ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ಹಣವನ್ನು ರಾಮದುರ್ಗದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರಿನಲ್ಲಿ ದಾಖಲೆಯಿಲ್ಲದೆ ಟೂರಿಸ್ಟ್ ಬ್ಯಾಗ್ ನಲ್ಲಿ ತುಂಬಿಕೊಂಡಿದ್ದ ₹1.54 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲ ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಣವನ್ನು ಹಸ್ತಾಂತರಿಸಲಾಗಿದೆ.
ಜಿಲ್ಲೆಯ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು ಎಲ್ಲ ವಾಹನಗಳನ್ನು ತಪಾಸನೆ ನಡೆಸುತ್ತಿದ್ದಾರೆ. ಚುನಾವಣೆ ಕಾವು ಏರುತ್ತಿದ್ದಂತೆ ಅಕ್ರಮ ಹಣ ಹಾಗೂ ಚಿನ್ನಾಭರಣ ಸಾಗಾಟಕ್ಕೆ ಕಡಿವಾಣ ಹಾಕಿದ್ದಾರೆ.ವ