ಉತ್ತರ ಕನ್ನಡ: ನಾಳೆ ರಾಜ್ಯದ್ಯಾಂತ ಮೆಡಿಕಲ್ ಶಾಪ್‌ಗಳ ಮುಷ್ಕರಕ್ಕೆ ಕರೆ ನೀಡಲಾಗಿದ್ದರೂ ಸಹ, ಸಾರ್ವಜನಿಕರ ತುರ್ತು ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾ ಔಷಧ ನಿಯಂತ್ರಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಮುಷ್ಕರದ ನಡುವೆಯೂ ಜಿಲ್ಲೆಯ ಪ್ರಮುಖ ಕಡೆಗಳಲ್ಲಿ ಔಷಧಿಗಳು ಲಭ್ಯವಿರಲಿವೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದಾದ್ಯಂತ ಔಷಧ ವ್ಯಾಪಾರಿಗಳು ಪ್ರತಿಭಟನೆಗೆ ಮುಂದಾಗಿದ್ದರೂ, ಜಿಲ್ಲೆಯಲ್ಲಿರುವ ಅಪೋಲೋ ಫಾರ್ಮಸಿ, ಮೆಡ್‌ಪ್ಲಸ್ ಮತ್ತು ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಇದರೊಂದಿಗೆ ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಹೊಂದಿಕೊಂಡಿರುವ ಮೆಡಿಕಲ್ ಶಾಪ್‌ಗಳು ಸಂಪೂರ್ಣವಾಗಿ ತೆರೆದಿರಲಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬುಡಕಟ್ಟು ಜನರ ಮನೆಬಾಗಿಲಿಗೆ ಸರ್ಕಾರದ ಸೌಲಭ್ಯ; ಜನ್ ಭಾಗೀದಾರ್ ಅಭಿಯಾನ ಆರಂಭ
ಹೀಗಾಗಿ ಸಾರ್ವಜನಿಕರು ಹಾಗೂ ರೋಗಿಗಳು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ಹತ್ತಿರದ ಆಸ್ಪತ್ರೆಗಳ ಫಾರ್ಮಸಿಗಳು ಅಥವಾ ನಿರಂತರ ಸೇವೆ ಒದಗಿಸುವ ಪ್ರಮುಖ ನೆಟ್‌ವರ್ಕ್ ಮೆಡಿಕಲ್ ಸ್ಟೋರ್‌ಗಳನ್ನು ಸಂಪರ್ಕಿಸಿ ಔಷಧಿಗಳನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಔಷಧ ನಿಯಂತ್ರಕರು ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.




