ಅಡುಗೆ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಗೆ ಆಗ್ರಹ

Date:

ಬಾಗೇಪಲ್ಲಿ:-ಅಡುಗೆ ಕಾರ್ಮಿಕರ ಹಾಗೂ ಸಹಾಯಕ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸುವ ಅಗತ್ಯವಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಕೋಲಾರ ಬಿ.ಎಸ್.ಸುರೇಶ್ ಬಾಬು ಹೇಳಿದರು.

- Advertisement -

ತಾಲ್ಲೂಕು ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರು, ಅಸಂಘಟಿ
ಸಂಘದಿಂದ ಪಟ್ಟಣದ ಹೊರವಲಯದ ದೇವರಗುಡಿಪಲ್ಲಿ ಗಿರಿಜಾ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ‘ಅಡುಗೆ ಕಾರ್ಮಿಕರ ಕರ್ನಾಟಕ ರಾಜ್ಯ ಆದೇಶ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 76 ವರ್ಷಗಳು ಕಳೆದರೂ ಅಡುಗೆ ಕಾರ್ಮಿಕರ ಬದುಕು ಶೋಚನೀಯವಾಗಿದೆ.
ಅಡುಗೆ ಕಾರ್ಮಿಕರ ಹಾಗೂ ಸಹಾಯಕ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ರಾಜ್ಯದಲ್ಲಿ ಹೋಟೆಲ್‌, ಕಲ್ಯಾಣ ಮಂಟಪ ಮತ್ತಿತರೆಡೆ 10 ಲಕ್ಷಕ್ಕೂ ಹೆಚ್ಚು ಅಡುಗೆ ಕೆಲಸಗಾರರು, ಸಹಾಯಕರು ಕಾರ್ಯನಿರ್ವಹಿಸುತ್ತಿದ್ದು ಸರ್ಕಾರದಿಂದ ಸೌಲಭ್ಯ ವಂಚಿತರಾಗಿದ್ದಾರೆ. 15 ವರ್ಷದಿಂದ ಕರ್ನಾಟಕ ಅಡುಗೆ ಕೆಲಸಗಾರರ ಹಾಗೂ ಸಹಾಯಕರ ಕ್ಷೇಮಾಭಿವೃದ್ಧಿ ಯೂನಿಯನ್‌ ನಡೆಸಿದ ಹೋರಾಟದ ಫಲವಾಗಿ ಈ ವರ್ಗದ ಕಾರ್ಮಿಕರಿಗೆ ಅಸಂಘಟಿತ ಕಾರ್ಮಿಕರ ಸ್ಥಾನಮಾನ ನೀಡಿ ಸರ್ಕಾರ ಜೂನ್‌ 6ರಂದು ಆದೇಶ ಹೊರಡಿಸಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಅಡುಗೆ ಕೆಲಸ ಮಾಡುವವರು ಒಗ್ಗಟ್ಟಾಗಿ ಸಂಘಟನೆಯ ಮೂಲಕ ತಮ್ಮ ನ್ಯಾಯಯುತ ಹಕ್ಕುಗಳನ್ನು ಪಡೆದುಕೊಳ್ಳಬೇಕೆಂದು ಪ್ರತಿಪಾದಿಸಿದರು.

