ಎಲ್ಲಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲು ರಾಷ್ಟ್ರೀಯ ಮಟ್ಟದಲ್ಲಿ ತೀರ್ಮಾನಿಸಲಾಗಿದೆ

Date:

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು,ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದು ರಾಜ್ಯದ ಜನತೆಗೆ ಸಂತೋಷದ ಸಂಗತಿಯಾಗಿದ್ದು,ಇದು ಜೆಡಿಎಸ್ ಕಾರ್ಯಕರ್ತರಿಗೂ ಹೊಸ ಉತ್ಸಾಹವನ್ನು ತುಂಬಿದೆ. ಇದೇ ರೀತಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿಯೂ ಸುಧಾರಣೆ ಕಂಡುಬಂದಿದೆ.

ಇತ್ತೀಚೆಗೆ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಕೆಲವರು ತಪ್ಪು ಪ್ರಚಾರ ನಡೆಸಿ,“ಜೆಡಿಎಸ್ ಪಕ್ಷ ಮುಗಿದಿದೆ” ಎಂದು ಅಪ್ರಚಾರ ಮಾಡಿದ್ದರು.ಆದರೆ ಈಗ ಇಬ್ಬರು ನಾಯಕರೂ ಸಂಪೂರ್ಣ ಗುಣಮುಖರಾಗಿ ಜನರ ಮಧ್ಯೆ ಸಕ್ರಿಯರಾಗಿದ್ದು,ಇದು ಆ ವಿರೋಧಿಗಳಿಗೆ ಸ್ಪಷ್ಟವಾದ ಉತ್ತರವಾಗಿದೆ ಎಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಹೇಳಿದ್ದಾರೆ.

ಅವರು ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ದೇವೇಗೌಡ ಹಾಗೂ ಕುಮಾರಸ್ವಾಮಿ ಇಬ್ಬರೂ ರಾಜ್ಯದ ಜನರ ಸೇವೆಗೆ ಸದಾ ತೊಡಗಿಸಿಕೊಂಡಿರುವ ನಾಯಕರಾಗಿದ್ದಾರೆ.ಅವರ ಆರೋಗ್ಯ ಸುಧಾರಣೆ ರಾಜ್ಯದ ರಾಜಕೀಯಕ್ಕೂ ಹೊಸ ಚೈತನ್ಯ ತಂದಿದೆ.2028ರಲ್ಲಿ ಮತ್ತೆ ಕುಮಾರ ಅಣ್ಣರನ್ನು ಅಧಿಕಾರಕ್ಕೆ ತರಬೇಕೆಂಬುದು ಜೆಡಿಎಸ್ ಪಕ್ಷದ ಸಂಕಲ್ಪ ವಾಗಿದೆ,2028ರ ಚುನಾವಣೆಯಲ್ಲಿ ಖಂಡಿತವಾಗಿಯೂ ಎನ್‌ಡಿಎ ಮೈತ್ರಿ ಅಧಿಕಾರಕ್ಕೆ ಬರಲಿದೆ.
ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ವಿಶ್ವಾಸ ನಮ್ಮಲ್ಲಿದೆ.

ಜೆಡಿಎಸ್ ಸ್ಥಾಪನೆಯ 25ನೇ ವರ್ಷದ ರಾಜ್ಯಮಟ್ಟದ ಕಾರ್ಯಕ್ರಮವನ್ನು ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಆಯೋಜಿಸಲು ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಮೊನ್ನೆ ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ. ಈ ಸಭೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಬಗ್ಗೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಿದ್ಧತೆ ಕುರಿತು ಚರ್ಚೆ ನಡೆದಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕಠಾರಿಪಾಳ್ಯದಲ್ಲಿ 19 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ

- Advertisement -

ಇನ್ನೂ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಉತ್ತಮ ಪ್ರತಿಕ್ರಿಯೆ ಪಡೆದಿದ್ದು,ಅದನ್ನು ಇನ್ನಷ್ಟು ಚುರುಕುಗೊಳಿಸಲು ಯೋಜನೆ ರೂಪಿಸಲು ಸಭೆಯಲ್ಲಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲು ರಾಷ್ಟ್ರೀಯ ಮಟ್ಟದಲ್ಲಿ ತೀರ್ಮಾನಿಸಲಾಗಿದೆ 2028ರ ವಿಧಾನಸಭೆ ಚುನಾವಣೆಯನ್ನೂ ಮೈತ್ರಿ ಆಧಾರಿತವಾಗಿ ಎದುರಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...