ಇಂಜಿನಿಯರಿಂಗ್ ಕಾಲೇಜ್ ಕಾಮಗಾರಿ ಕೆಲಸ ನೋಡಿ ಮಾಜಿ ಶಾಸಕರಿಗೆ ಹೊಟ್ಟೆ ಉರಿಯುತ್ತದೆ

Date:

ಚಿಂತಾಮಣಿ: ಅಭಿವೃದ್ಧಿ ಕೆಲಸಗಳಿಗೆ ಕಿರಿ ಕಿರಿ ಮಾಡುವುದು ಅಡ್ಡಿಪಡಿಸುವುದು ಅವರದೇ ಆದಂತಹ ರೀತಿಯಲ್ಲಿ ವ್ಯಾಕರಣ ಮಾಡುವಂತಹದು ಅಭಿವೃದ್ಧಿ ಕೆಲಸಗಳು ಪರ್ಸೆಂಟೇಜ್ ಗಾಗಿ ಮಾಡುವುದಾಗಿ ನನ್ನ ಮೇಲೆ ಹೇಳುವದು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರು ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ರವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

- Advertisement -

ಇಂದು ಚಿಂತಾಮಣಿ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಕ್ಕು ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನೀವು 10 ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದೀರಲ್ಲ,ಅಂದು ತಾವೆಲ್ಲ ಪರ್ಸೆಂಟೇಜ್ ಗಿನ ಅಭಿವೃದ್ಧಿ ಕೆಲಸಗಳು ಮಾಡಿದ್ದು,ನಮ್ಮ ಕುಟುಂಬ ಶಾಸಕ ಸ್ಥಾನವನ್ನು 1950 ರಿಂದ ನೋಡಿಕೊಂಡು ಬರುತ್ತಿದೆ,ನೆನ್ನೆ ಮೊನ್ನೆ ಬೆಂಗಳೂರಿಂದ ಬಂದವರು ನೀವು ನಿಮ್ಮಿಂದ ಯಾವ ರೀತಿ ಆಡಳಿತ ಮಾಡಬೇಕು ಯಾವ ರೀತಿ ಅಭಿವೃದ್ಧಿ ಕೆಲಸ ಮಾಡಬೇಕೆಂದು ನಿಮ್ಮಿಂದ ಕಲಿಯುವ ಅವಶ್ಯಕತೆ ನನಗಿಲ್ಲ ಎಂದು ಮಾಜಿ ಶಾಸಕರ ವಿರುದ್ಧ ಗುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮಾಜಿ ಶಾಸಕರು ಬೆಂಗಳೂರು ಕಡೆಯಿಂದ ಚಿಂತಾಮಣಿಗೆ ಬರುವಾಗ ಇಂಜಿನಿಯರಿಂಗ್ ಕಾಲೇಜ್ ಅವರ ಕಣ್ಣಿಗೆ ಕಾಣಿಸುತ್ತದೆ,ಅದು ನೋಡಿದಾಗ ಅವರ ಹೊಟ್ಟೆ ಉರಿದು ಏನೆಲ್ಲಾ ಹೇಳುತ್ತಾರೆ,ನಾನು ಮಾಡುತ್ತಿರುವ ಕೆಲಸಗಳು ನೀವು ಮಾಡಿದ್ರೆ ಯಾರು ಬೇಡ ಅಂತ ಹೇಳುತ್ತಿದ್ರಾ.

ಮಸ್ತೇನಹಳ್ಳಿ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಒಂದು ಎಕರೆಯಲ್ಲಿ 250 ಮಾವಿನ ಗಿಡಗಳನ್ನು ನೆಟ್ಟು ಕೆಲ ಒಂದು ಮಾವಿನ ಗಿಡಕ್ಕೆ 25ಸಾವಿರ ಹಣವನ್ನು ಕೆಐಡಿಬಿಐಯಿಂದ ಪಡೆದವರು ಅವರ ಸಹಚರರೇ ಹೊರತು ನಾವಲ್ಲವೆಂಬುದನ್ನು ಮೊದಲು ತಿಳಿಯಬೇಕು.ಕೈಗಾರಿಕಾ ಪ್ರದೇಶದ ಅಧಿಸೂಚನೆಯಾದ ಮೇಲೆ ಕೆಲ ಅಧಿಕಾರಿಗಳೊಂದಿಗೆ ಶಾಮೀಲಾಗಿ ಅವರ ಕಣ್ಣ ಕೆಳಗೆ ನಡೆದಿರುವ ಅವ್ಯವಹಾರವಾಗಿದ್ದು ಅದನ್ನು ಅವರು ಮಾತನಾಡುವುದಿಲ್ಲವೆಂದರು.

ಮಾತನಾಡಿದ ಸಚಿವರ ದೊಡ್ಡ ಸಾಮರ್ಥ್ಯದಲ್ಲಿ ಶಾಶ್ವತವಾಗಿ ನೀರು ಹರಿಯುವಂತೆ ಮಾಡುವ ಸಲುವಾಗಿ ಹೆಚ್.ಎನ್ ವ್ಯಾಲಿ 120 ಕೆರೆ,ಕೆ.ಸಿವ್ಯಾಲಿ 50ಕ್ಕೂ ಹೆಚ್ಚು ಕೆರೆಗಳಿಗೆ ನೀರು ಒದಗಿಸುವ ಶಾಶ್ವತ ಪ್ರಯತ್ನವನ್ನು ಮಾಡಲಾಗುತ್ತಿದೆಯೆಂದರು.

ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವನೀರಿನ ಘಟಕಗಳನ್ನು ವಿವಿಧ ಯೋಜನೆಗಳ ಮೂಲಕ ಒದಗಿಸಲಾಗುತ್ತಿದ್ದು ಇದರಿಂದ ಶುದ್ದಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೂ ಒದಗಿಸುವ ತಾಲ್ಲೂಕ ನ್ನಾಗಿಸುವುದು ನನ್ನ ಧೈಯವಾಗಿದೆಯೆಂದರು.

ನಾನು ಶಾಸಕನಾಗಿ ಮಂತ್ರಿಯಾಗಿಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಆದ್ಯತೆಯನ್ನು ನೀಡುತ್ತಿದ್ದು ಕೇವಲ ಮಾತಿನ ಮೂಲಕ ಹೇಳುತ್ತಿಲ್ಲ ಬದಲಾಗಿ ಕಾರ್ಯ ರೂಪದಲ್ಲಿ ತಾವು ನೋಡಬಹುದಾಗಿದೆಯೆಂದು ನುಡಿದರು.

ಈ ಸಂದರ್ಭದಲ್ಲಿ ಸುಮಾರು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು.

ಇದನ್ನು ಓದಿದ್ದೀರಾ..? ವಿರೋಧಿಗಳಿಗೆ ವಿದ್ಯಾಭ್ಯಾಸದ ಕೊರತೆಯಿಂದ ಇಲ್ಲಸಲ್ಲದ ಮಾತನಾಡುತ್ತಾರೆ

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್,ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ ಆನಂದ್,ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಸಚಿವರ ಬೆಂಬಲಿಗರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...