ಸಂಪೂರ್ಣ ಖಾಸಗಿಕರಣವಾಗುತ್ತಿದೆ. ಖಾಸಗಿಕರಣದ ನೆಪದಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯನ್ನೆ ಕೇಸರಿಕರಣ ಮಾಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಇದು ಸಂವಿಧಾನದ ಆಶಯಗಳನ್ನು ಹೊಂದಿರುವ ದೇಶವಾಗಿದೆ ಎಲ್ಲರೂ ಸಂವಿಧಾನದ ಭಾಗವಾಗಿಯೇ ಇರಬೇಕು ವಿನಃ ಯಾವುದೋ ಕೋಮುವಾದಿ ಸಂಘಗಳು ಹೇಳುವ ಹಾಗೆ ವ್ಯವಸ್ಥೆ ಸೃಷ್ಟಿ ಮಾಡುವುದಲ್ಲ” ಎಂದು ಹೇಳಿ ಕೀಡಿಕಾರಿದರು

ರಾಜ್ಯದಲ್ಲಿ ಇರುವ ವಸತಿ ನಿಲಯಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗದೆ ಬಡ ರೈತ ಕಾರ್ಮಿಕ ಮಕ್ಕಳನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ವಸತಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ..? ಬೈಕ್ ಮತ್ತು ಶಾಲಾ ವಾಹನ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

- Advertisement -

ಈ ಸಂದರ್ಭದಲ್ಲಿ ಸಿಪಿಐಎಂ ತಾಲ್ಲೂಕು ಮುಖಂಡರಾದ ರಘುರಾಮ ರೆಡ್ಡಿ ಚನ್ನರಾಯಪ್ಪ,ಮುಸ್ತಫಾ
ವಿವಿಧ ಕಾಲೇಜು ಎಸ್. ಎಫ್.ಐ ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...