ಎಸ್ಟಿಗೆ ಬಲಿಷ್ಠ ಜಾತಿಗಳ ಸೇರ್ಪಡೆ ವಾಲ್ಮೀಕಿ ನಾಯಕ ಸಂಘದಿಂದ ಬೃಹತ್ ಪ್ರತಿಭಟನೆ

Date:

ಕೋಲಾರ: ಪರಿಶಿಷ್ಟ ಪಂಗಡಕ್ಕೆ ಬಲಿಷ್ಠ ಜಾತಿಗಳನ್ನು ಸೇರಿಸಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

- Advertisement -

ನಗರದ ಎಸ್.ಎನ್.ಆರ್. ಜಿಲ್ಲಾಸ್ಪತ್ರೆ ಮುಂಭಾಗ ಆರಂಭಗೊಂಡ ರ‍್ಯಾಲಿಯು ಎಂಜಿ ರಸ್ತೆ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಮೆಕ್ಕೆ ವೃತ್ತಕ್ಕೆ ತೆರಳಿತು. ಅಲ್ಲಿ ಸುಮಾರು ೧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು. ರಸ್ತೆ ತಡೆಯಿಂದಾಗಿ ವಿವಿಧ ವಾಹನಗಳ ಸವಾರರು ಪ್ರತಿಭಟನಾಕಾರರೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಳಿಕ ಉಪ ವಿಭಾಗಾಧಿಕಾರಿ ಡಾ.ಎಚ್.ಪಿ.ಎಸ್. ಮೈತ್ರಿ ಸ್ಥಳಕ್ಕಾಗಮಿಸಿದರು. ಈ ವೇಳೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡ ಕೆ.ಆನಂದ್ ಕುಮಾರ್ ನಮ್ಮ ಸಮುದಾಯವು ಸಾಕಷ್ಟು ಹಿಂದೆ ಉಳಿದಿದ್ದು, ಹೀಗಿರುವ ಸಂದರ್ಭದಲ್ಲಿ ಬಲಿಷ್ಠ ಜಾತಿಗಳನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವುದರಿಂದ ಮತ್ತಷ್ಟು ಹೊಡೆತ ಬಿದ್ದಂತಾಗುತ್ತದೆ. ಹೀಗಾಗಿ ವಿವಿಧ ಜಾತಿಗಳನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವುದನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿದರು.

ಇನ್ನು ಕೋಲಾರದ ವಾಲ್ಮೀಕಿ ಭವನದ ಬಳಿ ಜಾಗ ಒತ್ತುವರಿಯಾಗಿದ್ದು, ಕೂಡಲೇ ತೆರವುಗೊಳಿಸಿ ಸಮುದಾಯ ಭವನಕ್ಕೆ ಸೇರಿದ ಆಸ್ತಿ ಉಳಿಸಬೇಕೆಂದರು. ಆಗ ಮಾತನಾಡಿದ ಉಪವಿಭಾಗಾಧಿಕಾರಿ, ಜಾಗದ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಅದರ ಬಗ್ಗೆ ಮಾತನಾಡುವುದು ಬೇಡ. ಉಳಿದ ಬೇಡಿಕೆಗಳ ಈಡೇರಿಕೆ ಕುರಿತ ಮನವಿಯನ್ನು ಹಿರಿಯ ಅಧಿಕಾರಿಗಳ ಮುಖೇನ ಸರಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.

ಇದನ್ನು ಓದಿದ್ದೀರಾ..? ಕೋಲಾರ | ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ 3 ದಿನಗಳ ಬಳಿಕ ಶವವಾಗಿ ಪತ್ತೆ

ಪ್ರತಿಭಟನೆಯಲ್ಲಿ ವಾಲ್ಮೀಕಿ ಸ್ವಾಭಿಮಾನಿ ಸೇನೆ ರಾಜ್ಯ ಅಧ್ಯಕ್ಷ ಚಳುವಳಿ ನಾಗರಾಜ್, ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ಕೆ.ಜಿ.ಹಳ್ಳಿ ನಾಗರಾಜ್, ಮುಖಂಡರಾದ ಹುಂಗೇನಹಳ್ಳಿ ವೆಂಕಟೇಶ್, ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಬೆಡಶೆಟ್ಟಿಹಳ್ಳಿ ರಮೇಶ್, ಮುರಳಿ, ನರಸಾಪುರ ನಾಗರಾಜ್, ಅಶ್ವಥ್, ಶ್ಯಾಮ್ ನಾಯಕ್ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...