ಅಡಿಗೆ ಕಾರ್ಮಿಕರ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾದ, ಅಸಂಖ್ಯಾತ ಜನರಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಹಸಿವನ್ನು ನೀಗಿಸುವ ಅಡುಗೆ ಕೆಲಸದವರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರ ಮಕ್ಕಳ ವಿದ್ಯಾಭ್ಯಾಸ, ಚಿಕಿತ್ಸಾ ವೆಚ್ಚ, ಅಪಘಾತ ಪರಿಹಾರ ಮತ್ತು ಪಿಂಚಣಿ ಸೌಲಭ್ಯಗಳು ಜಾರಿಗೆ ತರುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕಾಗಿದೆ ಎಂದರು.
ಸಂಘಟನೆಯಿಂದ ಮಾತ್ರ ನಾವು ಹಕ್ಕುಗಳನ್ನು ಪಡೆಯಲು, ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಗಳು ಗಮನಹರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಘಟನೆಯನ್ನು ಬಲಗೊಳಿಸುತ್ತಿದ್ದು, ಎಲ್ಲ ಜಿಲ್ಲೆಗಳಲ್ಲಿ ಶಾಖೆಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ಸರ್ಕಾರ ಅಸಂಘಟಿತ ಕಾರ್ಮಿಕರ ಸ್ಥಾನಮಾನವನ್ನು ಅಡುಗೆ ಕೆಲಸಗಾರರಿಗೂ ಘೋಷಿಸಿದ್ದು, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ವತಿಯಿಂದ ಸರ್ಕಾರದ ಗುರುತಿನ ಚೀಟಿ ವಿತರಿಸಲಾಗುವುದು .

ಎಲ್ಲಾ ಅಡಿಗೆ ಕಾರ್ಮಿಕರು ಕಡ್ಡಾಯವಾಗಿ ಪಡೆಯಬೇಕು,ಸರ್ಕಾರದ ಗುರುತಿನ ಚೀಟಿ ಪಡೆಯುದರಿಂದ ರಾಜ್ಯ ಸರ್ಕಾರದಿಂದ ಅಪಘಾತ ಮರಣ ಹೊಂದಿದರೆ 1ಲಕ್ಷ,ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದರೆ 1 ಲಕ್ಷ, ಸಹಜವಾಗಿ ಮರಣಹೊಂದಿದರೆ ಅಂತ್ಯಕ್ರಿಯೆ ವೆಚ್ಚಕ್ಕಾಗಿ 10,000 ಸಾವಿರ ಸಹಾಯ ಧನ ನೀಡಲಾಗುತ್ತದೆ ಎಂದು ಹೇಳಿದರು.ಮುಂದಿನ ವರ್ಷದಲ್ಲಿ ಕೋಲಾರದಲ್ಲಿ ಅಡಿಗೆ ಕಾರ್ಮಿಕರ ಹಾಗೂ ಸಹಾಯಕ ಕಾರ್ಮಿಕರ ರಾಜ್ಯ ಸಮಾವೇಶದಲ್ಲಿ ಎಲ್ಲರೂ ಪಾಲ್ಗೊಳ್ಳಲು ಮನವಿ ಮಾಡಿದರು. ಅಂದು ಸರ್ಕಾರದ ವತಿಯಿಂದ ಅಡಿಗೆ ಕಾರ್ಮಿಕರ ಗುರ್ತಿನ ಚೀಟಿ ನೀಡಲಾಗುತ್ತದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ರಾತ್ರಿ ಭೇಟಿ

ಈ ಸಂದರ್ಭದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಬಾಗೇಪಲ್ಲಿ ತಾಲ್ಲೂಕು ಅಸಂಘಟಿತ ಅಡಿಗೆ ಕೆಲಸಗಾರರು ಹಾಗೂ ಸಹಾಯಕ ಕಾರ್ಮಿಕರ ಟ್ರಸ್ಟ್ ಸಂಸ್ಥಾಪಕರು ಹಾಗೂ ಅಧ್ಯಕ್ಷ ದೇವರೆಡ್ಡಿಪಲ್ಲಿ ಡಿ.ಎನ್.ಶಿವಾರೆಡ್ಡಿ,ಪ್ರಧಾನ ಕಾರ್ಯದರ್ಶಿ ಎಸ್. ಬಸವರಾಜ್,ಶಿವಪ್ಪ ಉಪಾಧ್ಯಕ್ಷ, ನರಸಿಂಹಪ್ಪ ಖಜಾಂಚಿ, ಬೂದಲಿಪಲ್ಲಿ ಚೌಡರೆಡ್ಡಿ, ನಾಗಪ್ಪ ,ಮಂಜುನಾಥ್, ರವಿಚಂದ್ರರೆಡ್ಡಿ,ಶಂಕರಪ್ಪ, ಆನಂದ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...