ಸಿಜೆಐ ಮೇಲೆ ಶೂ ಎಸೆತ : ರಸ್ತೆ ಮೇಲೆ ಕೂತು ಪ್ರತಿಭಟನೆ

Date:

ಬಂಗಾರಪೇಟೆ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ನ್ಯಾಲಯಲದ ಕಲಾಪದಲ್ಲೇ ವಕೀಲರೊಬ್ಬರು ಶೂ ಎಸೆದಿರುವ ಘಟನೆ ಖಂಡಿಸಿ ದಲಿತ ಸಮಾಜ ಸೇನೆಯ ಮುಖಂಡರು ಬಂಗಾರಪೇಟೆ ನಗರದ ಕುವೆಂಪು ವೃತ್ತದಲ್ಲಿ ರಸ್ತೆ ಮೇಲೆ ಕೂತು ಪ್ರತಿಭಟನೆ ನಡೆಸಿದರು.

- Advertisement -

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಘಟನೆಯು ಇತಿಹಾಸದಲ್ಲಿ ಇದೇ ಮೊದಲಾಗಿದ್ದು, ತಪ್ಪಿತಸ್ಥ ವಕೀಲನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕೂಂಟೆ ಆನಂದ್ ಮಾತನಾಡಿ ನ್ಯಾಯಮೂರ್ತಿಗಳ ಮೇಲೆ ನ್ಯಾಯಾಲಯದಲ್ಲೇ ಶೂ ಎಸೆದಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಮಾನ ಮತ್ತು ಕಳಂಕವಾಗಿದೆ. ಸನಾತನ ಧರ್ಮಕ್ಕೆ ಸಿಜೆಐ ಗವಾಯಿ ಅವರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆರೋಪಿ ರಾಕೇಶ್ ಕಿಶೋರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದು ಆನಾಗರಿಕವಾಗಿ ನಡೆದುಕೊಂಡಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ಅಪಮಾನ ಮಾಡಿದ್ದಾನೆ ಎಂದು ಆಕ್ರೋಶ ಹೊರಹಾಕಿದರು.

ನ್ಯಾಯ ಮೂರ್ತಿ ಗವಾಯಿ ಅವರು ಘಟನೆಯನ್ನು ನಿರ್ಲಕ್ಷಿಸಬೇಕು ಎಂದು ಹೇಳಿರುವುದು ಅವರ ದೊಡ್ಡತನ. ನ್ಯಾ. ಗವಾಯಿ ತೋರಿದ ತಾಳ್ಮೆ ಪ್ರಶಂಶನೀಯ. ಇದು ನಮ್ಮ ನ್ಯಾಯಿಕ ಮೌಲ್ಯಗಳ ಸಂಕೇತ. ನ್ಯಾಯಮೂರ್ತಿಗಳ ಮೇಲಿನ ಈ ದಾಳಿಯು ಸಮಸ್ತ ಭಾರತೀಯರಲ್ಲಿ ಕ್ರೊಧವನ್ನುಂಟು ಮಾಡಿದೆ. ಇಂಥ ಘಟನೆಗಳಿಗೆ ಭಾರತದಲ್ಲಿ ಅವಕಾಶವಿಲ್ಲ. ಆರೋಪಿ ವಕೀಲನ ವಿರುದ್ಧ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ನಾಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಮೃತ ಹಸ್ತದಿಂದ ಸೇತುವೆಗಳ ಲೋಕಾರ್ಪಣೆ: ಶಾಸಕಿ ಎಂ.ರೂಪಕಲಾ

ಈ ಸಂದರ್ಭದಲ್ಲಿ ವೆಂಕಟೇಶ್, ಮುನಿರಾಜು, ದೇವಗಾನಹಳ್ಳಿ ನಾಗೇಶ್, ರಾಜೇಂದ್ರ, ಅಯ್ಯಪ್ಪ, ಆಟೋಕರ್ಣ, ರಾಜು, ರವಿ, ಪ್ರದೀಪ್, ಮಹೇಂದ್ರ ಭಾಗವಹಿಸಿದ್ದರು.



WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...