ಅಕ್ಟೋಬರ್ 17ರ ಕೋಲಾರ್ ಬಂದ್ ಗೆ ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕೂಂಟೆ ಆನಂದ್ ಬೆಂಬಲ

Date:

ಕೋಲಾರ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆತವನ್ನು ಖಂಡಿಸಿ ಅಕ್ಟೋಬರ್ 17ರಂದು ನಡೆಯಲಿರುವ ಕೋಲಾರ ಬಂದ್ ಗೆ ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕೂಂಟೆ ಆನಂದ್ ಸಂಪೂರ್ಣ ಬೆಂಬಲ ನೀಡಿದ್ದಾರೆ.

- Advertisement -

ಸುಪ್ರೀಂ ಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿ ರವರ ಮೇಲೆ ಅವಿವೇಕಿ ವಕೀಲ ಶೂ ಎಸೆದಿರುವ ಘಟನೆ ಖಂಡಿಸಿ ದೇಶಾದ್ಯಂತ ಹಾಗೂ ರಾಜ್ಯದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈಗ ಹೋರಾಟಗಳ ತವರುರು ಆಗಿರುವ ಕೋಲಾರ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟಗಳಿಂದ ಅಕ್ಟೋಬರ್ 17 ರ ಶುಕ್ರವಾರ ಬಂದ್ ಗೆ ಕರೆ ನೀಡಿದ್ದು ಸಂಪೂರ್ಣವಾಗಿ ದಲಿತ ಸಮಾಜಸೇನೆ ಬೆಂಬಲ ನೀಡುತ್ತೆ ಎಂದು ಕೋಲಾರ ನಗರದ ನಚಿಕೇತನ ನಿಲಯದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದಲಿತ ಸಮಾಜದ ವ್ಯಕ್ತಿ ಈ ದೇಶದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಆಗಿದ್ದಾರೆ ಎನ್ನುವ ಕಾರಣಕ್ಕೆ ಕೆಲವು ಮನುವಾದಿಗಳು ಹಾಗೂ ಜಾತಿವಾದಿಗಳು ಸಹಿಸುತ್ತಿಲ್ಲಾ, ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ತಾಯಿಯವರಿಗೆ ಆರ್ ಎಸ್ಎಸ್ ಶತಮಾನೋತ್ಸಕ್ಕೆ ಆಹ್ವಾನ ನೀಡಿದ್ರು, ಆ ಮಹಾತಾಯಿ ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಅನುಯಾಯಿ ನಿಮ್ಮ ಕಾರ್ಯಕ್ರಮಕ್ಕೆ ಬರಲ್ಲಾ ಅಂತ ನಿರಾಕರಣೆ ಮಾಡಿದ್ರು, ಇದನ್ನೇ ಮನಸ್ಸಿನಲ್ಲಿ ಕಿಶೋರ್ ರಾಜೇಶ್ ಅಂತ ವಕೀಲ ಮನಸ್ಸಿನಲ್ಲಿ ಇಟ್ಟುಕೊಂಡು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಕ್ಕೆ ಮುಂದಾಗಿರೋದು ಇಡೀ ದೇಶವೇ ತಲೆ ತಗ್ಗಿಸುವ ಘಟನೆಯಾಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಕೆಜಿಎಫ್, ಮುಳಬಾಗಿಲು ತಾಲೂಕಿನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅನುಯಾಯಿಗಳು, ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ ನೀಡುತ್ತಿದ್ದು ಎಲ್ಲರೂ ಸೇರಿ ಕೋಲಾರ ಬಂದ್ ಗೆ ಯಶಸ್ವಿಯಾಗಿ ಮಾಡೋಣ ಎಂದು ಕರೆ ನೀಡಿದರು.

ನ್ಯಾಯ ಮೂರ್ತಿ ಗವಾಯಿ ಅವರ ಮೇಲೆ ಶೂ ಎಸೆದಿರುವ ರಾಕೇಶ್ ಕಿಶೋರ್ ರವರನ್ನು ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ವಕ್ತಾರ ಭಾಸ್ಕರ್ ರಾವ್ ಪ್ರತಿಕ್ರಿಯೆಯನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿ ಕೋಲಾರ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿ ಶಾಂತಿಯುತವಾಗಿ ಬಂದ್ ಯಶಸ್ವಿ ಮಾಡುತ್ತೇವೆ ಎಂದು ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕೂಂಟೆ ಆನಂದ್ ತಿಳಿಸಿದರು

ಇದನ್ನು ಓದಿದ್ದೀರಾ..? ಆರು‌ಮಂದಿ ವಲಸೆ ಕಾರ್ಮಿಕರ ಸಾವು ಸೂಕ್ತ ಪರಿಹಾರ ಕೊಡಿಸುವಲ್ಲಿ ರಾಜ್ಯ ಸರ್ಕಾರ ವಿಫಲ ಸಿಐಟಿಯು ತೀವ್ರ ಖಂಡನೆ

ಡಿಕ್ಕಾ ವೆಂಕಟೇಶ್, ಐಯಪ್ಪಾ, ರವಿ, ಪ್ರದೀಪ್, ಶ್ರೀಕಂಠ, ಮುನಿರಾಜು, ಮುಂತಾದವರು ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...